ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಧ್ಯಂತರ ಚುನಾವಣೆ: ದೇವೇಗೌಡರ ಹೇಳಿಕೆಗೆ ಡಿಕೆಶಿ ಏನಂದ್ರು?

|
Google Oneindia Kannada News

Recommended Video

ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ನಡೆಯುವುದು ಗ್ಯಾರಂಟಿ | Oneindia Kannada

ಬೆಂಗಳೂರು, ಜೂನ್ 21: ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ನಡೆಯುವುದು ಗ್ಯಾರಂಟಿ ಎಂಬ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಹೇಳಿಕೆಗೆ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

"ಸಮ್ಮಿಶ್ರ ಸರ್ಕಾರ ಸದೃಢವಾಗಿದೆ, ಸುಭದ್ರವಾಗಿದೆ. ದೇವೇಗೌಡರು ನೀಡಿದ ಹೇಳಿಕೆ ಅವರ ವೈಯಕ್ತಿಕವಾದುದು. ಈ ಬಗ್ಗೆ ನಮ್ಮ ಪಕ್ಷದಿಂದ ಉಪಮುಖ್ಯಮಂತ್ರಿಗಳು ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ನಾನು ಹೇಳುವಂಥದ್ದು ಏನೂ ಇಲ್ಲ" ಎಂದು ಜಲಸಂಪನ್ಮೂಲ ಸಚಿವರು ಆಗಿರುವ, ಕನಕಪುರ ಶಾಸಕ ಡಿಕೆ ಶಿವಕುಮಾರ್ ಹೇಳಿದರು.

ಮಧ್ಯಂತರ ಚುನಾವಣೆ ಗ್ಯಾರಂಟಿ ಎಂದು ದೇವೇಗೌಡರು ಹೇಳಿದ್ದೇಕೆ?ಮಧ್ಯಂತರ ಚುನಾವಣೆ ಗ್ಯಾರಂಟಿ ಎಂದು ದೇವೇಗೌಡರು ಹೇಳಿದ್ದೇಕೆ?

"ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿಯವರು ಅದನ್ನು ಬೀಳಿಸುವ ಯತ್ ಮಾಡುತ್ತಲೇ ಬಂದಿದ್ದಾರೆ. ಇತ್ತೀಚೆಗೊಮ್ಮೆ ಬಿ ಎಸ್ ಯಡಿಯೂರಪ್ಪನವರು ತಾವು ಸರ್ಕಾರ ಬೀಳುವ ಪ್ರಯತ್ನ ಮಾಡುವುದಿಲ್ಲ ಎಂದಿದ್ದರು. ಅವರಿಗೂ ಗೊತ್ತಾಗಿದೆ ನಮ್ಮ ಸರ್ಕಾರ ಸುಭದ್ರವಾಗಿದೆ ಎಂಬುದು" ಎಂದು ಡಿಕೆಶಿ ಹೇಳಿದರು.

HD Deve Gowdas statement on mid term polls in Karnataka, DK Shivakumars reaction

ಮೈತ್ರಿ ಸರ್ಕಾರ ಮಾಡಲು ನಾನು ಹೇಳಿರಲಿಲ್ಲ: ದೇವೇಗೌಡ ಅಸಮಾಧಾನಮೈತ್ರಿ ಸರ್ಕಾರ ಮಾಡಲು ನಾನು ಹೇಳಿರಲಿಲ್ಲ: ದೇವೇಗೌಡ ಅಸಮಾಧಾನ

ಶಸುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು, "ಈ ಸರ್ಕಾರ ಎಷ್ಟು ದಿನ ಇರುತ್ತದೆ ಎಂಬುದು ನನಗೆ ಗೊತ್ತಿಲ್ಲ. ಕಳೆದ ಎರಡು ತಿಂಗಳುಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡಿದರೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಅನಿವಾರ್ಯ ಎನ್ನಿಸುತ್ತಿದೆ. ಜನರಿಗೆ ಎಲ್ಲವೂ ಅರ್ಥವಾಗುತ್ತದೆ. ಮುಂದೇನಾಗುತ್ತದೆ ಎಂಬುದನ್ನು ನೋಡೋಣ" ಎಂದಿದ್ದರು. ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು.

English summary
Karnataka Water resources minister DK Shivakumar on JDS supremo HD Devegowda's remark on mid-term polls said, the coalition government is safe and strong. HD Deve Gowda's opinion is his personal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X