ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಕೀಲರಿಗೆ ದೇವೇಗೌಡ ಬೆಂಬಲ, ಮೋದಿ ಜತೆ ಚರ್ಚಿಸುವುದಾಗಿ ಭರವಸೆ

By Manjunatha
|
Google Oneindia Kannada News

ಬೆಂಗಳೂರು, ಫೆಬ್ರವರಿ 06: ಹೈಕೋರ್ಟ್‌ನಲ್ಲಿ ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆ ಭರ್ತಿಗೆ ಒತ್ತಾಯಿಸಿ ಬೆಂಗಳೂರು ವಕೀಲರ ಸಂಘ ನಡೆಸುತ್ತಿರುವ ಸತ್ಯಾಗ್ರಹಕ್ಕೆ ಮಾಜಿ ಪ್ರಧಾನಿ ದೇವೇಗೌಡ ಅವರು ಬೆಂಬಲ ಸೂಚಿಸಿದ್ದು, ಧರಣಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತನಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನ್ಯಾಯಮೂರ್ತಿಗಳ ಹುದ್ದೆ ಭರ್ತಿ ವಿಳಂಬದ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು 'ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕಕ್ಷಿದಾರರು ಮತ್ತು ವಕೀಲರು ರೊಚ್ಚಿಗೇಳುವ ಕಾಲ ದೂರವಿಲ್ಲ" ಎಂದರು.

ಸುಪ್ರೀಂ ಕೋರ್ಟ್, ಹೈಕೋರ್ಟ್ ನ್ಯಾಯಮೂರ್ತಿಗಳ ಸಂಬಳದಲ್ಲಿ ಭಾರಿ ಏರಿಕೆಸುಪ್ರೀಂ ಕೋರ್ಟ್, ಹೈಕೋರ್ಟ್ ನ್ಯಾಯಮೂರ್ತಿಗಳ ಸಂಬಳದಲ್ಲಿ ಭಾರಿ ಏರಿಕೆ

'ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಾಗೂ ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಹಿರಿಯ ಹಾಗೂ ಕಿರಿಯ ವಕೀಲರು ಸರಣಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವುದು ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು" ಎಂದು ಹೇಳಿದರು.

HD Deve Gowda will talk about filling Judge posts with Prime minister and President

ಇಂದು ಅಥವಾ ನಾಳೆ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ರಮಾನಾಥ ಕೋವಿಂದ್ ಅವರನ್ನು ಭೇಟಿಯಾಗಿ ವಿಷಯದ ಗಮನ ಸೆಳೆಯುವುದಾಗಿ ಪ್ರತಿಭಟನಾಕಾರರಿಗೆ ಭರವಸೆಯನ್ನು ನೀಡಿದರು.

ಪ್ರತಿಭಟನಾ ಸ್ಥಳಕ್ಕೆ ನಿನ್ನೆ ಕೇಂದ್ರ ಸಚಿವ ಸದಾನಂದಗೌಡ ಭೇಟಿ ನೀಡಿದ್ದಾರೆ ಈ ವಿಷಯದಲ್ಲಿ ಯಾವುದೇ ರಾಜಕೀಯ ಲಾಭಗಳನ್ನು ನಾನು ನಿರೀಕ್ಷಿಸುವುದಿಲ್ಲ. ಸಮಸ್ಯೆಯನ್ನು ನಾನೇ ಬಗೆಹರಿಸಿದೆ ಎಂದು ಯಾರು ಬೇಕಾದರೂ ಬೆನ್ನು ತಟ್ಟಿಕೊಳ್ಳಲಿ. ನಾನಂತೂ ಈ ದೇಶದ ಮಾಜಿ ಪ್ರಧಾನಿಯಾಗಿ, ಸಂಸದನಾಗಿ ಕಕ್ಷಿದಾರರಿಗೆ ಆಗುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ವಿವರವಾಗಿ ಸಮಸ್ಯೆಯನ್ನು ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತೇನೆ" ಎಂದು ಹೇಳಿದರು.

ಮೈಸೂರಿನಲ್ಲಿ ಪೊಲೀಸರು, ವಕೀಲರ ನಡುವೆ ಜಿದ್ದಾಜಿದ್ದಿಮೈಸೂರಿನಲ್ಲಿ ಪೊಲೀಸರು, ವಕೀಲರ ನಡುವೆ ಜಿದ್ದಾಜಿದ್ದಿ

'ರಾಷ್ಟ್ರಪತಿ ರಾಮನಾಥ ಕೋವಿಂದ್ ನನಗೆ ಮುರಾರ್ಜಿ ದೇಸಾಯಿ ಅವರ ಕಾಲದಿಂದಲೂ ಆಪ್ತ ಸ್ನೇಹಿತ. ನನ್ನ ಬಗ್ಗೆ ಅವರಿಗೆ ವೈಯುಕ್ತಿಕವಾಗಿ ಒಳ್ಳೆಯ ಅಭಿಪ್ರಾಯವಿದೆ. ನಾನು ಅವರಿಗೆ ಸಮಸ್ಯೆ ಬಗ್ಗೆ ಮನವಿ ಮಾಡುತ್ತೇನೆ. ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ' ಎಂದರು.

English summary
Former Prime minister HD Deve Gowda said that He will talk to the President Ram Nath kovind and Prime minister Narendra Modi about lack of Judges in courts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X