ದೇವೇಗೌಡರ ಬಲಗಾಲಿನ ಮಂಡಿ ಟ್ವಿಸ್ಟ್: ಅಪಾಯವಿಲ್ಲ ಎಂದ ವೈದ್ಯರು
ಬೆಂಗಳೂರು, ಫೆಬ್ರವರಿ 2: ಬಾತ್‌ರೂಮಿನಲ್ಲಿ ಕಾಲು ಜಾರಿ ಬಿದ್ದು ಪೆಟ್ಟುಮಾಡಿಕೊಂಡಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ದೇಹಕ್ಕೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ದೇವೇಗೌಡ ಅವರು ತಮ್ಮ ನಿವಾಸಕ್ಕೆ ಮರಳಿದ್ದಾರೆ.
ಬಿದ್ದ ರಭಸಕ್ಕೆ ದೇವೇಗೌಡ ಅವರ ಬಲಗಾಲಿನ ಮಂಡಿ ಸ್ವಲ್ಪ ಟ್ವಿಸ್ಟ್ ಆಗಿತ್ತು. ಎಂಆರ್‌ಐ ಸ್ಕ್ಯಾನ್ ಮಾಡಲಾಗಿದೆ. ಕಾಲಿನ ಮೂಳೆ ಮುರಿತ ಉಂಟಾಗಿಲ್ಲ. ಹೀಗಾಗಿ ಯಾವುದೇ ಅಪಾಯವಿಲ್ಲ ಎಂದು ಜಯದೇವ ಆಸ್ಪತ್ರೆಯ ಡಾ. ಮಂಜುನಾಥ್ ತಿಳಿಸಿದ್ದಾರೆ.
ದೇವೇಗೌಡ ಅವರು ಇನ್ನು 3-4 ದಿನ ಮನೆಯಲ್ಲಿಯೇ ವಿಶ್ರಾಂತಿ ಪಡೆದುಕೊಳ್ಳುವ ಅವಶ್ಯಕತೆ ಇದೆ ಎಂದೂ ಅವರು ವಿವರಿಸಿದ್ದಾರೆ.

ದೇವೇಗೌಡ ಅವರು ಬೆಂಗಳೂರಿನ ಪದ್ಮನಾಭನಗರದ ನಿವಾಸದ ಬಾತ್‌ರೂಮ್‌ನಲ್ಲಿ ಶನಿವಾರ ಬೆಳಿಗ್ಗೆ ಕಾಲು ಜಾರಿ ಬಿದ್ದಿದ್ದರು. ಅವರಿಗೆ ವೈದ್ಯರು ಮನೆಯಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಜಯದೇವ ಆಸ್ಪತ್ರೆಗೆ ಕರೆದೊಯ್ದಿದ್ದರು.












Click it and Unblock the Notifications