Honey Trap: ಕುಮಾರಸ್ವಾಮಿ, ಮತ್ತವರ ಬೆಂಬಲಿಗರ ಟಾರ್ಗೆಟ್ ಮಾಡಿತಾ ಕಾಂಗ್ರೆಸ್‌! ಬೆಳವಣಿಗೆ ಬಿಚ್ಚಿಟ್ಟ HDK

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿ ಟ್ರ್ಯಾಪ್, ಸ್ಟಿಂಗ್ ಆಪರೇಷನ್‌ ಸದ್ದು ಜೋರಾಗಿ ಕೇಳಿ ಬರುತ್ತಿದೆ. ಸಚಿವರ ಹೆಸರಿನ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಥಳುಕು ಹಾಕಿಕೊಳ್ಳುತ್ತಿದ್ದಂತೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಇದೀಗ ಕಾಂಗ್ರೆಸ್ ನನ್ನ ಮತ್ತು ನನ್ನ ಜೊತೆಗಿರುವವರನ್ನು ಟಾರ್ಗೆಟ್ ಮಾಡಿದೆ ಎಂದು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಈವರೆಗಿನ ಬೆಳವಣಿಗೆ ಕುರಿತು ಒಂದಷ್ಟು ಮಾಹಿತಿ ಹಂಚಿಕೊಂಡಿದ್ದಾರೆ.

ಬುಧವಾರ ಎಕ್ಸ್ ಪೋಸ್ಟ್ ಮಾಡಿರುವ ಎಚ್‌.ಡಿ. ಕುಮಾರಸ್ವಾಮಿ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಎಂಟು ವರ್ಷಗಳಿಗೂ ಹೆಚ್ಚುಕಾಲ ರಾಜ್ಯವನ್ನು ಆಳಿದ ಮಾಜಿ ಮುಖ್ಯಮಂತ್ರಿ ವರ್ಚಸ್ಸಿಗೆ ಹನಿಟ್ರ್ಯಾಪ್ ಹೆಸರಿನಲ್ಲಿ ಮಸಿ ಬಳಿಯಲು ವ್ಯವಸ್ಥಿತ, ಸಂಘಟಿತ ಷಡ್ಯಂತ್ರ ರೂಪಿಸಲಾಗಿದೆ. ಇದೆಲ್ಲವನ್ನು ಪ್ರಶ್ನಿಸಿದ್ದಕ್ಕೆ ನನ್ನನ್ನು ಹಾಗೂ ನನ್ನ ಜೊತೆಗಿರುವ ಹುಡುಗರನ್ನು ಟಾರ್ಗೆಟ್ ಮಾಡುತ್ತಿರುವುದು ಲಜ್ಜೆಗೆಡಿತನ ಎಂದು ಅವರು ಕಿಡಿ ಕಾರಿದ್ದಾರೆ.

HD Kumaraswamy

ಜೆಡಿಎಸ್ ಕೆಲಸಗಾರ ಪೊಲೀಸ್ ವಶಕ್ಕೆ

ಮುಂದುವರಿದು, ಯಾವುದೇ ಪ್ರಕರಣ ದಾಖಲಿಸದೇ ಇಂದು ಬೆಳಗ್ಗೆ ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಶಂಕರ್ ಎಂಬ ಯುವಕನನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ನಂತರ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪಕ್ಷದ ಕಾನೂನು ವಿಭಾಗ ದೂರು ದಾಖಲಿಸಿದ ಮೇಲೆ ಆ ಯುವಕನಿಂದ ಆತನ ಪತ್ನಿಗೆ ಕರೆ ಮಾಡಿಸಿ, "ಸಿಸಿಬಿ ಪೊಲೀಸರು ನನ್ನನ್ನು ಕರೆದುಕೊಂಡು ಹೋಗಿದ್ದಾರೆ" ಎಂದಷ್ಟೇ ಹೇಳಿಸಿ ಕರೆ ಕಟ್ ಮಾಡಿದ್ದೀರಿ!. ಸಾಕು ಮಾಡಿ ನಿಮ್ಮ ಕಪಟ ನಾಟಕ. ಯಾವ ಆಧಾರದ ಮೇಲೆ ಆತನನ್ನು ಕರೆದುಕೊಂಡು ಹೋಗಿದ್ದೀರಿ? ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಆರೋಪಿಯನ್ನು ಬಿಟ್ಟು ನನ್ನ ಹುಡುಗರ ಟಾರ್ಗೆಟ್

ಸಿದ್ದರಾಮಯ್ಯ ಅವರ ವಿರುದ್ಧ ಸ್ಟಿಂಗ್ ಮಾಡಿ, ದೃಶ್ಯಗಳನ್ನು ಚಿತ್ರೀಕರಿಸಿ ಅವರ ಚಾರಿತ್ರ್ಯಹರಣಕ್ಕೆ ಕಾರಣನಾದ ನೀಚನನ್ನು ಬಿಟ್ಟಿದ್ದಾರೆ. ಆ ನೀಚತನವನ್ನು ಪ್ರಶ್ನಿಸಿದ ನನ್ನನ್ನು ನೇರವಾಗಿ ಎದುರಿಸಲಾಗದೆ ನನ್ನ ಹುಡುಗರ ಬೆನ್ನು ಬಿದ್ದಿದ್ದೀರಿ. ಎಲ್ಲವನ್ನೂ ರೆಕಾರ್ಡ್ ಮಾಡಿದ 'ಮಾಧ್ಯಮದ ಮುಸುಕು' ಹಾಕಿಕೊಂಡಿರುವ ಆ 'ಸಂಚುಕೋರ' ರಾಜಾರೋಷವಾಗಿ ತಿರುಗಾಡುತ್ತಿದ್ದರೆ, ಆ ನೈಜ ಅಪರಾಧಿಯನ್ನು ಬಿಟ್ಟು ನಮ್ಮ ಸೋಶಿಯಲ್ ಮೀಡಿಯಾ ಹುಡುಗರ ಮೇಲೆ ಬಿದ್ದಿದ್ದೀರಿ ಎಂದು ದೂರಿದರು.

ನನ್ನಲ್ಲಿಗೆ ಪೊಲೀಸರನ್ನು ಕಳುಹಿಸಿ: ಎಚ್‌ಡಿಕೆ ಸವಾಲು

ಪ್ರಶ್ನೆ ಮಾಡಿದ್ದು ನಾನು. ಸಿಬಿಐ ತನಿಖೆಗೆ ಒತ್ತಾಯಿಸಿದ್ದು ನಾನು. ಧೈರ್ಯವಿದ್ದರೆ ನನ್ನ ಬಳಿಗೇ ನಿಮ್ಮ ಪೊಲೀಸರನ್ನು ಕಳಿಸಬೇಕಿತ್ತು, ಅಮಾಯಕರ ಮೇಲೇನು ನಿಮ್ಮ ಪ್ರತಾಪವೇ ಎಂದು ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.

ನಾನು ಸಹಿಸಿಕೊಳ್ಳುವುದಿಲ್ಲ!

ಅಷ್ಟೇ ಅಲ್ಲ, ಈಗ ನಮ್ಮ ಸೋಶಿಯಲ್ ಮೀಡಿಯಾ ತಂಡದ ಮೋಹನ್ ಎಂಬ ಇನ್ನೊಬ್ಬ ಹುಡುಗನ ಮನೆ ಮುಂದೆ ಹೋಗಿ ಪೊಲೀಸರು ಗಲಾಟೆ ಮಾಡುತ್ತಿದ್ದಾರೆ. ಅವರ ಕುಟುಂಬದವರಿಗೆ ಕಿರುಕುಳ ಕೊಡುತ್ತಿದ್ದಾರೆ ಎಂಬ ಮಾಹಿತಿ ನನಗೆ ಬಂದಿದೆ. ಇದೆಲ್ಲವನ್ನೂ ಸಹಿಸುವ ಪ್ರಶ್ನೆಯೇ ಇಲ್ಲ. ನಮ್ಮವರಿಗೆ ಹೀಗೆ ಸುಖಾಸುಮ್ಮನೆ ಕಿರುಕುಳ ಕೊಟ್ಟರೆ ಕೈಕಟ್ಟಿ ಕೂರುವುದಿಲ್ಲ ನಾವು. ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ಎದುರಿಸಲು ಸಿದ್ಧರಿದ್ದೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+