ಎಚ್‌ಡಿ ಕುಮಾರಸ್ವಾಮಿಗೆ ಅನಾರೋಗ್ಯ, ಜಯದೇವ ಆಸ್ಪತ್ರೆಗೆ ದಾಖಲು
ಬೆಂಗಳೂರು, ಡಿಸೆಂಬರ್ 4: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರಿಗೆ ತೀವ್ರ ಅನಾರೋಗ್ಯ ಕಾಣಿಸಿಕೊಂಡಿದ್ದು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ಜ್ವರ, ಕೆಮ್ಮಿನಿಂದ ಬಳಲುತ್ತಿರುವ ಅವರು ಬುಧವಾರ ಬೆಳಗ್ಗೆ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ 14 ದಿನಗಳಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ದಿನಕ್ಕೆ ಎರೆಡು ಕ್ಷೇತ್ರಗಳಂತೆ ಪ್ರಚಾರ ಮಾಡುತ್ತಿದ್ದರು.
ಹವಾಮಾನ ವೈಪರಿತ್ಯ, ಚುನಾವಣಾ ಒತ್ತಡದಿಂದಾಗಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಕೆಮ್ಮು ಕೂಡ ಇತ್ತು ಈಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಹಿಂದೆ ಇಸ್ರೇಲ್‌ಗೆ ತೆರಳಿದ್ದ ಸಂದರ್ಭದಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಬಳಿಕ ಬೆಂಗಳೂರಿಗೆ ಕರೆತಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರಿಗೆ ಹೃದಯ ಸಂಬಂಧಿ ತೊಂದರೆಯೂ ಇರುವ ಕಾರಣ ಪ್ರಚಾರದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಪಟಾಕಿ ಹೊಡೆಯಬೇಡಿ ಎಂದು ಮನವಿಯನ್ನೂ ಕೂಡ ಮಾಡಿದ್ದರು.
ಒಟ್ಟು 15 ಕ್ಷೇತ್ರಗಳಿಗೆ ಡಿಸೆಂಬರ್ 5 ರಂದು ಉಪ ಚುನಾವಣೆ ನಡೆಯಲಿದ್ದು, ಡಿಸೆಂಬರ್ 9ರಂದು ಫಲಿತಾಂಶ ಹೊರಬೀಳಲಿದೆ.
ಹಿರೆಕೆರೂರು ಹಾಗೂ ಹೊಸಕೋಟೆ ಹೊರತುಪಡಿಸಿ ಉಳಿದೆಲ್ಲಾ ಕಡೆ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕುಮಾರಸ್ವಾಮಿ ವಾಪಸಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications