ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯಗೆ ಕೊರೊನಾ: ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು

|
Google Oneindia Kannada News

ಬೆಂಗಳೂರು, ಆಗಸ್ಟ್ 04: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸೋಮವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದಾರೆ.

Recommended Video

ಒಂದು ದಿನ ಮುಂಚಿತವಾಗಿಯೇ ಅಯೋಧ್ಯೆಗೆ ಭೇಟಿ ಕೊಟ್ಟ ಯೋಗಿ | Oneindia Kannada

ಸಿದ್ದರಾಮಯ್ಯ ಅವರಿಗೆ ಕೊವಿಡ್ ತಗುಲಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. 'ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೂ ತಗುಲಿದೆ ಕೊರೊನಾವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೂ ತಗುಲಿದೆ ಕೊರೊನಾ

ಕುಮಾರಸ್ವಾಮಿ ಮಾತ್ರವಲ್ಲ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಸೇರಿದಂತೆ ಹಲವು ರಾಜಕೀಯ ನಾಯಕರು ಸಿದ್ದರಾಮಯ್ಯ ಚೇತರಿಕೆಗೆ ಹಾರೈಸಿದ್ದಾರೆ. ಮುಂದೆ ಓದಿ....

ಜನಪ್ರತಿನಿಧಿಗಳು ಎಚ್ಚರ ವಹಿಸಿ

'ಸಾರ್ವಜನಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜನಪ್ರತಿನಿಧಿಗಳು ಅತಿ ಹೆಚ್ಚಿನ ಮುಂಜಾಗ್ರತ ಕ್ರಮಗಳನ್ನು ಚಾಚೂತಪ್ಪದೆ ಪಾಲಿಸುವಂತೆ ಮನವಿ ಮಾಡುತ್ತೇನೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. 'ಕೊರೋನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು, ಶಿಸ್ತುಬದ್ಧ ಜೀವನ ಅಳವಡಿಸಿಕೊಳ್ಳುವ ಮೂಲಕ ಅಮೂಲ್ಯವಾದ ಜೀವ ಮತ್ತು ಜೀವನವನ್ನು ರಕ್ಷಿಸಿಕೊಳ್ಳಬೇಕು ಎಂದು ವಿನಮ್ರವಾಗಿ ಮನವಿ ಮಾಡುತ್ತೇನೆ' ಎಂದು ಜನರಿಗೂ ವಿನಂತಿಸಿಕೊಂಡಿದ್ದಾರೆ.

ವೈದ್ಯರ ಜೊತೆ ಸಂಪರ್ಕದಲ್ಲಿದ್ದೇನೆ

ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್ ಸಹ ಟ್ವೀಟ್ ಮಾಡಿದ್ದಾರೆ. 'ವಿಪಕ್ಷನಾಯರು, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ತಿಳಿದು ಬಂದಿದೆ. ರಾಜ್ಯ ಕಂಡ ಆದರ್ಶ ರಾಜಕಾರಣಿ ಅವರು. ಅವರಿಗೆ ಪಾಸಿಟಿವ್ ಬಂದಿರುವುದು ನನಗೆ ನೋವಾಗಿದೆ. ಆದಷ್ಟು ಬೇಗನೆ ಅವರು ಚೇತರಿಸಿಕೊಂಡು ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದಿದ್ದಾರೆ. ''ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರ ಆರೋಗ್ಯದಲ್ಲಿ ಸ್ಥಿರವಾಗಿದೆ. ರಾಜ್ಯದ ಜನ ಆತಂಕ ಪಡುವ ಅಗತ್ಯವಿಲ್ಲ. ಸಿಎಂ ಬಿಎಸ್‌ವೈ ಮತ್ತು ಮಾಜಿ ಸಿಎಂ ಬೇಗ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ'' ಎಂದು ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಟ್ವೀಟ್

ಡಿಕೆ ಶಿವಕುಮಾರ್ ಟ್ವೀಟ್

-ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯ ಆದಷ್ಟೂ ಬೇಗ ಚೇತರಿಕೆ ಕಂಡು ಬರಲಿ ಎಂದು ಪ್ರಾರ್ಥಿಸಿದ್ದಾರೆ.

-ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹ ಸಿದ್ದರಾಮಯ್ಯ ಅವರ ಚೇತರಿಕೆ ಹಾರೈಸಿದ್ದಾರೆ.

- 'ಸಿದ್ದರಾಮಯ್ಯರವರಿಗೆ ಕೊರೋನಾ ಪಾಸಿಟಿವ್‌ ಬಂದಿದ್ದು, ಅವರು ಆದಷ್ಟು ಶೀಘ್ರದಲ್ಲಿ ಪೂರ್ಣಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ' ಎಂದು ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

- ಆರೋಗ್ಯ ಸಚಿವ ಶ್ರೀರಾಮುಲು ಸಹ ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರಿಗೆ ಹಾರೈಸಿದ್ದಾರೆ.

ಮಾಜಿ ಪ್ರಧಾನ ಮಂತ್ರಿ ಹಾರೈಕೆ

ಮಾಜಿ ಪ್ರಧಾನ ಮಂತ್ರಿ ಹಾರೈಕೆ

'ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರಿಗೆ ಕೊರೊನ ಸೋಂಕು ತಗುಲಿರುವುದು ಕೇಳಿ ಮನಸ್ಸಿಗೆ ಬಹಳ ನೋವುಂಟಾಯಿತು ಆದಷ್ಟು ಅವರು ಬೇಗ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೀನಿ' ಎಂದು ಎಚ್ ಡಿ ದೇವೇಗೌಡರು ಶುಭ ಹಾರೈಸಿದ್ದಾರೆ.

ಸಿಎಂ ಮತ್ತು ಮಾಜಿ ಸಿಎಂಗೆ ಕೊರೊನಾ!

ಸಿಎಂ ಮತ್ತು ಮಾಜಿ ಸಿಎಂಗೆ ಕೊರೊನಾ!

ಭಾನುವಾರ ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ತಗುಲಿತ್ತು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇದೀಗ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಹ ಅದೇ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

English summary
Siddaramaiah tested coronavirus positive: EX Cm hd kumaraswamy, dk shivakumar, dr sudhakar has wish that Siddaramaiah will be cured soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X