ಮೋದಿಗೆ ರಾಹುಲ್, ಕುಮಾರಸ್ವಾಮಿ, ಸಿದ್ದರಾಮಯ್ಯ ಶುಭ ಹಾರೈಕೆ
ಬೆಂಗಳೂರು, ಸೆಪ್ಟೆಂಬರ್ 17: ಇಂದು ತಮ್ಮ 68 ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕದ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳು ಶುಭಾಶಯ ಕೋರಿದ್ದಾರೆ.
ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ಸದಾ ಸಂತೋಷ ದೊರಕಲಿ ಎಂದು ಹಾರೈಸುತ್ತೇನೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Happy Birthday to our PM, Narendra Modi ji! Wishing him good health and happiness always.@narendramodi
— Rahul Gandhi (@RahulGandhi) September 17, 2018
'ದೇಶದ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತೇನೆ. ದೇವರು ತಮಗೆ ಆಯುಷ್ಯ, ಆರೋಗ್ಯವನ್ನು ಕರುಣಿಸಲಿ ಎಂದು ಹಾರೈಸುತ್ತೇನೆ' ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ದೇಶದ ಗೌರವಾನ್ವಿತ ಪ್ರಧಾನಮಂತ್ರಿಗಳಾದ @narendramodi ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತೇನೆ. ದೇವರು ತಮಗೆ ಆಯುಷ್ಯ, ಆರೋಗ್ಯವನ್ನು ಕರುಣಿಸಲಿ ಎಂದು ಹಾರೈಸುತ್ತೇನೆ.#HappyBdayPMModi
— H D Kumaraswamy (@hd_kumaraswamy) September 17, 2018
"ಜನ್ಮದಿನ ಶುಭಾಶಯಗಳು ನರೇಂದ್ರ ಮೋದಿ ಅವರೇ. ನಿಮಗೆ ಉತ್ತಮ ಆರೋಗ್ಯ, ದೀರ್ಘ ಆಯುಷ್ಯ ಮತ್ತು ಜನರಿಗೆ ನೀವು ನೀಡಿದ ಭರವಸೆಗಳನ್ನು ಈಡೇರಿಸುವ ಶಕ್ತಿ ಸಿಗಲಿ ಎಂದು ಈ ಸಂದರ್ಭದಲ್ಲಿ ಹಾರೈಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Happy birthday to PM @narendramodi. Wishing you good health, long life and strength to fulfill the promises given to the people.#HappyBdayPMModi
— Siddaramaiah (@siddaramaiah) September 17, 2018
ತಮ್ಮ ಲೋಕಸಭಾ ಕ್ಷೇತ್ರವಾದ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಇಂದು ನರೇಂದ್ರ ಮೋದಿಯವರು ಇಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಇಲ್ಲಿನ ಶಾಲಾ ಮಕ್ಕಳೊಂದಿಗೆ ಸಮಯ ಕಳೆಯಲಿದ್ದಾರೆ.












Click it and Unblock the Notifications