• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

'ಯಡಿಯೂರಪ್ಪ ಬೇಗ ಗುಣಮುಖರಾಗಿ': ಎಚ್‌ಡಿಕೆ, ಸಿದ್ದರಾಮಯ್ಯ ಟ್ವೀಟ್

|

ಬೆಂಗಳೂರು, ಆಗಸ್ಟ್ 03: ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ವೈರಸ್ ತಗುಲಿರುವುದು ಭಾನುವಾರ ಖಚಿತಪಟ್ಟಿದೆ. ಸ್ವತಃ ಸಿಎಂ ಈ ಬಗ್ಗೆ ಮಾಹಿತಿ ನೀಡಿದ್ದು, 'ರೋಗಲಕ್ಷಣಗಳು ಇಲ್ಲ, ಆದರೂ ಕೊವಿಡ್ ಪಾಸಿಟಿವ್ ಬಂದಿದೆ' ಎಂದು ಟ್ವೀಟ್ ಮಾಡಿದ್ದರು.

   BSYಗೆ ಕೊವಿಡ್ ಹಿನ್ನೆಲೆಯಲ್ಲಿ HD Kumaraswamy , Siddaramaiah ಶುಭಹಾರೈಕೆ | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   77 ವರ್ಷದ ಯಡಿಯೂರಪ್ಪ ಅವರು ಸೋಂಕಿನ ಭೀತಿಯ ನಡುವೆಯೂ ಅನೇಕ ಕಾರ್ಯಕ್ರಮಗಳಲ್ಲಿ ಭಾವಗಹಿಸಿ, ಕೊವಿಡ್ ವಿರುದ್ಧದ ಹೋರಾಟದಲ್ಲಿ ತೊಡಗಿಕೊಂಡಿದ್ದರು. ಈ ಕುರಿತು ಸಾರ್ವಜನಿಕ ವಲಯದಲ್ಲಿ ಸಿಎಂ ಬಗ್ಗೆ ಮೆಚ್ಚುಗೆ ಸಹ ವ್ಯಕ್ತವಾಗಿತ್ತು.

   ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಕೊರೊನಾವೈರಸ್ ಸೋಂಕು ದೃಢ

   ಆದರೆ, ಯಡಿಯೂರಪ್ಪ ಅವರಿಗೆ ಸೋಂಕು ತಗುಲಿರುವುದು ರಾಜಕೀಯ ವಲಯದಲ್ಲಿ ಬೇಸರಕ್ಕೆ ಕಾರಣವಾಗಿದೆ. ಆರೋಪ, ದ್ವೇಷ, ರಾಜಕೀಯವನ್ನೆಲ್ಲ ಪಕ್ಕಕ್ಕಿಟ್ಟು ಸಿಎಂ ಆದಷ್ಟೂ ಬೇಗ ಚೇತರಿಸಿಕೊಳ್ಳಲಿ ಎಂದು ಪಕ್ಷಾತೀತವಾಗಿ ಹಲವು ನಾಯಕರು ಶುಭ ಕೋರಿದ್ದಾರೆ. ಮುಂದೆ ಓದಿ.....

   ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

   ಎಚ್ ಡಿ ಕುಮಾರಸ್ವಾಮಿ

   ಎಚ್ ಡಿ ಕುಮಾರಸ್ವಾಮಿ

   'ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ'.

   ವಿಪಕ್ಷ ನಾಯಕ ಸಿದ್ದರಾಮಯ್ಯ

   ವಿಪಕ್ಷ ನಾಯಕ ಸಿದ್ದರಾಮಯ್ಯ

   'ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಶೀಘ್ರ ಕೊರೊನಾ ಸೋಂಕಿನ ಬಾಧೆಯಿಂದ ಮುಕ್ತರಾಗಿ ರಾಜ್ಯದ ಜನತೆಯ ಆರೋಗ್ಯ ರಕ್ಷಣೆಯೂ ಸೇರಿದಂತೆ ಆಡಳಿತಾತ್ಮಕ ಕಾರ್ಯದಲ್ಲಿ‌‌ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ'.

   ಶ್ರೀರಾಮುಲು

   ಶ್ರೀರಾಮುಲು

   'ಮಾನ್ಯ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪ ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಹಗಲಿರುಳೂ ಶ್ರಮಿಸುತ್ತಿರುವ ಮಾನ್ಯ ಮುಖ್ಯಮಂತ್ರಿಯವರು ಶೀಘ್ರ ಗುಣಮುಖರಾಗಿ ಜನಸೇವೆಗೆ ಲಭ್ಯರಾಗುವಂತಾಗಲಿ ಎಂದು ಹಾರೈಸುತ್ತೇನೆ'.

   ಸಚಿವ ಸುಧಾಕರ್

   ಸಚಿವ ಸುಧಾಕರ್

   'ಹುಟ್ಟು ಹೋರಾಟಗಾರರು, ಜನನಾಯಕರು, ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪ ರವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆದಷ್ಟು ಬೇಗನೆ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯದ ಜನತೆಯ ಹಾರೈಕೆ, ಪ್ರಾರ್ಥನೆಗಳು ನಿಮ್ಮೊಂದಿಗಿದೆ. ಶೀಘ್ರದಲ್ಲಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಕೊಳ್ಳಲಿದ್ದೀರಿ'.

   ಗೃಹ ಸಚಿವ ಬೊಮ್ಮಾಯಿ

   ಗೃಹ ಸಚಿವ ಬೊಮ್ಮಾಯಿ

   ಕರ್ನಾಟಕ ಸರ್ಕಾರದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಹ ಯಡಿಯೂರಪ್ಪ ಅವರು ಗುಣಮುರಾಗಲಿ ಎಂದು ಟ್ವಿಟ್ಟರ್‌ನಲ್ಲಿ ಶುಭಕೋರಿದ್ದಾರೆ. ಕಾಂಗ್ರೆಸ್ ನಾಯಕ ಜಿ ಪರಮೇಶ್ವರ ಶುಭಕೋರಿದ್ದಾರೆ.

   English summary
   HD Kumaraswamy, home minister Basavaraj bommai, sriramulu, sudhakar, nalin kumar kateel and some other political leaders has wish to CM Yediyurappa for speedily recovery of COVID19.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X