ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಕೇಡು ಬಯಸಿದ್ದು ಯಾರು?' ಸಿದ್ದರಾಮಯ್ಯ-ಕುಮಾರಸ್ವಾಮಿ ವಾರು ಜೋರು!

|
Google Oneindia Kannada News

Recommended Video

HD Kumaraswamy slams to Siddaramaiah On Twitter | Oneindia Kannada

ಬೆಂಗಳೂರು, ಅಕ್ಟೋಬರ್ 25: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರಕ್ಕೆ ಮತ್ತೆ ಟ್ವಿಟ್ಟರ್ ವೇದಿಕೆಯಾಗಿದೆ.

"ಉಪಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನ ಗೆದ್ದರೆ ನಂತರ ನೇರವಾಗಿ ಚುನಾವಣೆಗೆ ಹೋಗುತ್ತೇವೆ. ಯಾವ ಕಾರಣಕ್ಕೂ ಜೆಡಿಎಸ್ ಜೊತೆ ಸೇರೋಲ್ಲ. ನಮಗೆ ಜೆಡಿಎಸ್ ಸಹವಾಸ ಸಾಕಾಗಿದೆ" ಎಂದಿರುವ ಸಿದ್ದರಾಮಯ್ಯ ಅವರ ಮಾತಿಗೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯೆ ನೀಡಿದ ಎಚ್ ಡಿ ಕೆ, "ನಿಮಗೆ ಕೇಡು ಬಗೆದವರು ಯಾರು? ಆತ್ಮವಂಚನೆ ಇಲ್ಲದೆ ಹೇಳುವಿರಾ?" ಎಂದು ಪ್ರಶ್ನಿಸಿದ್ದಾರೆ.

'ಉಪ ಚುನಾವಣೆಯಲ್ಲಿ ಸೋಲು: ಅನರ್ಹ ಶಾಸಕರಿಗೂ ಇದೇ ಗತಿ''ಉಪ ಚುನಾವಣೆಯಲ್ಲಿ ಸೋಲು: ಅನರ್ಹ ಶಾಸಕರಿಗೂ ಇದೇ ಗತಿ'

ಉಪಚುನಾವಣೆಯಲ್ಲಿ ಅನರ್ಹ ಶಾಸಕರ ರಾಜಕೀಯ ಭವಿಷ್ಯವೇ ಮುಗಿಯಲಿದೆ. ದ್ರೋಹ ಬಗೆದವರಿಗೆ ಜನ ತಕ್ಕ ಶಿಕ್ಷೆ ನೀಡುತ್ತಾರೆ ಎಂದ ಸಿದ್ದರಾಮಯ್ಯ ಉಪಚುನಾವಣೆಯ ನಂತರ ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆಯುತ್ತದೆಂದು ಭವಿಷ್ಯ ಹೇಳಿದರು.

ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಎಚ್ ಡಿ ಕುಮಾರಸ್ವಾಮಿ ಮಾಡಿದ ಟ್ವಿಟ್ ಗಳು ಇಲ್ಲಿವೆ.

ಕೇಡು ಬಗೆದಿದ್ದು ಯಾರು?

ಕೇಡು ಬಗೆದಿದ್ದು ಯಾರು?

"ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15ಸ್ಥಾನ ಗೆದ್ದರೆ ಬಿಎಸ್ವೈ ರಾಜೀನಾಮೆ ನೀಡಬೇಕು. ನಂತರ ನೇರವಾಗಿ ಚುನಾವಣೆಗೆ ಹೋಗುತ್ತೇವೆ. ಜೆಡಿಎಸ್ ಜತೆ ಸೇರಲ್ಲ. ಅವರ ಜೊತೆ ಸೇರಿ ಅನುಭವಿಸಿದ್ದು ಸಾಕು ಎಂದಿದ್ದಾರೆ ಸಿದ್ದರಾಮಯ್ಯ. ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು? ಯಾರು ಯಾರಿಗೆ ಕೇಡು ಬಗೆದರು? ಎಂದು ಆತ್ಮವಂಚನೆ ಇಲ್ಲದೇ ಹೇಳುವಿರಾ?"- ಎಚ್ ಡಿ ಕುಮಾರಸ್ವಾಮಿ

ಕತ್ತಿ ಮಸೆದಿದ್ದು ಯಾರು?

ಕತ್ತಿ ಮಸೆದಿದ್ದು ಯಾರು?

"ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯನವರನ್ನು ಬೇಡಿದ್ದು ಯಾರು. ಅವರ ಮನೆ ಬಾಗಿಲಿಗೆ ಹೋಗಿದ್ದು ಯಾರು? ಸಹಕಾರ(?) ಕೊಟ್ಟವರು ಯಾರು? ಪಕೃತಿ ಚಿಕಿತ್ಸೆಯಲ್ಲಿ ಕೂತು ಕತ್ತಿ ಮಸೆದಿದ್ದು ಯಾರು? ದಿನಕ್ಕೊಬ್ಬರ ಮೂಲಕ ನನ್ನನ್ನು ಟೀಕಿಸಿದ್ದು ಯಾರು?" - ಎಚ್ ಡಿ ಕುಮಾರಸ್ವಾಮಿ

2 ರಾಜ್ಯದ ಚುನಾವಣಾ ಫಲಿತಾಂಶ; ಸಿದ್ದರಾಮಯ್ಯ ವಿಶ್ಲೇಷಣೆ2 ರಾಜ್ಯದ ಚುನಾವಣಾ ಫಲಿತಾಂಶ; ಸಿದ್ದರಾಮಯ್ಯ ವಿಶ್ಲೇಷಣೆ

ನಿಮ್ಮ ಸಹವಾಸ ನಮಗೂ ಬೇಡ

ನಿಮ್ಮ ಸಹವಾಸ ನಮಗೂ ಬೇಡ

"ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು? ಈ "ಯಾರು''ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ? ನೀವು ಕೊಟ್ಟ ಸಹಕಾರಕ್ಕೆ, ಬೆಂಬಲಕ್ಕೆ ನಾನು ಋಣಿ. ಈ ಜನ್ಮದಲ್ಲಿ‌ ನಾನು ಮರೆಯಲಾರೆ. ನಿಮ್ಮ ಸಹವಾಸ ನಮಗೂ ಬೇಡ ಸಿದ್ದರಾಮಯ್ಯನವರೇ..." - ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಹೇಳಿಕೆ

ಸಿದ್ದರಾಮಯ್ಯ ಹೇಳಿಕೆ

"ಈ ಬಾರಿಯ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನ ತಿರಸ್ಕರಿಸಿದ್ದಾರೆ, ಗುಜರಾತ್ ಉಪಚುನಾವಣೆಯಲ್ಲಿ ಸಹ ಪಕ್ಷಾಂತರಿಗಳು ಸೋತಿದ್ದಾರೆ. ಕರ್ನಾಟಕದಲ್ಲಿ ಕೂಡಾ ಹದಿನೈದು ಸ್ಥಾನಗಳ ಪೈಕಿ ಬಹುಪಾಲು ಸ್ಥಾನಗಳು ಕಾಂಗ್ರೆಸ್ ಪಾಲಾಗಿ, ಯಡಿಯೂರಪ್ಪನವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಆ ನಂತರ ಕಾಂಗ್ರೆಸ್ ಚುನಾವಣೆಗೆ ಹೋಗಲಿದೆ. ಯಾವ ಕಾರಣಕ್ಕೂ ಜೆಡಿಎಸ್ ಜೊತೆ ಕೈಜೋಡಿಸುವುದಿಲ್ಲ" ಎಂದು ಸಿದ್ದರಾಮಯ್ಯ ಹೇಳಿದ್ದರು.

ಡಿಕೆ ಶಿವಕುಮಾರ್‌ಗೆ ಜಾಮೀನು: ನಾಯಕರು ಹೇಳಿದ್ದೇನು?ಡಿಕೆ ಶಿವಕುಮಾರ್‌ಗೆ ಜಾಮೀನು: ನಾಯಕರು ಹೇಳಿದ್ದೇನು?

English summary
HD Kumaraswamy Attacks Siddaramaiah On Twitter
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X