ಹಾಸನ ಪೆನ್‌ಡ್ರೈವ್ ಕೇಸ್ ಹಿಂದೆ ಬ್ಲಾಕ್ ಮೇಲ್ ಕಿಂಗ್ ಕುಮಾರಸ್ವಾಮಿ ಕೈವಾಡ: ಡಿಕೆಶಿ
ಬೆಂಗಳೂರು, ಮೇ 08: ಜೆಡಿಎಸ್ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಿಟ್ ಅಂಡ್ ರನ್ ಗಿರಾಕಿ ಅನ್ನೋದು ಕರ್ನಾಟಕಕ್ಕೆ ಗೊತ್ತಿದೆ. ಹಾಸನ ಸೆಕ್ಸ್ ಪೆನ್ ಡ್ರೈವ್ ಪ್ರಕರಣದಲ್ಲಿ ನನ್ನ ಹೆಸರು ಹೇಳಿದರೆ ರಾಜ್ಯದ ಗಮನ ಸೆಳೆಯಬಹುದು ಎಂದುಕೊಂಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ತಮ್ಮ ಹೆಸರು ಹೇಳುತ್ತಿರುವ ಎಚ್‌ಡಿ ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಅವರು ಬುಧವಾರ ಟ್ವೀಟ್ ಮಾಡಿದ್ದಾರೆ. ಈ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತುರತ್ತಿದ್ದಾರೆ. ಪ್ರಕರಣದ ವಿಚಾರದಲ್ಲಿ ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

ಹಿಟ್ ಅಂಡ್ ರನ್ ಗಿರಾಕಿ ಕುಮಾರಸ್ವಾಮಿ ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ. ಪ್ರಜ್ವಲ್ ರೇವಣ್ಣ ಪ್ರಕರಣದ ಹಿಂದೆ ಇರುವುದು 'ಬ್ಲಾಕ್ ಮೇಲ್ ಕಿಂಗ್ ಕುಮಾರಸ್ವಾಮಿ' ಎಂದು ಅವರು ಆರೋಪಿಸಿದರು.
ಬ್ಲಾಕ್ ಮೇಲ್ ಮಾಡುವುದೇ ಎಚ್‌ಡಿಕೆ ಕೆಲಸ
ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್ ಮೇಲ್ ಮಾಡುವುದೇ ಅವರ ಕೆಲಸ. ಅವರಿಗೆ ದಿನಕ್ಕೊಮ್ಮೆ ನನ್ನ ಹೆಸರು ಎತ್ತದಿದ್ದರೆ ನಿದ್ದೆ ಬರಲ್ಲ. ಈಗಲೂ ನಾನು ಹೇಳುತ್ತಿದ್ದೇನೆ ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ ಎಂದು ತಿರುಗೇಟು ಕೊಟ್ಟರು.
ಕುಮಾರಸ್ವಾಮಿ ಅವರು ಹಿಟ್ ಅಂಡ್ ರನ್ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್ ರೇವಣ್ಣ ಸೆಕ್ಸ್ ಗೇಟ್ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ…
— DK Shivakumar (@DKShivakumar) May 8, 2024
ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತ ಕೂಡ ಹೇಳಿದ್ದರು. ಈಗ ಯಾಕೆ ಮತ್ತೆ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ.
ಅಧಿವೇಶನದಲ್ಲಿ ಚರ್ಚೆಗೆ ಬರಲಿ
ಹಾಸನ ಅಶ್ಲೀಲ ಪೆನ್‌ಡ್ರೈವ್ ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ. ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈಗಲೇ ತೀರ್ಪು ಕೊಡಲು ಎಚ್‌ಡಿ ಕುಮಾರಸ್ವಾಮಿ ಅವರೇನು ಲಾಯರಲ್ಲ. ನ್ಯಾಯಾಧೀಶರು ಅಲ್ಲ. ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ವಿಧಾನಸಭೆ ಅಧಿವೇಶನ ಇದೆ, ಎಲ್ಲಾ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದು ಅವರು ಸವಾಲು ಹಾಕಿದರು.












Click it and Unblock the Notifications