ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪದ್ಮಪ್ರಶಸ್ತಿ ಪಡೆದ ಗಣ್ಯರಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜನವರಿ 26: ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಹಾಗೂ ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಗಣ್ಯರನ್ನು ಮುಖ್ಯಮಂತ್ರಿಗಳು ಅಭಿನಂದಿಸಿದ್ದಾರೆ.

ಕೆಲವು ಸಾಧಕರಿಗೆ ಮರಣೋತ್ತರವಾಗಿಯದರೂ ಈ ಪ್ರಶಸ್ತಿಗಳು ಘೋಷಣೆ ಯಾಗಿರುವ ಕುರಿತು ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

ಶ್ರೀಗಳಿಗೆ ಭಾರತ ರತ್ನವಿಲ್ಲ, ಎಚ್.ಡಿ.ಕುಮಾರಸ್ವಾಮಿ ಟ್ವೀಟ್ಶ್ರೀಗಳಿಗೆ ಭಾರತ ರತ್ನವಿಲ್ಲ, ಎಚ್.ಡಿ.ಕುಮಾರಸ್ವಾಮಿ ಟ್ವೀಟ್

HD Kumaraswamy congratulates Padma Award winners from Karnataka

ರಾಜ್ಯದ ವಿಜ್ಞಾನಿ ರೋಹಿಣಿ ಗೋಡ್ಬೋಲೆ, ಸಂಗೀತ ವಿದ್ವಾಂಸ ಪಂ. ರಾಜೀವ್ ತಾರಾನಾಥ, ಸಾಲುಮರದ ತಿಮ್ಮಕ್ಕನವರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದಿರುವುದು ಸಂತಸ ತಂದಿದೆ.

ಆದರೆ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಹಾಗೂ ಇನ್ನೂ ಹಲವು ಅರ್ಹ ಸಾಧಕರಿಗೆ ಪದ್ಮ ಪ್ರಶಸ್ತಿ ನಿರೀಕ್ಷಿಸಿದ್ದೆವು. ಇದು ಕೈಗೂಡದಿರುವುದು ನಿರಾಸೆ ತಂದಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಶಿವಕುಮಾರ ಶ್ರೀಗಳಿಗೆ ಭಾರತ ರತ್ನವಿಲ್ಲ, ಕಾಂಗ್ರೆಸ್‌ ಅಸಮಾಧಾನಶಿವಕುಮಾರ ಶ್ರೀಗಳಿಗೆ ಭಾರತ ರತ್ನವಿಲ್ಲ, ಕಾಂಗ್ರೆಸ್‌ ಅಸಮಾಧಾನ

ಕೇಂದ್ರ ಸರ್ಕಾರ ಶುಕ್ರವಾರ 2019ನೇ ಸಾಲಿನ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಗಾಯಕ ಭೂಪೇನ್ ಹಜಾರಿಕಾ ಹಾಗೂ ನಾನಾಜಿ ದೇಶ್ ಮುಖ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ.

ಇತ್ತೀಚೆಗಷ್ಟೇ ಇಹಲೋಕ ತ್ಯಜಿಸಿದ ತುಮಕೂರಿನ ಸಿದ್ದಗಂಗಾಮಠದ ಶಿವಕುಮಾರ ಶ್ರೀಗಳಿಗೂ 'ಭಾರತ ರತ್ನ' ಪ್ರಶಸ್ತಿ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದರು. ಕರ್ನಾಟಕ ಸರ್ಕಾರವೂ ಭಾರತ ರತ್ನ ನೀಡುವಂತೆ ಶಿಫಾರಸ್ಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಅವರನ್ನು ಭಾರತ ರತ್ನಕ್ಕೆ ಆಯ್ಕೆ ಮಾಡದಿರುವುದು ಜನರಲ್ಲಿ ಅಸಮಾಧಾನ ಸ್ರಷ್ಟಿಸಿದೆ.

English summary
Chief minister HD Kumaraswamy congratulates all achievers from Karnataka who have won Padma Award on Republic day eve.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X