ಅಭಿವೃದ್ಧಿ ನೀಲನಕ್ಷೆ ರೆಡಿ, ಅಧಿಕಾರ ಸಿಕ್ಕರೆ ಅನುಷ್ಠಾನ:ಎಚ್ಡಿಕೆ
ಬೆಂಗಳೂರು, ಫೆಬ್ರವರಿ 14: ನಗರದಲ್ಲಿ ಆಯೋಜಿಸಿದ್ದ ಆಟೋ, ಲಾರಿ ಚಾಲಕರು ಮತ್ತು ಮಾಲೀಕರೊಂದಿಗೆ ನಡೆಸಿದ ಸಂವಾದದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಸ್ಡಿ ಕುಮಾರಸ್ವಾಮಿ ಅವರು ಭಾವುಕರಾಗಿ ಕಣ್ಣೀರು ಹಾಕಿದರು.
ಕುಮಾರಸ್ವಾಮಿ ಅವರ ನೆರವಿನಿಂದ ತಮ್ಮ ಮಗುವನ್ನು ಉಳಿಸಿಕೊಂಡ ದಂಪತಿಯೊಂದು ವೇದಿಕೆ ಮೇಲೆ ಬಂದು ಕುಮಾರಸ್ವಾಮಿ ಅವರ ಸಹಾಯಕ್ಕೆ ತುಂಬು ಹೃದಯದಿಂದ ಕೃತಜ್ಞತೆ ಅರ್ಪಿಸಿ ಕಾಲಿಗೆರಗಿದಾಗ ಗದ್ಗದಿತರಾದ ಕುಮಾರಸ್ವಾಮಿ ವೇದಿಕೆ ಮೇಲೆಯೇ ಕಣ್ಣೀರು ಹಾಕಿದರು.
ನಂತರ ಸಾವರಿಸಿಕೊಂಡು ಮಾತನಾಡಿದ ಅವರು ರಾಜ್ಯದಲ್ಲಿ ತುಳಿತಕ್ಕೊಳಗಾಗಿರುವ ಶ್ರಮಿಕ ವರ್ಗದ ಪರವಾದ ಧನಿಯಾಗುವ ಇಚ್ಛೆಯಿಂದಲೇ ಈ ಬಾರಿ ಚುನಾವಣೆಯಲ್ಲಿ ಕಣಕ್ಕಿಳಿತ್ತಿದ್ದು, ಜೆಡಿಎಸ್ ಅಧಿಕಾರಕ್ಕೆ ಬಂದರೆ ಇಷ್ಟು ದಿನ ಇದ್ದ ಐಪಿಎಸ್ ಅಧಿಕಾರಗಳ ಸ್ವರ್ಗ ಹೋಗಿ ರಾಜ್ಯವು ಶ್ರಮಿಕರ ಸ್ವರ್ಗವಾಗುತ್ತದೆ ಎಂದರು.

ಸಂವಾದ ಕಾರ್ಯಕ್ರಮದಲ್ಲಿ ಭರವಸೆಗಳ ಸುರಿಮಳೆಯನ್ನೇ ಸುರಿಸಿದ ಕುಮಾರಸ್ವಾಮಿ ಅವರು ರೈತರು, ಶ್ರಮಿಕ ವರ್ಗದವರಿಗೆ ಅತ್ಯುತ್ತಮ ಜೀವನ ಕಲ್ಪಿಸಿಕೊಡಬೇಕೆಂಬ ಮಹದಾಸೆ ನನಗಿದ್ದು, ಆ ಕಾರಣಕ್ಕಾಗಿಯೇ ನಾನು ಮತ್ತೊಮ್ಮೆ ಮುಖ್ಯಮಂತ್ರ ಆಗಲು ನಿಮ್ಮ ಆಶೀರ್ವಾದ ಕೇಳುತ್ತಿದ್ದೇನೆ ಎಂದರು.
ಆಟೋ ಚಾಲಕರು ಮತ್ತು ಲಾರಿ ಮಾಲೀಕರು ತಮ್ಮ ಸಮಸ್ಯೆಗಳನ್ನು ಕುಮಾರಸ್ವಾಮಿ ಅವರ ಬಳಿ ಹೇಳಿಕೊಂಡರು. ಪೊಲೀಸರ ಕಿರುಕುಳ, ಆರ್ಟಿಒ ಅಧಿಕಾರಿಗಳ ಕಿರುಕುಳ, ಪಾರ್ಕಿಂಗ್ ಅವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಯಿತು.
ಎಲ್ಲಾ ಪ್ರಶ್ನೆಗಳನ್ನು ಸಮಾನದಿಂದ ಕೇಳಿದ ಕುಮಾರಸ್ವಾಮಿ ರಾಜ್ಯದ ಸಂಪೂರ್ಣ ಅಭಿವೃದ್ಧಿಗೆ ಜೆಡಿಎಸ್ ನೀಲಿ ನಕ್ಷೆ ತಯಾರಿಸಿದೆ. ಅಧಿಕಾರಕ್ಕೆ ಬಂದರೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.
ಕುಮಾರಸ್ವಾಮಿ ಅವರು ಎಲ್ಲ ವರ್ಗದ ಜನರೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಹಿರಿಯ ನಾಗರೀಕರು, ವೈದ್ಯರು, ವಿದ್ಯಾರ್ಥಿಗಳೊಂದಿಗೆ ಈಗಾಗಲೇ ಸಂವಾದ ನಡೆಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications