ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇಶದ ಆರ್ಥಿಕತೆ ಕಾಣದಂತೆ ಯಾವ ಗೋಡೆ ಕಟ್ಟಿಸ್ತಾರೆ: ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 18: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಗೆ ಗುಜರಾತ್‌ನ ಅಹ್ಮದಾಬಾದ್‌ನ ಸ್ಲಂಗಳು ಕಾಣದಂತೆ ಗೋಡೆ ಕಟ್ಟಿರುವುದನ್ನು ಸಿಎಂ ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

ಸ್ಲಂಗಳಿಗೆ ಗೋಡೆ ಕಟ್ಟಿರುವ ಕ್ರಮವನ್ನು ಟ್ವಿಟ್ಟರ್‌ನಲ್ಲಿ ಟೀಕಿಸಿರುವ ಕುಮಾರಸ್ವಾಮಿ, 'ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಭಾರತದ ಭೇಟಿ ವೇಳೆ ಅಹ್ಮದಾಬಾದ್ ನ ಸ್ಲಂಗಳು ಕಾಣದಂತೆ ಪ್ರಧಾನಿ ಮೋದಿ ಅವರು ಎತ್ತರದ ಗೋಡೆಗಳನ್ನು ಕಟ್ಟಿಸುತ್ತಿದ್ದಾರಂತೆ! ಆದರೆ ಅಧಃಪತನಕ್ಕೆ ಕುಸಿದಿರುವ ದೇಶದ ಆರ್ಥಿಕತೆ ಕಾಣಿಸದಂತೆ ಮೋದಿ ಅವರು ಯಾವ ಗೋಡೆ ಕಟ್ಟುತ್ತಾರೆ?' ಎಂದು ಪ್ರಶ್ನೆ ಮಾಡಿದ್ದಾರೆ.

'ದೇಶವ್ಯಾಪಿ ಭುಗಿಲೆದ್ದಿರುವ ಸಿಎಎ ವಿರೋಧಿ ಹೋರಾಟ ಕಾಣಿಸದಂತೆ ಯಾವ ಭದ್ರಕೋಟೆ ನಿರ್ಮಿಸುತ್ತಾರೆ? ದೇಶದಲ್ಲಿ ತಾಂಡವವಾಡುತ್ತಿರುವ ಬಡತನ, ನಿರುದ್ಯೋಗ ಸಮಸ್ಯೆ ಮರೆಮಾಚಲು ಯಾವ ತಡೆಗೋಡೆ ನಿರ್ಮಿಸುತ್ತಾರೆ? ಮೋದಿ ಅವರೇ ಉತ್ತರಿಸುವಿರಾ?' ಎಂದು ಸಹ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

HD Kumaraswamy Critisize Buliding Wall To Hide Slum In Ahmedabad

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಆಗಮಿಸುತ್ತಿದ್ದು, ಅವರು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಟ್ರಂಪ್ ಸಾಗುವ ದಾರಿಯಲ್ಲಿರುವ ಸ್ಲಂ ಟ್ರಂಪ್‌ ಕಣ್ಣಿಗೆ ಕಾಣದಿರಲೆಂದು ಸ್ಲಂ ಗೆ ಅಡ್ಡಗೋಡೆ ಕಟ್ಟಲಾಗುತ್ತಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

English summary
Former CM HD Kumaraswamy critisize building wall to hide slum in Ahmedabad. Wall built to hide slum that's on the way of Donald Trump root map.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X