ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಲಾಕ್‌ಡೌನ್‌: ಮತ್ತೊಂದು ಸಲಹೆ ನೀಡಿದ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜುಲೈ 11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಒಂದು ವಾರಗಳ ಕಾಲ ಸಂಪೂರ್ಣ ಲಾಕ್‌ಡೌನ್ ಘೋಷಣೆಯಾಗಿದೆ. ಜುಲೈ 14 ರಿಂದ ಒಂದು ವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಬಂದ್ ಆಗಲಿದೆ ಎಂದು ಸಿಎಂ ಅಧಿಕೃತಪಡಿಸಿದ್ದರು.

Recommended Video

Corona ವಿರುದ್ಧ R Ashok ಮಾಸ್ಟರ್ ಪ್ಲಾನ್ | Oneindia Kannada

ಮುಖ್ಯಮಂತ್ರಿ ಅವರ ಈ ನಿರ್ಧಾರವನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ''ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ'' ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ ''ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಒತ್ತಾಯಿಸುತ್ತೇನೆ'' ಎಂದಿದ್ದಾರೆ.

Breaking: ಮಂಗಳವಾರದಿಂದ ಒಂದು ವಾರ ಬೆಂಗಳೂರು ಲಾಕ್ ಡೌನ್!Breaking: ಮಂಗಳವಾರದಿಂದ ಒಂದು ವಾರ ಬೆಂಗಳೂರು ಲಾಕ್ ಡೌನ್!

HD Kumaraswamy Demand To Ban Inter District Travel

ಮತ್ತೊಂದು ಟ್ವೀಟ್‌ನಲ್ಲಿ ''ಕೊರೊನಾ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಗಂಭೀರ ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ನಾನು ಬೆಂಬಲಿಸುತ್ತೇನೆ'' ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತ್ರವಲ್ಲ ರಾಜ್ಯದ ಇತರೆ ಕೆಲವು ಜಿಲ್ಲೆಗಳಲ್ಲೂ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಲಾಕ್‌ಡೌನ್‌ ಅವಶ್ಯಕ ಎಂದು ವಿಪಕ್ಷಗಳು ಈ ಹಿಂದೆ ಅಭಿಪ್ರಾಯ ಪಟ್ಟಿದ್ದವು.

English summary
After announcement of One week lockdown in bengaluru, Karnataka Ex Chief minister HD Kumaraswamy demand to ban Inter district Travel.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X