ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ!

|
Google Oneindia Kannada News

ಬೆಂಗಳೂರು, ಆ. 18: ಕೊರೊನಾ ಸಂಕಷ್ಟದ ಕಾಲದಲ್ಲಿ ಹಲವು ಜನವಿರೋಧ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ಅಂಥದ್ದೆ ಕ್ರಮಕ್ಕೆ ಮುಂದಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಖಾಲಿಯಾಗಿರುವ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಮಾರಾಟಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Recommended Video

Israel ಒಪ್ಪಂದದ ಬಗ್ಗೆ UAE ಮೇಲೆ ದಾಳಿ ಮಾಡುವುದಾಗಿ Iran ಬೆದರಿಕೆ ಹಾಕಿದೆ | Oneindia Kannada

ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ಆಸ್ತಿ ಮಾರಾಟ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ. ಕವಡೆ ಕಾಸಿಗೆ ಸ್ಥಳೀಯ ಸಂಸ್ಥೆಗಳ ಜಮೀನನ್ನು ಗುತ್ತಿಗೆ ನೀಡಿರುವ ಸರ್ಕಾರ ಮಾರಾಟ ನಿರ್ಧಾರ ಕೈಬಿಟ್ಟು, ಬಾಡಿಗೆ ಹೆಚ್ಚಿಸಲು ಮುಂದಾಗಬೇಕು ಎಂದಿದ್ದಾರೆ.

ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನನ್ನು ಮಾರಾಟ ಮಾಡಿದರೆ, ಮುಂದೆ ಸಾರ್ವಜನಿಕ ಅವಶ್ಯಕತೆಗಳಿಗೆ ಸರ್ಕಾರಿ ಜಮೀನು ಇಲ್ಲದಂತಾಗುತ್ತದೆ. ಅಗತ್ಯ ಬಿದ್ದಾಗ ಖಾಸಗಿ ಅವರ ಎದುರು ಅಂಗಲಾಚಬೇಕಾದ ದೈನೇಸಿ ಸ್ಥಿತಿ ನಿರ್ಮಾಣವಾಗುತ್ತದೆ.

Hd Kumaraswamy Demanded That State Govt Should Withdraw Its Decision to Sale Govt Land

ಬೊಕ್ಕಸ ತುಂಬಿಸಿಕೊಳ್ಳಲು ಬಿಡಿಎ ನಿವೇಶನಗಳನ್ನು ಹರಾಜು ಹಾಕುತ್ತಿರುವ ಸರ್ಕಾರ ಇದೀಗ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೀಡಿರುವ ಜಮೀನಿನ ಮೇಲೆ ಕಣ್ಣಿಟ್ಟಿದೆ. ಇಂತಹ ತಾತ್ಕಾಲಿಕ ಉಪಶಮನಗಳಿಂದ ಸರ್ಕಾರ ಶಾಶ್ವತವಾಗಿ ಬೊಕ್ಕಸ ತುಂಬಿಸಿಕೊಳ್ಳಲು ಸಾಧ್ಯವಿಲ್ಲ.

Hd Kumaraswamy Demanded That State Govt Should Withdraw Its Decision to Sale Govt Land

ಸುಮಾರು 5000 ಕೋಟಿ ರೂಪಾಯಿಗಳ ಆದಾಯ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರ ಇರುವುದನ್ನು ಕಳೆದು ಕೊಳ್ಳುವ ಈ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸುವಂತೆ ಆಗ್ರಹಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ಟರ್‌ನಲ್ಲಿ ಆಗ್ರಹ ಮಾಡಿದ್ದಾರೆ.

English summary
Former Chief Minister H D Kumaraswamy demanded that the state government should immediately withdraw its decision to sale the land of BBMP, Municipalities, Municipal, Municipal and Urban Panchayats.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X