HD Kumaraswamy: ಹೂಡಿಕೆದಾರರ ಸಮಾವೇಶಕ್ಕೆ ಈ ಕಾರಣಕ್ಕೆ ಬರಲಿಲ್ಲ ಎಚ್.ಡಿ ಕುಮಾರಸ್ವಾಮಿ!
HD Kumaraswamy ಬೆಂಗಳೂರಿನಲ್ಲಿ ಇಂದಿನಿಂದ ಬೃಹತ್ ಜಾಗತಿಕ ಹೂಡಿಕೆದಾರರ ಸಮಾವೇಶ ಪ್ರಾರಂಭವಾಗಿದ್ದು. ಮೂರು ದಿನಗಳ ಕಾಲ ಈ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಕೋಟ್ಯಾಂತರ ರೂಪಾಯಿ ಆದಾಯ ಹರಿದು ಬರುವ ಸಾಧ್ಯತೆ ಇದೆ. ಆದರೆ, ಈ ಅಧಿವೇಶನಕ್ಕೆ ರಾಜ್ಯದ ಪ್ರಭಾವಿ ರಾಜಕಾರಣಿ ಹಾಗೂ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರೇ ಭಾಗವಹಿಸದೆ ಇರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಅಧಿವೇಶನದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಜಾಹೀರಾತು ವಿಚಾರವಾಗಿ ವಾಕ್ಸಮರ ನಡೆದಿದೆ. ಅಧಿವೇಶನದಲ್ಲಿ ಕೇಂದ್ರ ನಾಯಕರನ್ನು ಕಡೆಗಣನೆ ಮಾಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಇದರ ನಡುವೆ ಕುಮಾರಸ್ವಾಮಿ ಅವರು ಈ ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ ಎನ್ನುವ ಕುತೂಹಲ ಹೆಚ್ಚಾಗಿದೆ.
ಕುಮಾರಸ್ವಾಮಿ ಅವರು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಮೇಲೆ ರಾಜ್ಯದ ಉದ್ಯಮಗಳಿಗೆ ಹಾಗೂ ಕೈಗಾರಿಕೆ ಮತ್ತು ಉಕ್ಕಿನ ಉತ್ಪಾದನೆ ವಿಚಾರದಲ್ಲಿ ಸಾಕಷ್ಟು ನಿರೀಕ್ಷೆ ಮಾಡಲಾಗಿತ್ತು. ಆದರೆ ಈಗ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ ಎನ್ನುವುದು ಕುಮಾರಸ್ವಾಮಿ ಅವರ ಆರೋಪ. ಕೇಂದ್ರ ಸರ್ಕಾರದೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರ ನೀಡುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಈ ವಿಚಾರವಾಗಿ ಈ ಹಿಂದೆಯೇ ಕುಮಾರಸ್ವಾಮಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಅವರು ಅಧಿವೇಶನದಿಂದ ದೂರ ಉಳಿದಿದ್ದಾರೆ. ಅಧಿವೇಶನದಿಂದ ಯಾವ ಕಾರಣಕ್ಕೆ ದೂರು ಉಳಿದಿದ್ದಾರೆ ಎನ್ನುವ ಬಗ್ಗೆ ಅವರೇ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ವಿವರಣೆ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ಬೃಹತ್ ಹೂಡಿಕೆದಾರರ ಸಮಾವೇಶನ ನಡೆಯುತ್ತಿದೆ. ಈ ಸಮಾವೇಶನದಲ್ಲಿ ಕರ್ನಾಟಕಕ್ಕೆ ಸಾವಿರಾರು ಕೋಟಿ ರೂಪಾಯಿ ಹರಿದು ಬರಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ಅಲ್ಲದೆ ಕೋಟ್ಯಾಂತರ ರೂಪಾಯಿ ಹೂಡಿಕೆಯಾಗಲಿದೆ ಎಂದೂ ನಿರೀಕ್ಷೆ ಮಾಡಲಾಗಿದೆ. ಆದರೆ ಈ ರೀತಿಯ ಬೃಹತ್ ಸಮಾವೇಶಕ್ಕೆ ರಾಜ್ಯದ ರಾಜಕಾರಣಿಯಾಗಿರುವ ಕುಮಾರಸ್ವಾಮಿ ಅವರು ಉನ್ನತ ಹುದ್ದೆಯಲ್ಲಿ ಇದ್ದರೂ ಯಾಕೆ ಬರಲಿಲ್ಲ ಎನ್ನುವ ಪ್ರಶ್ನೆ ಎದುರಾಗಿದೆ.
ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ ಕುಮಾರಸ್ವಾಮಿ ಅವರು, ಸಂಸತ್ತಿನ ಅಧಿವೇಶನ ನಡೆಯುತ್ತಿರುವುದರಿಂದ ಬೆಂಗಳೂರಿನಲ್ಲಿ ಆರಂಭವಾಗಿರುವ ಕರ್ನಾಟಕ ಹೂಡಿಕೆದಾರರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ನಮ್ಮ ಸರಕಾರವು ಆತ್ಮನಿರ್ಭರ ಭಾರತ ಪರಿಕಲ್ಪನೆಯ ಮೂಲಕ ವಿಕಸಿತ ಭಾರತ 2047ರ ಗುರಿ ಮುಟ್ಟುವ ನಿಟ್ಟಿನಲ್ಲಿ ಹೂಡಿಕೆಗಳಿಗೆ ಉತ್ತೇಜನ ನೀಡುವುದಕ್ಕೆ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಶೃಂಗಸಭೆಯಲ್ಲಿ ಭಾಗವಹಿಸಿರುವ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು. ಆವಿಷ್ಕಾರ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮಹತ್ವದ ಕೇಂದ್ರವಾಗಿರುವ ಕರ್ನಾಟಕವು ಭಾರತದ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ. ಈ ಸಮಾವೇಶವು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಆದರೆ, ಕುಮಾರಸ್ವಾಮಿ ಅವರು ಈ ರೀತಿ ಟ್ವೀಟ್ ಮಾಡಿದ ಮೇಲೆಯೂ ಈ ವಿಚಾರವಾಗಿ ಭಾರೀ ಚರ್ಚೆಗಳು ನಡೆಯುತ್ತಿವೆ.












Click it and Unblock the Notifications