ಮಾಜಿ ಶಾಸಕ ಎಂ.ಪಿ. ರವೀಂದ್ರ ನಿಧನಕ್ಕೆ ಕುಮಾರಸ್ವಾಮಿ ಸಂತಾಪ

Recommended Video

      ಮಾಜಿ ಶಾಸಕ ಎಂ ಪಿ ರವೀಂದ್ರ ಸಾವಿಗೆ ಸಂತಾಪ ಸೂಚಿಸಿದ ಎಚ್ ಡಿ ಕುಮಾರಸ್ವಾಮಿ | Oneindia Kannada

      ಬೆಂಗಳೂರು, ನವೆಂಬರ್ 03: ಮಾಜಿ ಶಾಸಕ ಎಂ.ಪಿ. ರವೀಂದ್ರ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

      ದೀಪಾವಳಿ ವಿಶೇಷ ಪುರವಣಿ

      ರವೀಂದ್ರ ಅವರು ವೈಯಕ್ತಿಕವಾಗಿ ನನ್ನ ಉತ್ತಮ ಸ್ನೇಹಿತರು. ಸಮಾಜದ ಬಗ್ಗೆ ಕಳಕಳಿ ಹೊಂದಿದ್ದರು. ಇವರ ನಿಧನದಿಂದ ಒಬ್ಬ ಉತ್ತಮ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

      ಬಹುಅಂಗಾಂಗ ವೈಫಲ್ಯದಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಪಿ ರವೀಂದ್ರ(49) ಶನಿವಾರ ಬೆಳಗ್ಗೆ ಕೊನೆಯುಸಿರೆಳೆದರು.

      HD Kumaraswamy expresses condolance to MP Ravindra

      ಸಜ್ಜನ ರಾಜಕಾರಣಿ ಎಂ ಪಿ ಪ್ರಕಾಶ್ ಅವರ ಪುತ್ರ ಎಂಪಿ ರವೀಂದ್ರ ಅವರ ನಿಧನಕ್ಕೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ. 2013 ರ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ್ದ ಅವರು, 2018 ರ ವಿಧಾನಸಭೆಯಲ್ಲಿ ಹರಪನಹಳ್ಳಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲುಂಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+