ರಮೀಳಾ ನಿಧನಕ್ಕೆ ಭಾವುಕ ಶ್ರದ್ಧಾಂಜಲಿ ಅರ್ಪಿಸಿದ ಸಿಎಂ ಕುಮಾರಸ್ವಾಮಿ
Recommended Video

ಬೆಂಗಳೂರು, ಅಕ್ಟೋಬರ್ 05: 'ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ಅವರ ನಿಧನದ ಸುದ್ದಿ ತಿಳಿದು ದಿಗ್ಭ್ರಮೆಯಾಗಿದೆ' ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭಾವುಕರಾಗಿ ಹೇಳಿದರು.
ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾದ ಬಿಬಿಎಂಪಿ ಉಪಮೇಯರ್ ರಮೀಳಾ ಉಮಾಶಂಕರ್(44) ಅವರ ಅಗಲಿಕೆ ತುಂಬಲಾರದ ನಷ್ಟ ಎಂದು ಅವರು ಪ್ರತಿಕ್ರಿಯೆ ನೀಡಿದರು.
ಸಾಲು ಸಾಲು ಟ್ವೀಟ್ ಗಳ ಮೂಲಕ ರಮೀಳಾ ಅವರ ಅಕಾಲಿಕ ಮರಣಕ್ಕೆ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದರು. ಕಾವೇರಿಪುರ ವಾರ್ಡ್ ನ ಕಾರ್ಪೋರೇಟರ್ ಆಗಿದ್ದ ರಮೀಳಾ, ಜೆಡಿಎಸ್ ನ ನಿಷ್ಠಾವಂತ ಕಾರ್ಯಕರ್ತರಾಗಿದ್ದರು ಎಂದು ಸ್ಮರಿಸಿದರು.
|
ಭಾವಪೂರ್ಣ ಶ್ರದ್ಧಾಂಜಲಿ
"ನಿನ್ನೆಯಷ್ಟೆ ಅವರು 'ನಮ್ಮ ಮೆಟ್ರೋ' ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಭಾಗವಹಿಸಿದ್ದರು. ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಅಗಲಿಕೆಯ ದುಃಖವನ್ನು ಭರಿಸುವ ಸ್ಥೈರ್ಯ ಅವರ ಕುಟುಂಬಕ್ಕೆ ಸಿಗಲಿ" ಎಂದು ಮುಖ್ಯಮಂತ್ರಿಗಳು ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.
|
ಅವರ ನಿಧನ ದಿಗ್ಭ್ರಮೆಯನ್ನುಂಟುಮಾಡಿದೆ
ಉಪಮೇಯರ್ ರಮೀಳಾ ಅವರ ನಿಧನದ ಸುದ್ದಿ ತಿಳಿದು ನನಗೆ ದಿಗ್ಭ್ರಮೆಯಾಯಿತು. ಅವರೊಬ್ಬ ಪ್ರಾಮಾಣಿಕ ಸಾಮಾಜಿಕ ಕಾರ್ಯಕರ್ತರು. ಅವರು ನಮ್ಮೊಂದಿಗೆ ಇನ್ನಿಲ್ಲ ಎಂಬುದನ್ನು ಅರಗಿಸಿಕೊಳ್ಳುವುದು ಕಷ್ಟ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ.
|
ಅವರ ಆತ್ಮಕ್ಕೆ ಶಾಂತಿ ಸಿಗಲಿ
ರಮೀಳಾ ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು. ರಮೀಳಾ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಸೆ. 28 ರಂದು ಉಪಮೇಯರ್ ಆಗಿ ಆಯ್ಕೆ
ಸೆ.28 ರಂದು ನಡೆದ ಮೇಯರ್ ಚುನಾವಣೆಯಲ್ಲಿ ಕಾವೇರಿಪುರ ವಾರ್ಡ್ ನ ಕಾರ್ಪೋರೇಟರ್ ಆಗಿದ್ದ ರಮೀಳಾ ಉಪಮೇಯರ್ ಆಗಿ ಆಯ್ಕೆಯಾಗಿದ್ದರು. ಅ.3 ರಂದು ಅಧಿಕಾರ ವಹಿಸಿಕೊಂಡಿದ್ದ ಅವರು, ಮರುದಿನವೇ, ಅಂದರೆ ಅ.04 ರಂದು ಇಹಲೋಕ ತ್ಯಜಿಸಿದರು. ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು.












Click it and Unblock the Notifications