ಜೊತೆ ನೀಡಿದ ಅಧಿಕಾರಿಗಳೊಂದಿಗೆ ಟೀ-ಪಾರ್ಟಿ ಮಾಡಿದ ಕುಮಾರಸ್ವಾಮಿ

ಬೆಂಗಳೂರು, ಜುಲೈ 24: ವಿಶ್ವಾಸಮತ ಕಳೆದುಕೊಂಡು ನಿನ್ನೆಯೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಸಿಎಂ ಕುಮಾರಸ್ವಾಮಿ ಅವರು ಇಂದು ಅಧಿಕಾರಿಗಳೊಂದಿಗೆ ಅಂತಿಮ ಸಭೆ ನಡೆಸಿದರು.

ತಮಗೆ ಸಹಕಾರ ನೀಡಿದ ಎಲ್ಲ ಉನ್ನತ ಅಧಿಕಾರಿಗಳೊಂದಿಗೆ ಟೀ-ಸೇವಿಸಿದ ಕುಮಾರಸ್ವಾಮಿ ಅವರು, 14 ತಿಂಗಳು ಆಡಳಿತಕ್ಕೆ ಸಹಕರಿಸಿದ್ದಕ್ಕೆ ಧನ್ಯವಾದಗಳನ್ನು ಸಹ ಸಲ್ಲಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಐಜಿಪಿ, ಆರ್ಥಿಕ ಸಲಹೆಗಾರರು ಸೇರಿದಂತೆ ಇನ್ನೂ ಹಲವು ಐಪಿಎಸ್, ಐಎಎಸ್ ದರ್ಜೆ ಅಧಿಕಾರಿಗಳು ಇದ್ದರು. ಅಂತಿಮವಾಗಿ ಎಲ್ಲರೂ ಕುಮಾರಸ್ವಾಮಿ ಅವರೊಂದಿಗೆ ಫೊಟೊ ತೆಗೆದುಕೊಂಡರು.

HD Kumaraswamy had tea party with officials and thank them

ತಮ್ಮ ಅಧಿಕಾರಾವಧಿಯಲ್ಲಿ ಎರಡು ಆಯಾವ್ಯಗಳ ಮೂಲಕ ರೂಪಿಸಿದ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಅಧಿಕಾರಿಗಳು ನಿಸ್ಪೃಹತೆಯಿಂದ ಶ್ರಮಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ರಾಜಕೀಯ ವಿದ್ಯಮಾನಗಳು ಏನೇ ಇದ್ದರೂ ನಿರ್ಲಿಪ್ತ ರಾಗಿ ಜನಹಿತಕ್ಕಾಗಿ ಕಾರ್ಯ ನಿರ್ವಹಿಸಿ ಎಂದು ಸಲಹೆ ನೀಡಿದರು.

HD Kumaraswamy had tea party with officials and thank them

ಈ ಸಂದರ್ಭದಲ್ಲಿ ಅಧಿಕಾರಿಗಳ ಪರವಾಗಿ ಮಾತನಾಡಿದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಅವರು, ಕಳೆದ 14 ತಿಂಗಳ ಕಾರ್ಯ ನಿರ್ವಹಣೆಯ ಅವಧಿಯಲ್ಲಿ ಮುಖ್ಯಮಂತ್ರಿಯವರು ಅಧಿಕಾರಿಗಳನ್ನು ಸಹೋದರ ಭಾವದಿಂದ ವಿಶ್ವಾಸಕ್ಕೆ ತೆಗೆದುಕೊಂಡು ಕರ್ತವ್ಯ ನಿರ್ವಹಿಸಿದ್ದರು ಎಂದು ಸ್ಮರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+