ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಮಲತಾ ಜನಪ್ರಿಯತೆ ಸಹಿಸದೇ ಕುಮಾರಸ್ವಾಮಿಯಿಂದ ಕುತಂತ್ರ

|
Google Oneindia Kannada News

ಬೆಂಗಳೂರು, ಏಪ್ರಿಲ್ 01:ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಅವರಿಗೆ ಮಂಡ್ಯದ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಈವರೆಗಿನ ಫಲಿತಾಂಶ

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರೂಪೇನ ಅಗ್ರಹಾರ ರೌಂಡ್ ಟೇಬಲ್ ಸ್ಕೂಲ್ ಪಕ್ಕದ ಗ್ರೌಂಡ್‍ನಲ್ಲಿ ಮಹಿಳಾ ಕಾರ್ಯಕರ್ತರ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಮಂಡ್ಯ ಕ್ಷೇತ್ರದ ಈವರೆಗಿನ ಫಲಿತಾಂಶ

ದಿವಂಗತ ಅಂಬರೀಷ್ ಅವರ ಪತ್ನಿ ಸುಮಲತಾ ಅವರ ಜನಪ್ರಿಯತೆಯನ್ನು ಸಹಿಸಲಾಗದೇ ಸಿಎಂ ಕುಮಾರಸ್ವಾಮಿ ಕುತಂತ್ರದಿಂದ ಸುಮಲತಾ ಎನ್ನುವ ಹೆಸರಿನ ಮೂರ್ನಾಲ್ಕು ಮಹಿಳೆಯರಿಂದ ನಾಮಪತ್ರ ಹಾಕಿಸಿ ಮಂಡ್ಯದ ಮತದಾರರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ, ಮಂಡ್ಯದ ಜನರು ದಡ್ಡರಲ್ಲ. ಕುಮಾರಸ್ವಾಮಿಯವರಿಗೆ ಈ ಚುನಾವಣೆಯಲ್ಲಿ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

HD Kumaraswamy is playing dirty politics against Sumalatha : BS Yeddyurappa

ಸುಮಲತಾ ಆಸ್ತಿ ವಿವರ ಸುಮಲತಾ ಆಸ್ತಿ ವಿವರ

ಇದೇ ವೇಳೆ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ನಾಮಪತ್ರ ಸಲ್ಲಿಕೆ ಗೊಂದಲದ ಬಗ್ಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಷ್ ಹಾಗೂ ಅವರ ಚುನಾವಣಾ ಏಜೆಂಟ್ ಮದನ್ ಅವರು ಸುದ್ದಿಗೋಷ್ಠಿ ನಡೆಸಿದರು. ರಿಟರ್ನಿಂಗ್ ಆಫೀಸರ್ ಅವರು ಸರಿಯಾದ ಪ್ರತಿಕ್ರಿಯೆ ನೀಡುತ್ತಿಲ್ಲ. ನಿಖಿಲ್ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಹಲವಾರು ದೋಷಗಳಿವೆ ಈ ಬಗ್ಗೆ ಸ್ಪಷ್ಟನೆ ಕೋರಿ ದೂರು ಸಲ್ಲಿಸಲಾಗಿದೆ ಎಂದರು.

English summary
Chief Minister HD Kumaraswamy is playing dirty politics against Sumalatha in Mandya said former CM, BJP president BS Yeddyurappa. He was campaigning for Bangalore South Constituency candidate Tejasvi Surya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X