ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Hindi Diwas 2022 ವಿರುದ್ಧ ವಿಧಾನಸೌಧ ಮುಂದೆ ಎಚ್‌ಡಿಕೆ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ

|
Google Oneindia Kannada News

ಬೆಂಗಳೂರು ಸೆಪ್ಟಂಬರ್ 14: ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡದಂತೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಬುಧವಾರದಂದು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಜೆಡಿಎಸ್‌ನಿಂದ ಪ್ರತಿಭಟನೆ ನಡೆಸಲಾಗಿದೆ.

ಹಿಂದಿ ದಿವಸ್ ಆಚರಣೆ ಖಂಡಿಸಿ ಜೆಡಿಎಸ್‌ ಮುಖಂಡರು ಕನ್ನಡ ಶಾಲು ಧರಿಸಿ ಹಾಗೂ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದರು.

ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸರಕಾರ ರಾಜ್ಯದಲ್ಲಿ ಕನ್ನಡವನ್ನು ಧಿಕ್ಕರಿಸಿ ಹಿಂದಿ ದಿವಸ ಆಚರಿಸುತ್ತಿರುವುದು, ಅದಕ್ಕೆ ರಾಜ್ಯ ಬಿಜೆಪಿ ಸರಕಾರ ಬೆಂಬಲ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದರು.

ಕೇಂದ್ರ ಸರ್ಕಾರಕ್ಕೆ ಭಾಷಾ ಸಹಿಷ್ಣುತೆ ಇಲ್ಲ. ರಾಜ್ಯಗಳ ಮೇಲೆ, ಅದರಲ್ಲೂ ಕರ್ನಾಟಕದ ಮೇಲೆ ಪದೇಪದೆ ಹಿಂದಿ ಹೇರಿಕೆ ಮಾಡುತ್ತಲೇ ಇದೆ. ಪ್ರಾದೇಶಿಕ ಭಾಷೆಗಳನ್ನು, ಮುಖ್ಯವಾಗಿ ಕನ್ನಡವನ್ನು ಹತ್ತಿಕ್ಕುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ದೇಶದಲ್ಲಿ ನಾನಾ ಭಾಷೆ ಮಾತಾಡುವ ನಾಗರೀಕರು ಇದ್ದಾರೆ. ಈಗಾಗಲೇ ಅಮೃತ ಮಹೋತ್ಸವ ಮಾಡಿದ್ದೇವೆ. ಅದರೂ ಕೇಂದ್ರ ಬಿಜೆಪಿ ಸರ್ಕಾರ ಕೇವಲ ಒಂದು ಭಾಷೆಯನ್ನು ರಾಜ್ಯಗಳ ಮೇಲೆ ಹೇರಿಕೆ ಮಾಡುತ್ತಿರುವುದು ಸರಿಯಲ್ಲಿ ಎಂದು ಕಿಡಿಕಾರಿದರು.

ಒಂದು ಭಾಷೆ ಒಂದು ರಾಷ್ಟ್ರ ಹೇಳಿಕೆ ಖಂಡನೀಯ
ಒಂದು ಭಾಷೆ ಒಂದು ರಾಷ್ಟ್ರ ಎಂಬ ಗೃಹ ಸಚಿವ ಅಮೀತ್ ಶಾ ಹೇಳಿಕೆ ಖಂಡನೀಯ. ಕೇವಲ ಹಿಂದಿ ಒಂದು ಭಾಷೆಯಿಂದ ಭಾರತ ಒಂದಾಗಿ ಉಳಿದಿಲ್ಲ. ವಿವಿಧತೆಯಲ್ಲಿ ಏಕತೆಯೇ ಭಾರತದ ಶಕ್ತಿ. ಅದನ್ನೇ ಹಾಳು ಮಾಡಿದರೆ ದೇಶವನ್ನು ಓಡೆದಂತೆ. ಅವರು ಕೇಲ ಭಾವನಾತ್ಮಕ ವಿಚಾರ ಕೆಣಕುತ್ತಾ ದೇಶವನ್ನು ವಿಭಜಿಸುತ್ತಿದ್ದಾರೆ ಎಂದು ದೂರಿದರು.

ಉತ್ತರ ಭಾರತದ ಕೆಲವೆಡೆ ಹಿಂದಿ ಇಲ್ಲ. ಅನೇಕ ರಾಜ್ಯಗಳಲ್ಲಿ ಅವರದ್ದೆ ಭಾಷೆ ಇದೆ. ತಮ್ಮ ಭಾಷೆಯನ್ನೇ ಮಾತನಾಡುತ್ತಾ ನೆಮ್ಮದಿಯಿಂದ ಇದ್ದಾರೆ. ಸಾವಿರಾರು ವರ್ಷಗಳ ಇತಿಹಾಸ ಇರುವ ಪ್ರಾದೇಶಿಕ ಭಾಷೆಗಳ ಕತ್ತನ್ನು ಹಿಸುಕುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ. ಕನ್ನಡದ ಬಗ್ಗೆ ಯಾಕಿಷ್ಟು ಅಸಹನೆ ಇವರಿಗೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಹಿಂದಿ ದಿವಸ್‌ ಹೆಸರಿನಲ್ಲಿ ಕನ್ನಡಿಗರ ತೆರಿಗೆ ಹಣ ವ್ಯಯ ಮಾಡೋದು ಎಷ್ಟು ಸರಿ?. ಜನ ನೆರೆ ಹಾವಳಿಯಿಂದ ತತ್ತರಿಸಿದ್ದಾರೆ. ಅವರ ನೆರವಿಗೆ ಭಾರದೆ ಹಿಂದಿ ಭಾಷೆಯ ವಿಚಾರವೇ ಸರ್ಕಾರಕ್ಕೆ ಮುಖ್ಯವಾಗಿದೆ. ಇದಕ್ಕೆ ಕನ್ನಡಿಗರ ಧಿಕ್ಕಾರವಿದೆ ಎಂದು ಅವರು ಗುಡುಗಿದರು.

ಹಿಂದಿ ದಿವಸ್ ಆಚರಣೆಗೆ ಜನರ ತೆರಿಗೆ ಹಣ ಬಳಸದಂತೆ ಕುಮಾರಸ್ವಾಮಿ ಅವರು ಈಗಾಗಲೇ ಸರ್ಕಾರಕ್ಕೆ ಪತ್ರ ಬರೆದಿದ್ದರು. ಒಕ್ಕೂಟ ದೇಶದಲ್ಲಿ ಕೇಂದ್ರ ಸರ್ಕಾರ ಕುತಂತ್ರದಿಂದ ಸೆಪ್ಟಂಬರ್ 14ರಂದು ಹಿಂದಿ ದಿವಸ್ ಆಚರಿಸುತ್ತಾ ಬಂದಿದೆ. ಪ್ರತಿಭಟನೆ ವೇಳೆ ಹಿಂದಿ ಭಾಷಿಕ ರಾಜ್ಯಗಳಲ್ಲಿ ಮಾತ್ರ ಹಿಂದಿ ಸಿಮೀತವಿರಲಿದೆ. ಒತ್ತಾಯದಿಂದ ಕನ್ನಡಿಗರ ಮೇಲೆ ಹೇರುವುದು ಬೇಡ ಎಂದು ಜೆಡಿಎಸ್‌ ಆಗ್ರಹಿಸಿದೆ.

'ಹಿಂದಿ ದಿವಸ್' ಬದಲು ನಾಡಭಾಷೆ ದಿನ ಆಚರಣೆಗೆ ಕೆಆರ್‌ಎಸ್ ಪಕ್ಷದ ಕರೆ'ಹಿಂದಿ ದಿವಸ್' ಬದಲು ನಾಡಭಾಷೆ ದಿನ ಆಚರಣೆಗೆ ಕೆಆರ್‌ಎಸ್ ಪಕ್ಷದ ಕರೆ

HD kumaraswamy led JDS Protest against Hindi diwas in front of Vidhana Soudha

ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಜೆಡಿಎಸ್ ನಾಯಕರು 'ನಮಗೆ ಹಿಂದಿ ದಿವಸ್ ಬೇಕಿಲ್ಲ, ಹಿಂದಿ ಹೇರಿಕೆ ನಿಲ್ಲಿಸಿ' ಎಂದು ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರು ನಾಮಫಲಕ ಹಿಡಿದು ಪ್ರತಿಭಟಿಸಿದರು. ಜೆಡಿಎಸ್‌ನಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ. ಇಂದು ಮಧ್ಯಾಹ್ನ ಬೆಂಗಳೂರಿನ ಜೆಡಿಎಸ್‌ ಕಚೇರಿ ಮುಂದೆಯು ಪ್ರತಿಭಟನೆ ಆಯೋಜಿಸಲಾಗಿದೆ.

ಈ ವೇಳೆ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಜೆಡಿಎಸ್ ಶಾಸಕಾಂಗ ಪಕ್ಷದ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ, ಮುಖಂಡರಾದ ಟಿ.ಎ ಶರವಣ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಜರಿದ್ದರು.

English summary
Former CM HD kumaraswamy led JDS Protest against Hindi diwas in front of Vidhana Soudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X