ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಊರಿಗೆ ಹೊರಟ ಕಾರ್ಮಿಕರು; ಸರ್ಕಾರವನ್ನು ಟೀಕಿಸಿದ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಮೇ 03 : ಬೆಂಗಳೂರು ನಗರದಲ್ಲಿ ಸಿಲುಕಿರುವ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಕರ್ನಾಟಕ ಸರ್ಕಾರ ಉಚಿತವಾಗಿ ಕೆಎಸ್ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಿದೆ. ಭಾನುವಾರ ಬೆಳಗ್ಗೆ 10ರಿಂದ ಬಸ್‌ಗಳ ಸಂಚಾರ ಆರಂಭವಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ)ಯ ಬಸ್‌ಗಳು ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್) ನಿಂದ ಸಂಚಾರ ಮಾಡುತ್ತಿವೆ. ಆದರೆ, ಊರಿಗೆ ಹೋಗುವ ಧಾವಂತದಲ್ಲಿ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ.

ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಸಂಚಾರ ನಡೆಸುವ ಕಾರ್ಮಿಕರಿಗೆ ಸೂಚನೆಗಳು ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಸಂಚಾರ ನಡೆಸುವ ಕಾರ್ಮಿಕರಿಗೆ ಸೂಚನೆಗಳು

ಸಾಮಾಜಿಕ ಅಂತರವನ್ನು ಕಾಪಾಡಲು ಅನುಕೂಲವಾಗುತ್ತದೆ ಎಂಬ ಕಾರಣಕ್ಕಾಗಿಯೇ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್‌ಗಳು ಸಂಚಾರ ನಡೆಸುತ್ತಿವೆ. ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ. ಆದರೆ, ಜನರು ಗುಂಪು ಗೂಡಿದ್ದು, ಆತಂಕ ಉಂಟು ಮಾಡಿದೆ.

ಲಾಕ್ ಡೌನ್; ನಷ್ಟದ ಲೆಕ್ಕ ಕೊಟ್ಟ ಕೆಎಸ್ಆರ್‌ಟಿಸಿ ಲಾಕ್ ಡೌನ್; ನಷ್ಟದ ಲೆಕ್ಕ ಕೊಟ್ಟ ಕೆಎಸ್ಆರ್‌ಟಿಸಿ

"ವಲಸೆ ಕಾರ್ಮಿಕರು ಊರಿಗೆ ಹೋಗಲು ಅವಕಾಶ ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಜನರು ಭಾರಿ ಪ್ರಮಾಣದಲ್ಲಿ ಗುಂಪುಗೂಡುವಂತೆ ಮಾಡಿದೆ. ಈ ಮೂಲಕ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ವೇತನ ಕಡಿತ, ಕೆಲಸದಿಂದ ಕಿತ್ತು ಹಾಕಿದರೆ ಕಾರ್ಮಿಕರು ದೂರು ಕೊಡಿ ವೇತನ ಕಡಿತ, ಕೆಲಸದಿಂದ ಕಿತ್ತು ಹಾಕಿದರೆ ಕಾರ್ಮಿಕರು ದೂರು ಕೊಡಿ

ಸರ್ಕಾರ ಚೆಲ್ಲಾಟವಾಡುತ್ತಿದೆ

ಸರ್ಕಾರ ಚೆಲ್ಲಾಟವಾಡುತ್ತಿದೆ

"ಪೂರ್ವ ಸಿದ್ಧತೆಗಳಿಲ್ಲದೇ ಜಾರಿ ಮಾಡಲಾದ ಲಾಕ್‌ಡೌನ್‌ಅನ್ನು ಈಗ ಮುನ್ನೆಚ್ಚರಿಕೆ ಇಲ್ಲದೇ ಸಡಿಲ ಮಾಡಲಾಗಿದೆ. ವಲಸೆ ಕಾರ್ಮಿಕರು ಊರಿಗೆ ಹೋಗಲು ಅವಕಾಶ ಮಾಡಿಕೊಟ್ಟಿರುವ ರಾಜ್ಯ ಸರ್ಕಾರ ಜನರು ಭಾರಿ ಪ್ರಮಾಣದಲ್ಲಿ ಗುಂಪುಗೂಡುವಂತೆ ಮಾಡಿದೆ. ಈ ಮೂಲಕ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ" ಎಂದು ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು

"ಇಷ್ಟು ದಿನ ಸಾವಿರಾರು ಕೋಟಿ ರೂಪಾಯಿಗಳನ್ನು ನಷ್ಟ ಮಾಡಿಕೊಂಡು ಪಾಲಿಸಲಾದ ಲಾಕ್‌ಡೌನ್‌ನಿಂದ ಗಳಿಸಿಕೊಂಡಿದ್ದನ್ನು ಸರ್ಕಾರ ಒಂದು ಅವೈಜ್ಞಾನಿಕ ನಡೆಯಿಂದ ಕಳೆದುಕೊಳ್ಳಬಾರದು. ಕಾರ್ಮಿಕರು ಮತ್ತು ಹಳ್ಳಿಗಳು ಸೌಖ್ಯವಾಗಿರಬೇಕು. ಈ ನಿಟ್ಟಿನಲ್ಲಿ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನೂ ಕೈಗೊಳ್ಳಬೇಕು" ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಪರೀಕ್ಷೆಗಳು ನಡೆಯಲಿ

ಪರೀಕ್ಷೆಗಳು ನಡೆಯಲಿ

"ಕಾರ್ಮಿಕರನ್ನು ಊರುಗಳಿಗೆ ತಲುಪಿಸುವುದು ಆಗಬೇಕಾದ ಕಾರ್ಯವೇ. ಆದರೆ, ಈ ಕಾರ್ಯದಲ್ಲಿ ಅವರ ಆರೋಗ್ಯಕ್ಕೆ ಅಪಾಯ ಎದುರಾಗಬಾರದು. ಅವರ ಹಿತಕ್ಕಾಗಿ ಕೈಗೊಂಡ ಈ ನಿರ್ಧಾರವೇ ಅವರಿಗೆ ಸಂಚಕಾರವಾಗಿ ಪರಿಣಮಿಸಬಾರದು. ಬಸ್‌ ಗಳಲ್ಲೂ ದೈಹಿಕ ಅಂತರ ಪಾಲನೆಯಾಗಲಿ, ಸೂಕ್ತ ರೀತಿಯ ಪರೀಕ್ಷೆಗಳು ನಡೆಯಲಿ" ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಉಚಿತ ಪ್ರಯಾಣ ಅನ್ವಯ ಇಲ್ಲ

ಉಚಿತ ಪ್ರಯಾಣ ಅನ್ವಯ ಇಲ್ಲ

"ಕೂಲಿ ಕಾರ್ಮಿಕರಿಗೆ ಅವರವರ ಊರಿಗೆ ಮರಳಲು ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಆದರೆ, ಈ ಸೌಲಭ್ಯ ಐಟಿ-ಬಿಟಿ ವಲಯದ ಉದ್ಯೋಗಿಗಳಿಗೆ ಅನ್ವಯವಾಗುವುದಿಲ್ಲ" ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

English summary
Farmer chief minister of Karnataka H.D.Kumaraswamy raised questions about health of workers and poor wage labourers who allowed to travel in KSRTC buses from Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X