1610 ಕೋಟಿಯ ವಿಶೇಷ ಪ್ಯಾಕೇಜ್ ಪ್ರಚಾರಕ್ಕೆ ಸೀಮಿತ: ಕುಮಾರಸ್ವಾಮಿ

ಕೊರೊನಾ ವೈರಸ್‌ ಲಾಕ್‌ಡೌನ್‌ ಹಿನ್ನೆಲೆ ಆರ್ಥಿಕವಾಗಿ ಸಂಕಷ್ಟ ಅನುಭವಿಸಿದ್ದ ಎಲ್ಲ ವರ್ಗದ ಬಡಜನರಿಗೆ 1,610 ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಿದ್ದರು. ಈ ಪ್ಯಾಕೇಜ್ ಕುರಿತು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಡಿಯೂರಪ್ಪ ಘೋಷಿಸಿರುವ ವಿಶೇಷ ಪ್ಯಾಕೇಜ್ ಕೇವಲ ಪ್ರಚಾರಕ್ಕೆ ಮಾತ್ರ ಸೀಮಿತ ಎಂದು ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ''ಈ ಯೋಜನೆ ಯಶಸ್ಸು ಕಾಣಲ್ಲ. ಇದು ಕೇವಲ ಪ್ರಚಾರದ ಘೋಷಣೆ ಅಷ್ಟೇ. ಕೊರೋನಾ ಲಾಕ್ ಡೌನ್ ವಿಚಾರದಲ್ಲಿ ಸರ್ಕಾರ ಪ್ರಮಾಣಿಕವಾಗಿ ಕೆಲಸ ಮಾಡ್ಬೇಕು. ಜನರಿಗೆ ದೋಖಾ ಮಾಡುವ ಕೆಲಸ ನಡೆಯುತ್ತಿದೆ. ಫಲಾನುಭವಿಗಳಿಗೆ ಇದರ ಲಾಭ ದೊರೆಯಲ್ಲ' ಎಂದು ವಾಗ್ದಾಳಿ ನಡೆಸಿದ್ದಾರೆ.

'ಸರ್ಕಾರ ಹಲವು ವರ್ಗಗಳಿಗೆ ಪರಿಹಾರ ಘೋಷಣೆ ಮಾಡಿದೆ. ಅದ್ರೆ, ಆ ವರ್ಗದ ಜನರನ್ನ ಗುರುತಿಸುವ ಕೆಲಸ ಆಗಿದ್ಯಾ. ಅವರಿಗೆ ಹೇಗೆ ಪರಿಹಾರ ತಲುಪಿಸುತ್ತಿರಾ...? ಇವತ್ತು ದಾನಿಗಳಿಂದ ಬಡವರು ಉಳಿದಿದ್ದಾರೆಯೇ ಹೊರತು, ಸರ್ಕಾರದಿಂದಲ್ಲ. ಜನ ಸಂಕಷ್ಟದಲ್ಲಿದ್ದಾರೆ, ಜನರ ನೆರವಿಗೆ ನಿಲ್ಲಿ ಈ ಸಂದರ್ಭದಲ್ಲೂ ಲೂಟಿ ಹೊಡೆಯೋ ಕೆಲಸ ಮಾಡ್ಬೇಡಿ' ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

HD Kumaraswamy Reaction About Lockdown Special Package

'1600 ಕೋಟಿ ಪ್ಯಾಕೇಜ್ ಘೋಷಣೆ ಮುನ್ನಾ ಪೂರ್ವ ತಯಾರಿ ಮಾಡ್ಕೊಂಡಿದ್ದೀರಾ. ಇದು ಕೂಡ ನೆರೆ ಪರಿಹಾರದ ರೀತಿಯಲ್ಲೇ ಆಗುತ್ತೆ. ನೆರೆಯಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ ಕೊಡ್ತೀವಿ ಅಂದ್ರು, ಎಷ್ಟು ಜನರಿಗೆ ಕೊಟ್ಟಿದ್ದಾರೆ. ಅದೇ ರೀತಿ ವಿಶೇಷ ಪ್ಯಾಕೇಜ್ ಕೂಡ ಪ್ರಚಾರಕ್ಕೆ ಸೀಮಿತ ಆಗುತ್ತೆ' ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+