ಪ್ರತಿಭಟನಾಕಾರರ ಬಂಧಿಸಿದ ಇದು ಸ್ಟಾಲಿನ್ ಅಧೀನದ ಬಾಡಿಗೆ ಸರ್ಕಾರ: ಇದೆಂಥಾ ಚೋದ್ಯ: HDK
ಬೆಂಗಳೂರು, ಸೆಪ್ಟಂಬರ್ 26: ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದು. ಆದರೆ ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಎಂದು ಬೆಂಗಳೂರು ಬಂದ್ ಪ್ರತಿಭಟನಾಕಾರರ ಬಂಧನಕ್ಕೆ ಸಂಬಂಧಿಸಿದ್ದಂತೆ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಬೆಂಗಳೂರು ಬಂದ್ ಕುರಿತು ಮಂಗಳವಾರ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರವು ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ ಎಂದು ಆಕ್ರೊಶ ಹೊರ ಹಾಕಿದ್ದಾರೆ.

ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು
ಕರ್ನಾಟಕ ಕಾಂಗ್ರೆಸ್ ಸರಕಾರದ ಕಿಡಿಗೇಡಿತನದ ಪರಮಾವಧಿ.
ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು @INCKarnataka ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ,…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 26, 2023
ಇದು ಸ್ಟಾಲಿನ್ ಅಧೀನದ ಬಾಡಿಗೆ ಸರ್ಕಾರ
ಕರ್ನಾಟಕದಲ್ಲಿ ಕಾಂಗ್ರೆಸ್ ನವರಿಗೆ ಒಂದು ನ್ಯಾಯವಾದರೆ, ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಬೀದಿಗಿಳಿದ ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ?. ಇದೇನು ಕನ್ನಡಿಗರ ಸರ್ಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ? ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.
ಪೊಲೀಸರು ಶೀಘ್ರವೇ ಹೋರಾಟಗಾರರು, ರೈತರನ್ನು ಕೂಡಲೇ ಬಂಧ ಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ.

ತಮ್ಮ ಟ್ವೀಟ್‌ನಲ್ಲಿ ಎಚ್‌ಡಿ ಕುಮಾರಸ್ವಾಮಿ ಅವರು ಬೆಂಗಳೂರು ಬಂದ್, ಕಾವೇರಿ ನಮ್ಮದು ಹ್ಯಾಷ್ ಟ್ಯಾಗ್ ಹಾಕಿ ಟ್ವೀಟ್ ಮಾಡಿದ್ದಾರೆ. ಇದಕ್ಕೂ ಮೊದಲು ಮತ್ತೊಂದು ಟ್ವೀಟ್‌ನಲ್ಲಿ ತಾವು ಬೆಂಗಳೂರು ಬಂದ್ ಗೆ ಸಂಪೂರ್ಣವಾಗಿ ಬೆಂಬಲಿಸುವುದಾಗಿ ಅವರು ತಿಳಿಸಿದ್ದರು.
ಆದರೆ ಹೋರಾಟ ಶಾಂತಿಯುತವಾಗಲಿದೆ. ಬಂದ್ ಯಶಸ್ವಿ ಆಗಲಿ. ಇನ್ನೂ ನಮ್ಮ ಜೆಡಿಎಸ್ ಪಕ್ಷದ ಕಾರ್ಯಕರ್ತರು ಕೂಡ ಬಂದ್ ನಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.












Click it and Unblock the Notifications