ಮಂಗಳೂರು ಗಲಭೆ: ಪೊಲೀಸರ ವಿರುದ್ಧ ಕುಮಾರಸ್ವಾಮಿ ವಿಡಿಯೋ ಬಿಡುಗಡೆ
Recommended Video
ಬೆಂಗಳೂರು, ಜನವರಿ 10: ಮಂಗಳೂರು ಗಲಭೆ ಕುರಿತಂತೆ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ ನಂತರ ಈಗ ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ಪೊಲೀಸರ ವಿರುದ್ಧ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಪತ್ರಕರ್ತರಿಗೆ ವಿಡಿಯೋ ಪ್ರದರ್ಶಿಸಿ ನಂತರ ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಕೆಲವು ಚಿತ್ರಗಳನ್ನೂ ಬಿಡುಗಡೆ ಮಾಡಿದ್ದಾರೆ.
ಕುಮಾರಸ್ವಾಮಿ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಪೊಲೀಸರು ಅಮಾಯಕರನ್ನು, ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಹಲ್ಲೆ ಮಾಡುತ್ತಿರುವ ದೃಶ್ಯಾವಳಿಗಳಿವೆ.

ಸಿಎಎ-ಎನ್‌ಆರ್‌ಸಿ ಪ್ರತಿಭಟನೆ ಸಂಬಂಧ ಮಂಗಳೂರಿನಲ್ಲುಂಟಾದ ಗಲಭೆ ಕುರಿತು ಸರ್ಕಾರದ ತಪ್ಪುಗಳನ್ನು ಮುಚ್ಚಿಹಾಕುವ ಯತ್ನ ಮಾಡುತ್ತಿದೆ ಎಂದು ಆರೋಪಿಸಿದ ಕುಮಾರಸ್ವಾಮಿ ಈ ಸಂಭಂದ ಹಲವು ಮಾಹಿತಿ ಸಂಗ್ರಹ ಮಾಡಿದ್ದೇನೆ, ಇನ್ನೂ ಕೆಲವು ಮಾಹಿತಿ ಸಂಗ್ರಹಿಸುತ್ತಿದ್ದೇನೆ ಈ ಬಗ್ಗೆ ಹೋರಾಟ ಮಾಡುತ್ತೇನೆ ಎಂದಿದ್ದಾರೆ.
ಮಂಗಳೂರು ಗೋಲುಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಿಷನರ್ ಡಾ. ಹರ್ಷಾ ಅಮಾನತ್ತು ಮಾಡಬೇಕು ಎಂದು ಒತ್ತಾಯಿಸಿದ ಕುಮಾರಸ್ವಾಮಿ, ತನಿಖೆ ನಡೆಸಲು ಸದನ ಸಮಿತಿ ರಚಿಸಬೇಕು, ಇದೇ ವಿಚಾರ ಇಟ್ಟುಕೊಂಡು ವಿಧಾನಸಭೆಯಲ್ಲಿ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.












Click it and Unblock the Notifications