ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

TV5 ವಿರುದ್ಧ ಪ್ರತಿಭಟನೆ ನಿಲ್ಲಿಸಲು ಕಾರ್ಯಕರ್ತರಿಗೆ ಕುಮಾರಸ್ವಾಮಿ ಮನವಿ

|
Google Oneindia Kannada News

ಬೆಂಗಳೂರು, ನವೆಂಬರ್ 29: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅನಾರೋಗ್ಯಕ್ಕೆ ತುತ್ತಾಗಿರುವುದರಿಂದ ರಾಜೀನಾಮೆ ನೀಡಲಿದ್ದಾರೆ ಎಂದು ವರದಿ ಬಿತ್ತರಿಸಿದ್ದ TV5 ಸುದ್ದಿ ವಾಹಿನಿ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯನ್ನು ನಿಲ್ಲಿಸುವಂತೆ ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗಳ ಕಚೇರಿ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

ಸಿಎಂ ರಾಜೀನಾಮೆ ಸುದ್ದಿ ಪ್ರಸಾರ; ಟಿವಿ5 ವಿರುದ್ಧ ದೂರು ದಾಖಲಿಸಿದ ಜೆಡಿಎಸ್ ಸಿಎಂ ರಾಜೀನಾಮೆ ಸುದ್ದಿ ಪ್ರಸಾರ; ಟಿವಿ5 ವಿರುದ್ಧ ದೂರು ದಾಖಲಿಸಿದ ಜೆಡಿಎಸ್

'ಭಾರತೀಯ ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳು ಹೊಂದಿರುವ ಅಭಿಪ್ರಾಯ ಸ್ವಾತಂತ್ರ್ಯವನ್ನು ನಾನು ಗೌರವಿಸುತ್ತೇನೆ' ಎಂಬುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

HD Kumaraswamy requested jds workers to stop protest against tv5 news channel

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಹೀಗಾಗಿ ಅವರು ಮುಂದಿನ ತಿಂಗಳಲ್ಲಿ ರಾಜೀನಾಮೆ ನೀಡಲಿದ್ದಾರೆ ಎಂದು ಸುದ್ದಿ ವಾಹಿನಿ 'ಎಕ್ಸ್‌ಕ್ಲ್ಯೂಸಿವ್ ಸುದ್ದಿ' ಪ್ರಸಾರ ಮಾಡಿತ್ತು.

ಸುದ್ದಿ ಪ್ರಸಾರವಾದ ಕೂಡಲೇ ಕುಮಾರಸ್ವಾಮಿ, 'ಅನಾರೋಗ್ಯದ ಕಾರಣಗಳಿಂದ ನಾನು ರಾಜೀನಾಮೆ ನೀಡಲಿದ್ದೇನೆ ಎಂದು ಕೆಲ ಟಿವಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಯು ಸತ್ಯಕ್ಕೆ ದೂರವಾಗಿದ್ದು, ಪ್ರಸಾರವಾಗುತ್ತಿರುವ ಎಲ್ಲ ಅಂಶಗಳು ಆಧಾರ ರಹಿತವಾಗಿವೆ' ಎಂದು ಸ್ಪಷ್ಟೀಕರಣ ನೀಡಿದ್ದರು.

ನಾನು ರಾಜೀನಾಮೆ ನೀಡಲಿದ್ದೇನೆ ಎಂಬ ಸುದ್ದಿ ಸುಳ್ಳು ಎಂದ ಕುಮಾರಸ್ವಾಮಿ ನಾನು ರಾಜೀನಾಮೆ ನೀಡಲಿದ್ದೇನೆ ಎಂಬ ಸುದ್ದಿ ಸುಳ್ಳು ಎಂದ ಕುಮಾರಸ್ವಾಮಿ

ಇದರ ಬೆನ್ನಲ್ಲೇ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ವಾಹಿನಿ ವಿರುದ್ಧ ದೂರು ದಾಖಲು ಮಾಡಲಾಗಿತ್ತು. ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ವಾಹಿನಿಯ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಆರಂಭಿಸಿದ್ದರು.

English summary
Chief Minister HD Kumaraswamy requested his party workerd to stop the protest against TV5 news channel for allegedly telecasted a fake news on Kumaraswamy's resignation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X