ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿರ್ಮಲಾನಂದನಾಥ ಸ್ವಾಮೀಜಿ ಫೋನ್ ಕದ್ದಾಲಿಕೆ: ಎಚ್ಡಿಕೆ ಏನಂದ್ರು?

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 29: ನನ್ನ ಅವಧಿಯಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್ ಟ್ಯಾಪಿಂಗ್ ನಡೆದಿತ್ತು ಎನ್ನುವ ರಾಜಕೀಯ ನಾಯಕರ ಹೇಳಿಕೆ ನೋವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಫೋನ್ ಕದ್ದಾಲಿಕೆ ಪ್ರಕರಣ ಬಹಿರಂಗಗೊಂಡಿದ್ದು ಆ ಒಂದು ಮೊಬೈಲ್ ಸಂಖ್ಯೆಯಿಂದಫೋನ್ ಕದ್ದಾಲಿಕೆ ಪ್ರಕರಣ ಬಹಿರಂಗಗೊಂಡಿದ್ದು ಆ ಒಂದು ಮೊಬೈಲ್ ಸಂಖ್ಯೆಯಿಂದ

ಪೋನ್ ಕದ್ದಾಲಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐಗೆ ಒಂದಾದ ಮೇಲೊಂದು ಮಾಹಿತಿ ಸಿಗುತ್ತಿದ್ದು, ಸಿಸಿಬಿ ಅಧಿಕಾರಿಗಳು ರಕ್ತಚಂದನದ ಸ್ಮಗ್ಲರ್ಗಳ ಪಟ್ಟಿಯಲ್ಲಿ ಆದಿಚುಂಚನಗಿರಿ ಮಠಾಧಿಪತಿ ಡಾ. ನಿರ್ಮಲಾನಂದನಾಥಸ್ವಾಮೀಜಿ ಅವರ ಫೋನ್ ಸಂಖ್ಯೆ ಸೇರಿಸಿ ಕದ್ದಾಲಿಕೆ ನಡೆಸಿದ್ದರು ಎಂಬ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿದ್ದಾರೆ.

ಕುಮಾರಸ್ವಾಮಿ ಟ್ವೀಟಿನಲ್ಲಿರುವುದೇನು?

ನನ್ನ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ, ಖಂಡಿತ ಇಲ್ಲ.

ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪ

ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪಿಸಲಾಗಿದೆ. ಸಂಭವಿಸದ ತಪ್ಪೊಂದಕ್ಕೆ ಅಶೋಕ್ ಅವರು ಎಲ್ಲರಿಗಿಂತಲೂ ಮುಂದೆ ಹೋಗಿ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ. ಅವರ ಆತುರಕ್ಕೆ ಮರುಕವಿದೆ. ಅದೇ ಹೊತ್ತಲ್ಲೇ ಶ್ರೀಗಳಿಗಾಗುತ್ತಿರುವ ಬೇಸರದಿಂದ ನನಗೆ ನೋವಾಗಿದೆ.

ಸ್ವಾಮೀಜಿ ನನಗೆ ನೈತಿಕ ಬಲವಾಗಿದ್ದವರು

ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದವರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದವರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದವರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ.

ಫೋನ್ ಟ್ಯಾಪಿಂಗ್: ಎಡಿಜಿಪಿ ಅಲೋಕ್ ಕುಮಾರ್ ವರ್ಗಾವಣೆ

 ಎಚ್‌ಡಿಕೆ ಸ್ವಾರ್ಥಕ್ಕಾಗಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ

ಎಚ್‌ಡಿಕೆ ಸ್ವಾರ್ಥಕ್ಕಾಗಿ ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ

ಸ್ವಾರ್ಥ, ಅಧಿಕಾರಕ್ಕಾಗಿ ಎಷ್ಟು ಕೀಳುಮಟ್ಟಕ್ಕೆ ಇಳಿಯಬಹುದು ಎನ್ನುವುದರಲ್ಲಿ ಕುಮಾರಸ್ವಾಮಿಯವರಿಗೆ ಸರಿಸಾಟಿಯಿಲ್ಲ. ಇಡೀ ದೇಶವೇ ಗೌರವಿಸುವ ಶ್ರೀಗಳ ಫೋನ್ ಕದ್ದಾಲಿಸಿದ್ದು ಮಾತ್ರವಲ್ಲದೆ, ಸ್ಮಗ್ಲರ್ ಗಳ ಪಟ್ಟಿಯಲ್ಲಿ ಸೇರಿಸಿ, ಅಕ್ಷಮ್ಯ ಅಪರಾಧ ಎಸಗಿದ್ದಾರೆ. ಅವರಲ್ಲಿ ಸ್ವಲ್ಪವಾದರೂ ನೈತಿಕತೆ ಉಳಿದಿದ್ದರೆ ಮೊದಲು ಗುರುಗಳ ಕ್ಷಮೆ ಕೇಳಲಿ ಎಂದು ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

English summary
Former Chief Minister HD Kumaraswamy gave clarification on Phone Tapping.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X