ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಲಸೆ ಕಾರ್ಮಿಕರ ನೆರವಿಗೆ ಸರ್ಕಾರ ಧಾವಿಸಬೇಕು: ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 7: ಅನ್ನ, ಆಹಾರವಿಲ್ಲದೆ ಬೀದಿಗೆ ಬೀಳುತ್ತಿರುವ ವಲಸೆ ಕಾರ್ಮಿಕರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಹುಟ್ಟೂರು ಸೇರಬೇಕೆಂಬ ಆಸೆಯೊಂದಿಗೆ ಹಸಿವಿನಲ್ಲೇ ರಾಯಚೂರಿನತ್ತ ಹೆಜ್ಜೆ ಹಾಕುತ್ತಿದ್ದ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಎಂಬುವರು ಮಾರ್ಗ ಮಧ್ಯೆ ಅನ್ನಾಹಾರವಿಲ್ಲದೆ, ಸಕಾಲಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟರೆಂಬ ಸುದ್ದಿ ತೀವ್ರ ನೋವುಂಟುಮಾಡಿತು. ಗಂಗಮ್ಮ ಅವರ ಈ ಪ್ರಕರಣ ವಲಸೆ ಕಾರ್ಮಿಕರು, ಕೂಲಿಕಾರ್ಮಿಕರ ಬದುಕನ್ನು ಸಾಕ್ಷೀಕರಿಸುವಂತಿದೆ ಎಂದು ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ಹೇಳಿಕೆ ಬಗ್ಗೆ ರಿಯಾಲಿಟಿ ಚೆಕ್ ಮಾಡಿದ ಸಿದ್ದರಾಮಯ್ಯ!ಸಿಎಂ ಯಡಿಯೂರಪ್ಪ ಹೇಳಿಕೆ ಬಗ್ಗೆ ರಿಯಾಲಿಟಿ ಚೆಕ್ ಮಾಡಿದ ಸಿದ್ದರಾಮಯ್ಯ!

ಲಾಕ್‌ಡೌನ್‌ ಮಧ್ಯಮ ವರ್ಗ ಮತ್ತು ಶ್ರೀಮಂತರನ್ನು ಮನೆಯಲ್ಲಿ ಬಂಧಿಸಿಟ್ಟಿರಬಹುದು. ಆದರೆ, ಕೂಲಿಕಾರ್ಮಿಕರನ್ನು, ವಲಸಿಗರನ್ನು ಬೀದಿಗೆ ತಳ್ಳಿದೆ. ಸರ್ಕಾರ ಕೂಡಲೇ ಇಂಥವರ ಕಡೆಗೂ ಗಮನ ಹರಿಸಬೇಕು. ದೂರದೂರುಗಳಿಗೆ ಹೆಜ್ಜೆ ಹಾಕಿರುವವರ ಬದುಕು ಬವಣೆನ್ನು ನೋಡಬೇಕು. ಮೃತ ಗಂಗಮ್ಮನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

HD Kumaraswamy Series Of Tweet About Migrant Labours

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಗಂಗಮ್ಮ ಪ್ರಕರಣದಲ್ಲಿ ಕೂಲಿ ನೀಡದ ಗುತ್ತಿಗೆದಾರನೊಬ್ಬನದ್ದೇ ತಪ್ಪಿಲ್ಲ. ಸರ್ಕಾರದ್ದೂ ತಪ್ಪಿದೆ. ಕಾರ್ಮಿಕರ ಇಲಾಖೆಯಲ್ಲಿ 8000 ಕೋಟಿ ರೂ. ಹಣವಿದೆ. ಆದರೆ ಇಂಥವರಿಗೆ ವಿನಿಯೋಗವಾಗುತ್ತಿಲ್ಲವೇಕೆ? ಆಕೆಯನ್ನು ಬಳ್ಳಾರಿ ಜಿಲ್ಲಾಡಳಿತ ನಿರಾಶ್ರಿತರ ಕ್ಯಾಂಪ್‌ನಲ್ಲಿ ಇರಿಸಿತ್ತಂತೆ. ಕ್ಯಾಂಪ್‌ನಲ್ಲಿದ್ದೂ ಆಕೆಗೆ ಆಹಾರ, ಚಿಕಿತ್ಸೆ ಸಿಗಲಿಲ್ಲ ಏಕೆ? ಎಂದು ಪ್ರಶ್ನಿಸಿದ್ದಾರೆ.

ವಿದೇಶದಿಂದ ಬಂದ ಸೋಂಕು ಅತ್ತ ಸಾವಿರಾರು ಸಂಖ್ಯೆಯಲ್ಲಿ ಜನರನ್ನು ಬಾಧಿಸುತ್ತಿದೆ. ಇತ್ತ, ದೇಶದ ಅಭಿವೃದ್ಧಿಗೆ ಹೆಗಲಾದವರು, ದೇಶ ಕಟ್ಟಿದವರು, ಕಟ್ಟುವ ಕೆಲಸಕ್ಕೆ ಮಣ್ಣು, ಕಲ್ಲು, ಇಟ್ಟಿಗೆ ಹೊತ್ತವರು ತಾವು ಮಾಡದ ತಪ್ಪಿಗೆ ಅನ್ನಾಹಾರಗಳಿಲ್ಲದೇ ಸಾವಿಗೆ ಶರಣಾಗುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

English summary
Due To Lockdown Migrants labours are suffering they are not getting proper food but for not their mistakes Says Former Chief Minister HD Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X