ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಂದಿನಿ ಕನ್ನಡಿಗರ ಜೀವನಾಡಿ, ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮ: ಎಚ್‌ಡಿ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜ. 01: "ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಶುಕ್ರವಾರ ಮಂಡ್ಯದ ಗೆಜ್ಜಲಗೆರೆ ಡೈರಿ ಆವರಣದಲ್ಲಿ ಮೆಗಾ ಡೈರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ್ದ ಅವರು, ನಂದಿನಿ ಮತ್ತು ಅಮೂಲ್ ವಿಲೀನದ ಬಗ್ಗೆ ಪ್ರಸ್ತಾಪವಿಟ್ಟಿದ್ದರು.

ಅಮೂಲ್ ಹಾಗೂ ನಂದಿನಿ ಒಟ್ಟಿಗೆ ಕೆಲಸ ಮಾಡಬೇಕು. ಇದರಿಂದ ಎಲ್ಲಾ ಹಳ್ಳಿಗಳಲ್ಲಿ ಪ್ರೈಮರಿ ಡೈರಿ ಸ್ಥಾಪನೆ ಮಾಡಬಹುದು. ಎನ್‌ಡಿಡಿ ಮೂಲಕ ಪ್ರತಿ ಪಂಚಾಯತಿಯಲ್ಲಿ ಡೈರಿ ಸ್ಥಾಪನೆ ಮಾಡಲಾಗುತ್ತದೆ. ಎರಡು ಲಕ್ಷ ಪ್ರೈಮರಿ ಡೈರಿ ನಿರ್ಮಾಣ ಮಾಡುವ ಮೂಲಕ ಹೆಚ್ಚಿನ ಹಾಲನ್ನು ಸಂಗ್ರಹಿಸಬೇಕು. ಗುಜರಾತ್‌ನ ಅಮೂಲ್ ಹಾಗೂ ಕರ್ನಾಟಕದ ನಂದಿನಿ ಒಟ್ಟಿಗೆ ಸೇರಿ ಮತ್ತಷ್ಟು ಉತ್ಪಾದನೆ ಮಾಡಬೇಕು. ಇದಕ್ಕೆ ಬೇಕಾದ ಎಲ್ಲಾ ಪ್ರೋತ್ಸಾಹವನ್ನು ಸಹಕಾರ ಇಲಾಖೆ ನೀಡುತ್ತದೆ ಎಂದಿದ್ದರು.

HD Kumaraswamy Slams Amit Shah Over Nandini Amul Merger Issue

ಅಮಿತ್ ಶಾ ಅವರ ಹೇಳಿಕೆಗೆ ಭಾರೀ ವಿರೋಧ ಉಂಟಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್‌ಗಳ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಅಸಹನೆ, ಅಸೂಯೆ ವ್ಯಕ್ತಪಡಿಸುತ್ತಿದೆ ಎಂದು ಆರೋಪಿಸಿದ್ದಾರೆ.

"ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಕೇಂದ್ರ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ" ಎಂದು ಕಿಡಿ ಕಾರಿದ್ದಾರೆ.

"ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟ ವ್ಯಕ್ತಿ, ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಕಿವಿ ಹಿಂಡದ ವ್ಯಕ್ತಿ ಈಗ ಕನ್ನಡ ನೆಲದ ಮಣ್ಣಿನಮಕ್ಕಳ ಜೀವನಾಡಿ ಕರ್ನಾಟಕ ಹಾಲು ಮಹಾ ಮಂಡಳಿ (KMF- ನಂದಿನಿ) ಯನ್ನು ಗುಜರಾತಿನ ಅಮುಲ್ ನಲ್ಲಿ ವಿಲೀನ ಮಾಡುವ ಹೇಳಿಕೆ ನೀಡಿರುವುದು ಕನ್ನಡಿಗರಿಗೆ ಮಾಡಲು ಹೊರಟಿರುವ ಘೋರ ಅನ್ಯಾಯ" ಎಂದು ಪ್ರತಿಭಟಿಸಿದ್ದಾರೆ.

HD Kumaraswamy Slams Amit Shah Over Nandini Amul Merger Issue

"ಕರ್ನಾಟಕ ರಾಜ್ಯವನ್ನು ಗುಜರಾತ್ ಮಾಡುವ ಧೂರ್ತ ಹುನ್ನಾರ ಇದು. ಅಷ್ಟೇ ಅಲ್ಲ, ಗುಜರಾತ್ ಗೆ ಕರ್ನಾಟಕವೇ ಪ್ರತಿಸ್ಪರ್ಧಿ ಎನ್ನುವ ಕಾರಣಕ್ಕೆ ಅಭಿವೃದ್ಧಿಯಲ್ಲಿ ಕರ್ನಾಟಕವನ್ನು ಮುಗಿಸೇಬೀಡಬೇಕು ಎನ್ನುವ ದುರಾಲೋಚನೆ ಅಮಿತ್ ಶಾ ಅವರಿಗೆ ಸ್ಪಷ್ಟವಾಗಿ ಇದ್ದಂತಿದೆ" ಎಂದಿದ್ದಾರೆ.

"ದೇಶದ ಬೇರಾವ ರಾಜ್ಯದ ಮೇಲೆಯೂ ಇಲ್ಲದ ಅಸಹನೆ, ಅಸೂಯೆ, ವೈಷಮ್ಯ ಕರ್ನಾಟಕದ ಮೇಲೇಕೆ ಅಮಿತ್ ಶಾ ಅವರೇ ಎಂದು ನಾನು ಕೇಳುತ್ತಿದ್ದೇನೆ. ಕನ್ನಡಿಗರನ್ನು ಶತ್ರುಗಳಂತೆ ನೋಡುತ್ತಿದ್ದಾರೆ. ಕನ್ನಡಿಗರನ್ನು ಗುಜರಾತಿನ ಗುಲಾಮರನ್ನಾಗಿ ಮಾಡಲು ಶಾ ಅವರು ಷಡ್ಯಂತ್ರ ರೂಪಿಸಿದ್ದಾರೆ ಎನ್ನುವುದು ನನ್ನ ಅನುಮಾನ" ಎಂದು ಆರೋಪಿಸಿದ್ದಾರೆ.

"ನಂದಿನಿ ಕನ್ನಡಿಗರ ಜೀವನಾಡಿ. ಅದರ ತಂಟೆಗೆ ಬಂದರೆ ಬಿಜೆಪಿ ಭಸ್ಮವಾಗುತ್ತದೆ. ಇಡೀ ದೇಶವನ್ನೇ ಆಳಿದ ಕನ್ನಡಿಗರು ಯಾರೊಬ್ಬರ ಗುಲಾಮರಲ್ಲ. ಕರ್ನಾಟಕವನ್ನು ಆಕ್ರಮಣ ಮಾಡಿಕೊಳ್ಳುವ ಹಾಗೂ ಆರ್ಥಿಕ, ಕೈಗಾರಿಕೆ ಕ್ಷೇತ್ರಗಳಲ್ಲಿ ರಾಜ್ಯವನ್ನು ಹತ್ತಿಕ್ಕುವ ಹುನ್ನಾರ ಯಶಸ್ಸು ಕಾಣದು. ಬಿಜೆಪಿಯ ಬ್ರಹ್ಮರಾಕ್ಷಸ ರೂಪ ಕನ್ನಡಿಗರಿಗೆ ಈಗ ಅರಿವಾಗುತ್ತಿದೆ" ಎಂದು ಎಚ್ಚರಿಕೆ ನೀಡಿದ್ದಾರೆ.

"ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ ಬ್ಯಾಂಕ್‌ಗಳಿಗೆ ಅಡಿಯಾಳನ್ನಾಗಿಸಿ, ಹಿಂದಿ ಭಾಷಿಗರ ಉದ್ಧಾರಕ್ಕಾಗಿ ಕನ್ನಡಿಗರ ಅನ್ನ ಕಸಿದುಕೊಂಡ ಕೇಂದ್ರ ಬಿಜೆಪಿ ಈಗ, ನಂದಿನಿಯನ್ನು ಹೊಡೆದುಕೊಂಡು ಹೋಗಲು ಹಿಡನ್ ಅಜೆಂಡಾ ರೂಪಿಸಿದಂತಿದೆ. ಕರ್ನಾಟಕ ಎಂದಿಗೂ ಗುಜರಾತಿನ ವಸಾಹತು ಆಗುವುದಿಲ್ಲ" ಎಂದು ಆಕ್ರೋಶ ಹೊರಹಾಕಿದ್ದಾರೆ.

"ಅಮುಲ್ ಜತೆ ನಂದಿನಿ ವಿಲೀನ ಸಾಧ್ಯವಿಲ್ಲ. ನಮ್ಮ ರೈತರ ಅನ್ನ ಕಸಿಯುವ ಕೆಲಸವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೆಎಂಎಫ್ ಕನ್ನಡಿಗರ ಜೀವನಾಡಿ ಮಾತ್ರವಲ್ಲ, ಸಮಸ್ತ ಕನ್ನಡಿಗರ ಆಸ್ತಿ ಮತ್ತು ಅಸ್ಮಿತೆ. ಅಮಿತ್ ಶಾ ಅವರು ಇದೆಲ್ಲವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು" ಎಂದು ಕನ್ನಡಿಗರಿಗೆ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ.

English summary
Nandini Amul Merger Issue: Nandini is the lifeline of Kannadigas. BJP will be burnt if it comes to Nandini says former chief minister HD Kumaraswamy . know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X