ಏರೋ ಇಂಡಿಯಾದಲ್ಲಿ ಕನ್ನಡ ಕಡೆಗಣನೆ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ
ಬೆಂಗಳೂರು, ಫೆಬ್ರವರಿ 3: ನಗರದಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2011ರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತ್ರಿಭಾಷಾ ಸೂತ್ರ ಎಂದು ಜಪಿಸುತ್ತಿದ್ದ ಸರ್ಕಾರವು ಕನ್ನಡವನ್ನು ನಿರ್ಲಕ್ಷಿಸಿ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಫಲಕ ಹಾಕುವ ಮೂಲಕ ಕನ್ನಡ ನೆಲದಲ್ಲಿಯೇ ಕನ್ನಡಕ್ಕೆ ಅಒಚಾರ ಎಸಗಿದೆ ಎಂದು ಕಿಡಿಕಾರಿದ್ದಾರೆ.
ಭದ್ರಾವತಿಯಲ್ಲಿ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿಯೂ ಕನ್ನಡವನ್ನು ಕಡೆಗಣಿಸಲಾಗಿತ್ತು. ಅದಕ್ಕೆ ಕೇಂದ್ರದ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯವಲ್ಲ ಎಂದು ಪ್ರತಿಕ್ರಿಯೆ ಸಹ ನೀಡಲಾಗಿದೆ. ಈಗ ಬೆಂಗಳೂರಿನಲ್ಲಿ ಮತ್ತೆ ಅಪಚಾರ ಎಸಗಲಾಗಿದೆ ಎಂದಿರುವ ಕುಮಾರಸ್ವಾಮಿ, ವೇದಿಕೆ ಮೇಲಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯದ ಯಾವ ನಾಯಕರಿಗೂ ಈ ಅಪಮಾನ ಕಾಣಿಸಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಭದ್ರಾವತಿಯಲ್ಲಿ ಕಳೆದ ತಿಂಗಳು ಆರ್‌ಎಎಫ್ ಘಟಕಕ್ಕೆ ಅಮಿತ್ ಶಾ ಶಂಕುಸ್ಥಾಪನೆ ನೆರವೇರಿಸಿದ್ದರು. ಅಡಿಗಲ್ಲು ಬರಹಗಳು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿದ್ದು, ಕನ್ನಡವನ್ನು ಇಲ್ಲಿ ಕಡೆಗಣಿಸಲಾಗಿತ್ತು. ಆಗ ಕೂಡ ಕುಮಾರಸ್ವಾಮಿ ಅವರು ಸರಣಿ ಟ್ವೀಟ್‌ಗಳಲ್ಲಿ ಕನ್ನಡದ ಅವಗಣನೆಯನ್ನು ಖಂಡಿಸಿದ್ದರು. ಮುಂದೆ ಓದಿ.

ಇಂಗ್ಲಿಷ್ ಮತ್ತು ಹಿಂದಿ ರಾರಾಜಿಸುತ್ತಿವೆ
ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ. ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಮತ್ತೊಮ್ಮೆ ಕನ್ನಡಕ್ಕೆ ಅಪಚಾರ
ಕೇಂದ್ರ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಭದ್ರಾವತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಲಾಗಿತ್ತು. ಈ ಕುರಿತ ಆಕ್ಷೇಪಗಳಿಗೆ ಉತ್ತರಿಸಿದ್ದ ಕೇಂದ್ರ, ಕನ್ನಡ ಕಡ್ಡಾಯವಲ್ಲ ಎಂದಿತ್ತು. ಇದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕಹಿ ನೆನಪು ಮರೆಯುವ ಮೊದಲೇ ಬೆಂಗಳೂರಿನಲ್ಲಿ ಕನ್ನಡಕ್ಕೆ ಅಪಚಾರ ಮಾಡಲಾಗಿದೆ. ಇದು ಅತ್ಯಂತ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದ ನಾಯಕರಿಗೆ ಕಾಣಿಸಲಿಲ್ಲವೇ?
ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಆಯೋಜಿಸಿರುವ ಏರೋ ಇಂಡಿಯಾ ಕಾರ್ಯಕ್ರಮ ಉದ್ಘಾಟಿಸಿದ್ದರು. ಇದೇ ಸಂದರ್ಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದರು. ರಾಜ್ಯದ ಹಲವು ನಾಯಕರೂ ಅಲ್ಲಿದ್ದರು. ಇವರ್ಯಾರಿಗೂ ಕನ್ನಡಕ್ಕಾದ ಅಪಮಾನ ಕಾಣಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ತ್ರಿಭಾಷಾ ಸೂತ್ರ ಉಲ್ಲಂಘನೆ
ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು,ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೇ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ.ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ ಎಂದು ಕುಮಾರಸ್ವಾಮಿ ಅವರು ಭದ್ರಾವತಿಯ ಘಟನೆಯ ವಿರುದ್ಧ ಕಿಡಿಕಾರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications