ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏರೋ ಇಂಡಿಯಾದಲ್ಲಿ ಕನ್ನಡ ಕಡೆಗಣನೆ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 3: ನಗರದಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2011ರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತ್ರಿಭಾಷಾ ಸೂತ್ರ ಎಂದು ಜಪಿಸುತ್ತಿದ್ದ ಸರ್ಕಾರವು ಕನ್ನಡವನ್ನು ನಿರ್ಲಕ್ಷಿಸಿ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಫಲಕ ಹಾಕುವ ಮೂಲಕ ಕನ್ನಡ ನೆಲದಲ್ಲಿಯೇ ಕನ್ನಡಕ್ಕೆ ಅಒಚಾರ ಎಸಗಿದೆ ಎಂದು ಕಿಡಿಕಾರಿದ್ದಾರೆ.

ಭದ್ರಾವತಿಯಲ್ಲಿ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿಯೂ ಕನ್ನಡವನ್ನು ಕಡೆಗಣಿಸಲಾಗಿತ್ತು. ಅದಕ್ಕೆ ಕೇಂದ್ರದ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯವಲ್ಲ ಎಂದು ಪ್ರತಿಕ್ರಿಯೆ ಸಹ ನೀಡಲಾಗಿದೆ. ಈಗ ಬೆಂಗಳೂರಿನಲ್ಲಿ ಮತ್ತೆ ಅಪಚಾರ ಎಸಗಲಾಗಿದೆ ಎಂದಿರುವ ಕುಮಾರಸ್ವಾಮಿ, ವೇದಿಕೆ ಮೇಲಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯದ ಯಾವ ನಾಯಕರಿಗೂ ಈ ಅಪಮಾನ ಕಾಣಿಸಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ, ಜಾಹೀರಾತು ಬೈಲಾ ತಿದ್ದುಪಡಿ: ಬಿಬಿಎಂಪಿ ಆಯುಕ್ತನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ, ಜಾಹೀರಾತು ಬೈಲಾ ತಿದ್ದುಪಡಿ: ಬಿಬಿಎಂಪಿ ಆಯುಕ್ತ

ಭದ್ರಾವತಿಯಲ್ಲಿ ಕಳೆದ ತಿಂಗಳು ಆರ್‌ಎಎಫ್ ಘಟಕಕ್ಕೆ ಅಮಿತ್ ಶಾ ಶಂಕುಸ್ಥಾಪನೆ ನೆರವೇರಿಸಿದ್ದರು. ಅಡಿಗಲ್ಲು ಬರಹಗಳು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿದ್ದು, ಕನ್ನಡವನ್ನು ಇಲ್ಲಿ ಕಡೆಗಣಿಸಲಾಗಿತ್ತು. ಆಗ ಕೂಡ ಕುಮಾರಸ್ವಾಮಿ ಅವರು ಸರಣಿ ಟ್ವೀಟ್‌ಗಳಲ್ಲಿ ಕನ್ನಡದ ಅವಗಣನೆಯನ್ನು ಖಂಡಿಸಿದ್ದರು. ಮುಂದೆ ಓದಿ.

ಇಂಗ್ಲಿಷ್ ಮತ್ತು ಹಿಂದಿ ರಾರಾಜಿಸುತ್ತಿವೆ

ಇಂಗ್ಲಿಷ್ ಮತ್ತು ಹಿಂದಿ ರಾರಾಜಿಸುತ್ತಿವೆ

ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ. ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಮತ್ತೊಮ್ಮೆ ಕನ್ನಡಕ್ಕೆ ಅಪಚಾರ

ಮತ್ತೊಮ್ಮೆ ಕನ್ನಡಕ್ಕೆ ಅಪಚಾರ

ಕೇಂದ್ರ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಭದ್ರಾವತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಲಾಗಿತ್ತು. ಈ ಕುರಿತ ಆಕ್ಷೇಪಗಳಿಗೆ ಉತ್ತರಿಸಿದ್ದ ಕೇಂದ್ರ, ಕನ್ನಡ ಕಡ್ಡಾಯವಲ್ಲ ಎಂದಿತ್ತು. ಇದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕಹಿ ನೆನಪು ಮರೆಯುವ ಮೊದಲೇ ಬೆಂಗಳೂರಿನಲ್ಲಿ ಕನ್ನಡಕ್ಕೆ ಅಪಚಾರ ಮಾಡಲಾಗಿದೆ. ಇದು ಅತ್ಯಂತ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹಿಂದಿ ಸಮರ್ಥನೆ: ಸಾಹಿತಿ ದೊಡ್ಡರಂಗೇಗೌಡ ಕ್ಷಮಾಪಣೆಹಿಂದಿ ಸಮರ್ಥನೆ: ಸಾಹಿತಿ ದೊಡ್ಡರಂಗೇಗೌಡ ಕ್ಷಮಾಪಣೆ

ರಾಜ್ಯದ ನಾಯಕರಿಗೆ ಕಾಣಿಸಲಿಲ್ಲವೇ?

ರಾಜ್ಯದ ನಾಯಕರಿಗೆ ಕಾಣಿಸಲಿಲ್ಲವೇ?

ರಕ್ಷಣಾ‌ ಸಚಿವ ರಾಜನಾಥ್‌ಸಿಂಗ್ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಆಯೋಜಿಸಿರುವ ಏರೋ ಇಂಡಿಯಾ ಕಾರ್ಯಕ್ರಮ‌ ಉದ್ಘಾಟಿಸಿದ್ದರು. ಇದೇ ಸಂದರ್ಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದರು. ರಾಜ್ಯದ ಹಲವು ನಾಯಕರೂ ಅಲ್ಲಿದ್ದರು. ಇವರ್ಯಾರಿಗೂ ಕನ್ನಡಕ್ಕಾದ ಅಪಮಾನ ಕಾಣಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ತ್ರಿಭಾಷಾ ಸೂತ್ರ ಉಲ್ಲಂಘನೆ

ತ್ರಿಭಾಷಾ ಸೂತ್ರ ಉಲ್ಲಂಘನೆ

ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು,ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೇ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ.ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ ಎಂದು ಕುಮಾರಸ್ವಾಮಿ ಅವರು ಭದ್ರಾವತಿಯ ಘಟನೆಯ ವಿರುದ್ಧ ಕಿಡಿಕಾರಿದ್ದರು.

ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಮೇಲೆ ಗಂಭೀರ ಆರೋಪ ಮಾಡಿದ ಕಾಂಗ್ರೆಸ್!ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಮೇಲೆ ಗಂಭೀರ ಆರೋಪ ಮಾಡಿದ ಕಾಂಗ್ರೆಸ್!

English summary
Former CM HD Kumaraswamy slammed the Centre and state government for again neglecting and insulting Kannada during Aero India show.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X