ಬೇರೊಬ್ಬರನ್ನು ರಾಷ್ಟ್ರಪತಿ ಅಭ್ಯರ್ಥಿ ಮಾಡಿದ್ದಾಗ ಆದಿವಾಸಿ ಮಹಿಳೆ ಎಂಬುದನ್ನು ಕಾಂಗ್ರೆಸ್ ಮರೆತಿತ್ತಾ?: HDK ಪ್ರಶ್ನೆ
ಬೆಂಗಳೂರು, ಮೇ 26: ಸಂಸತ್ ಭವನ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ರಾಜಕಾರಣ ಮಾಡುತ್ತಿದೆ. ತನ್ನ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು.
ಕಾಂಗ್ರೆಸ್ ಇವತ್ತು ಆದಿವಾಸಿ ಮಹಿಳೆ ಎಂಬ ಕಾರಣಕ್ಕೆ ಮಾನ್ಯ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ. ಅದೇ ಆದಿವಾಸಿ ಮಹಿಳೆ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಆಗಿದ್ದಾಗ ಕಾಂಗ್ರೆಸ್ ನಾಯಕ ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿ ಮಾಡಿದ್ದು ಯಾಕೆ ಎಂದು ಅವರು ಖಾರವಾಗಿ ಪ್ರಶ್ನೆ ಮಾಡಿದರು.

ರಾಷ್ಟ್ರಪತಿ ಆಮಂತ್ರಣ ವಿಚಾರವಾಗೇ ಮೇ 28 ರಂದು ಭಾನವಾರ ಸಂಸತ್ ಭವನ ಉದ್ಘಾಟನೆಯ್ನು 21 ಪಕ್ಷಗಳು ಬಹಿಷ್ಕಾರ ಮಾಡಿವೆ. ಅದು ಆಯಾ ಪಕ್ಷದ ನಿಲವು ಆಗಿದೆ. ಸಂಸತ್ ಭವನ ಯಾವುದೋ ಪಕ್ಷದ ಸಂಘಟನೆಗೆ ಸೀಮಿತವಾದ ಭವನ ಅಲ್ಲ. ದೇಶದ ಜನರ ತೆರಿಗೆ ಹಣದಿಂದ ಕಟ್ಟಿರುವ ಭವನ ಅದು ಎಂದು ತಿಳಿಸಿದರು.
ಮಾನ್ಯ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರಿಂದ ಉದ್ಘಾಟನೆ ಆಗಬೇಕಿತ್ತು ಅನ್ನುವ ವಿಚಾರ ತೆಗೆದು ಕಾಂಗ್ರೆಸ್ ಬಹಿಷ್ಕಾರ ಮಾಡಲು ಮುಂದಾಗಿದೆ. ಇದೇ ಕಾಂಗ್ರೆಸ್ ಪಕ್ಷ ಛತ್ತೀಸಗಢದಲ್ಲಿ ವಿಧಾನಸಭಾ ಕಟ್ಟಡದ ಉದ್ಘಾಟನೆ ಮಾಡಲು ಸೋನಿಯಾ ಗಾಂಧಿ ಅವರಿಂದ ಅಡಿಗಲ್ಲು ಹಾಕಿಸಿತ್ತು. ಅಲ್ಲಿ ರಾಷ್ಟ್ರಪತಿ ಅವರು ನೆನಪಿಗೆ ಬರಲಿಲ್ಲ ಏಕೆ? ಎಂದು ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
#WATCH | Bengaluru: “We are not slaves of Congress and will take our own decision. Why do we need to follow Congress?“: Former Karnataka CM & JDS leader HD Kumaraswamy on Congress questioning former PM Deve Gowda’s decision to participate in the inauguration of the new Parliament… pic.twitter.com/0vXxEYYOyx
— ANI (@ANI) May 26, 2023
ಕರ್ನಾಟಕದಲ್ಲಿ ವಿಕಾಸಸೌಧ ಉದ್ಘಾಟನೆ ಮಾಡಲು ರಾಷ್ಟ್ರಪತಿಗಳನ್ನು ಕರೆದಿದ್ದರಾ ಕಾಂಗ್ರೆಸ್ ನಾಯಕರು?. ಅಂದು ಮುಖ್ಯಮಂತ್ರಿ, ಲೋಕೋಪಯೋಗಿ ಸಚಿವರೇ ವಿಕಾಸಸೌಧವನ್ನು ಉದ್ಘಾಟನೆ ಮಾಡಲಿಲ್ಲವೇ?. ಈಗ ನೋಡಿದರೆ ಆದಿವಾಸಿ ಮಹಿಳೆಯನ್ನು ಕಡೆಗಣಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕುರ ನಾಟಕ ಮಾಡುತ್ತಿರುದ್ದಾರೆ ಎಂದು ಹರಿಹಾಯ್ದರು.

ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಉದ್ಘಾಟನೆ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಹೀಗಾಗಿ ದೇವೇಗೌಡರು ಅಂದಿನ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾರೆ. ಈ ಒಂದು ಕಾರಣದಿಂದ ಬಿಜೆಪಿ ಬಗ್ಗೆ ಜೆಡಿಎಸ್ ಪಕ್ಷ ಮೃದು ಧೋರಣೆ ತಾಳಿದೆ ಎಂದೆಲ್ಲ ಮಾತನಾಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.
ಇದರಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ
ನೂತನ ಸಂಸತ್ ಭವನ ಉದ್ಘಾಟನೆಗೆ ಎರಡು ದಿನ ಮೊದಲೇ ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈಗಾಗಲೇ ವಿಪಕ್ಷಗಳು ಒಕ್ಕೋರಲಿನಿಂದ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕಾರ ಮಾಡಿದ್ದಾರೆ. ಈ ಬಗ್ಗೆ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಮಾತನಾಡಿದ್ದಾರೆ.
ಈ ಭವ್ಯ ಸಂಸತ್ ಭವನವು ದೇಶದ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ. ಇದು ಬಿಜೆಪಿ ಅಥವಾ ಆರ್‌ಎಸ್‌ಎಸ್ ಕಚೇರಿಯಲ್ಲ. ನಾನೊಬ್ಬ ಮಾಜಿ ಪ್ರಧಾನಿಯಾಗಿ, ದೇಶದ ಪ್ರಜೆಯಾಗಿ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದೇನೆ. ಈ ವಿಚಾರದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications