ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತೆ ರಾಜ್ಯ ಸರ್ಕಾರದ ಮೇಲೆ ಕಿಡಿಕಾರಿದ ಮಾಜಿ ಸಿಎಂ ಎಚ್‌ಡಿಕೆ

|
Google Oneindia Kannada News

ಬೆಂಗಳೂರು, ಮೇ 15: ರಾಜ್ಯದಲ್ಲಿರುವ ಮಹಿಳಾ ಸಾಂತ್ವಾನ ಕೇಂದ್ರಗಳನ್ನು ರಾಜ್ಯ ಸರ್ಕಾರ ಮುಚ್ಚಲು ಹೊರಟಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ ಕಿಡಿಕಾರಿದ್ದಾರೆ.

ಈ ಕುರಿತು ಇಂದು ಸಂಜೆ ಸರಣಿ ಟ್ವೀಟ್ ಮಾಡಿರುವ ಅವರು, ''ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲು ಹೊರಟಿರುವುದು ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ. ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯವನ್ನು ಬದಿಗೊತ್ತಿರುವುದು ಖಂಡನೀಯ'' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದು ಯಾವ ರೀತಿಯ ಆತ್ಮನಿರ್ಭರ್‌ ಭಾರತ? ಪ್ರಧಾನಿ ಮೋದಿ ಅವರಿಗೆ ಎಚ್‌ಡಿಕೆ ಪ್ರಶ್ನೆ!ಇದು ಯಾವ ರೀತಿಯ ಆತ್ಮನಿರ್ಭರ್‌ ಭಾರತ? ಪ್ರಧಾನಿ ಮೋದಿ ಅವರಿಗೆ ಎಚ್‌ಡಿಕೆ ಪ್ರಶ್ನೆ!

''ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುವ ಕೆಲಸದಲ್ಲಿ ಮಗ್ನವಾಗಿದ್ದವು'' ಎಂದಿದ್ದಾರೆ.

 HD Kumaraswamy Strikes On Karntaka Government About Mahila Santwana Kendra

''ಲಾಕ್ ಡೌನ್ ಕಾಲದಲ್ಲಿ ಸಾಂತ್ವನ ಕೇಂದ್ರಗಳನ್ನು ಮುಚ್ಚಿ, ಮದ್ಯದಂಗಡಿಗಳನ್ನು ತೆರೆದು ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳಕ್ಕೆ ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ. ಸಾಂತ್ವನ ಕೇಂದ್ರಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು'' ಎಂದು ಎಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

English summary
DS Leader HD Kumaraswamy Strikes On Karntaka Government About Mahila Santwana Kendra. karnataka government plans shutting down Mahila Santwana Kendra across the karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X