ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಮಲತಾ ಜತೆ ಕದನ ವಿರಾಮ ಘೋಷಿಸಿ, ರಾಜ್ಯದ ಸಮಸ್ಯೆಯೆಡೆ ದೃಷ್ಟಿ ಇಟ್ಟ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜುಲೈ 10: ಕಳೆದ ಎರಡು ದಿನಗಳಿಂದ ಸಂಸದೆ ಸುಮಲತಾ ಜತೆ ನಡೆಯುತ್ತಿದ್ದ ವಾಕ್ಸಮರಕ್ಕೆ ಎಚ್‌ಡಿ ಕುಮಾರಸ್ವಾಮಿ ಪರೋಕ್ಷವಾಗಿ ಬ್ರೇಕ್ ಹಾಕಿದ್ದಾರೆ.

ಇದೀಗ ಟ್ವೀಟ್ ಮೂಲಕ ಜೆಡಿಎಸ್ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ. ಕೋವಿಡ್‌ ಕಾಲದಲ್ಲಿ ಜೆಡಿಎಸ್‌ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ, ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ.

ಕುಮಾರಸ್ವಾಮಿ Vs ಸುಮಲತಾ ನಡುವಿನ ಸಂಘರ್ಷ: ವೈ.ಎಸ್.ವಿ ದತ್ತ ಮನಮಿಡಿಯುವ ಪೋಸ್ಟ್ ಕುಮಾರಸ್ವಾಮಿ Vs ಸುಮಲತಾ ನಡುವಿನ ಸಂಘರ್ಷ: ವೈ.ಎಸ್.ವಿ ದತ್ತ ಮನಮಿಡಿಯುವ ಪೋಸ್ಟ್

ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ ಎಂದು ತಮ್ಮ ಪಕ್ಷದ ನಾಯಕರು, ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಕರೆ ಕೊಟ್ಟಿದ್ದಾರೆ.

HD Kumaraswamy Tell Party Workers Will Fight For Karnataka And Kannada

ನಿನ್ನೆ ಬೆಂಗಳೂರಿನಲ್ಲಿ ಮಂಡ್ಯ ಸಂಸದೆ ಸುಮಲತಾ ಮತ್ತು ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರ ವಿರುದ್ಧ ಹರಿಹಾಯ್ದಿದ್ದರು. ಈ ಬಗ್ಗೆ ಮಾಧ್ಯಮಗಳ ಮುಂದೆ ಇನ್ನೂ ಕುಮಾರಸ್ವಾಮಿಯವರು ಪ್ರತಿಕ್ರಿಯೆ ನೀಡಿಲ್ಲ.

ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಜಲದ ಯೋಜನೆಗಳಿಗೆ ತಡೆಯೊಡ್ಡುತ್ತಿರುವವರ ವಿರುದ್ಧ ಸಿಡಿಯೋಣ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನು ಹಾರಿಸಲು ಬಿಡಲೊಲ್ಲದ ಪಟ್ಟಭದ್ರರ ವಿರುದ್ಧ ಸಿಡಿಯೋಣ.

ನಮಗೆ ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ಸಿಡಿಯ ಬೇಕಾಗಿದೆ ಸಿಡಿಯೋಣ. ಇದು ನಮ್ಮ ಆಯ್ಕೆಯಾಗಲಿ ಎಂದು ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ.

ಕನ್ನಡ,ಕನ್ನಡಿಗ,ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ, ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ ಎಂದು ಬರೆದುಕೊಂಡಿದ್ದಾರೆ.

Recommended Video

HD Kumaraswamy And Sumalatha Ambareesh ಈಗ ಶತ್ರುಗಳಾಗಿರೋದಕ್ಕೆ ನಿಜವಾದ ಕಾರಣ ಇದೇ. | Oneindia Kannada

ಸಂಸದೆ ಸುಮಲತಾ ಅವರ ವಿರುದ್ಧ ನೀಡಿರುವ ಹೇಳಿಕೆಗಳನ್ನು ನಿಲ್ಲಿಸುವಂತೆ ಕಾಣುತ್ತಿದೆ. ತಾವು ನೀಡಿರುವ ಹೇಳಿಕೆಗಳು ತಿರುಗುಬಾಣವಾಗುತ್ತಿದೆ ಎಂದು ಕುಮಾರಸ್ವಾಮಿಯವರಿಗೆ ಅರಿವಾದಂತೆ ಕಾಣುತ್ತಿದೆ.

English summary
HD Kumaraswamy Tell Party Workers Will Fight For Karnataka And Kannada; No Need To Talk About Other Issues,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X