ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜಕೀಯ ತಿರುವು ಪಡೆದುಕೊಂಡ ಪಿಎಸ್ಐ ಕಿರಣ್ ‌ಕುಮಾರ್ ಆತ್ಮಹತ್ಯೆ!

|
Google Oneindia Kannada News

ಬೆಂಗಳೂರು, ಆಗಸ್ಟ್ 1: ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿ.ಎಸ್‌.ಐ ಕಿರಣ್ ‌ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಬಿಜೆಪಿ ಸರ್ಕಾರ ಉನ್ನತಮಟ್ಟದ ತನಿಖೆಗೆ ತಕ್ಷಣ ಆದೇಶಿಸಬೇಕೆಂದು ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

'ಈ ಹಿಂದೆ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾದಾಗ ನ್ಯಾಯಸಮ್ಮತ ತನಿಖೆಗೆ ಒತ್ತಡ ಹೇರುತ್ತಿದ್ದ ಬಿಜೆಪಿ ಈ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ತಕ್ಷಣ ಆದೇಶ ನೀಡಬೇಕು. ಯಾವುದೇ ಇಲಾಖೆಯಲ್ಲಿಯೂ ಪ್ರಾಮಾಣಿಕ ಅಧಿಕಾರಿಗಳು ಕಿರುಕುಳಕ್ಕೆ ಒಳಗಾಗದಂತೆ ಎಚ್ಚರವಹಿಸಬೇಕು' ಎಂದು ಒತ್ತಾಯಿಸಿದ್ದಾರೆ.

ಚನ್ನರಾಯಪಟ್ಟಣ ಠಾಣೆ ಪಿಎಸ್ ಐ ಕಿರಣ್ ಆತ್ಮಹತ್ಯೆಚನ್ನರಾಯಪಟ್ಟಣ ಠಾಣೆ ಪಿಎಸ್ ಐ ಕಿರಣ್ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ನಗರ ಠಾಣೆಯ ಪಿಎಸ್ ಐ ಕಿರಣ್ ಕುಮಾರ್ ಶುಕ್ರವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಸಾವಿಗೆ ನಿಖರವಾದ ಕಾರಣ ಬಹಿರಂಗವಾಗಿಲ್ಲವಾದರೂ, ಈ ಆತ್ಮಹತ್ಯೆಯ ಬಗ್ಗೆ ಹಲವು ಅನುಮಾನ ಹುಟ್ಟಿಕೊಂಡಿದೆ. ಈ ಕುರಿತು ಎಚ್‌ಡಿಕೆ ಸರಣಿ ಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಏನಂದ್ರ ಕುಮಾರಸ್ವಾಮಿ? ಮುಂದೆ ಓದಿ....

ಹಿರಿಯ ಅಧಿಕಾರಿಗಳು ಕಿರುಕುಳ!

ಹಿರಿಯ ಅಧಿಕಾರಿಗಳು ಕಿರುಕುಳ!

'ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ, ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಸೂಕ್ತ ತನಿಖೆಗೆ ಆದೇಶಿಸುವ ಮೂಲಕ ಕಿರಿಯ ಹಂತದ ಪೊಲೀಸ್ ಅಧಿಕಾರಿಗಳಲ್ಲಿ ನೈತಿಕ, ಸ್ಥೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು'. ಎಂದು ಎಚ್‌ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈಗೇಕೆ ಮೌನವಾಗಿದೆ ಬಿಜೆಪಿ?

ಈಗೇಕೆ ಮೌನವಾಗಿದೆ ಬಿಜೆಪಿ?

'ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ "ಜಾಗಟೆ" ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆ ಶರಣಾಗಿದೆ' ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ಅಧಿಕಾರಿಗಳಿಂದ ಬೆದರಿಕೆ ಇತ್ತಾ?

ಅಧಿಕಾರಿಗಳಿಂದ ಬೆದರಿಕೆ ಇತ್ತಾ?

'ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ. ಇವರ ಸಾವಿಗೆ ಆಯಕಟ್ಟಿನ ಜಾಗದಲ್ಲಿ ಕುಳಿತ ಹಿರಿಯ ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಹಾಗೂ ಬೆದರಿಕೆ ತಂತ್ರ ಕಾರಣ ಎಂಬ ಮಾಹಿತಿ ನನಗಿದೆ' ಎಂದು ಸಾವಿನ ಬಗ್ಗೆ ಅನುಮಾನ ಹೆಚ್ಚಿಸಿದ್ದಾರೆ.

ಬಿಜೆಪಿ ಅವಧಿಯಲ್ಲಿ ಎಷ್ಟು ಅಧಿಕಾರಿ ಸಾವನ್ನಪ್ಪಿದ್ದಾರೆ?

ಬಿಜೆಪಿ ಅವಧಿಯಲ್ಲಿ ಎಷ್ಟು ಅಧಿಕಾರಿ ಸಾವನ್ನಪ್ಪಿದ್ದಾರೆ?

'ಬೇರೆ ಪಕ್ಷಗಳ ಆಡಳಿತಾವಧಿಯಲ್ಲಿ ಅಧಿಕಾರಿಗಳ ನಿಗೂಢ ಸಾವಿಗೆ ಸರ್ಕಾರವೇ ಕಾರಣ ಎಂದು ಬೊಬ್ಬೆ ಹಾಕಿದ್ದ ಬಿಜೆಪಿ ವರ್ಷದಿಂದ ಆಡಳಿತ ಚುಕ್ಕಾಣಿ ಹಿಡಿದಿದೆ. ಈಗ ಪಿ.ಎಸ್.ಐ, ಇದಕ್ಕೂ ಮುನ್ನ ಐಎಎಸ್ ಅಧಿಕಾರಿ, ಕಳೆದ ವರ್ಷ ಐ.ಎಫ್.ಎಸ್. ಅಧಿಕಾರಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸರ್ಕಾರ ದಿವ್ಯ ಮೌನಕ್ಕೆ ಶರಣಾಗಿರುವುದು ಸರಿಯಲ್ಲ' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

English summary
HD Kumaraswamy urges the government to do High-level investigation in PSI Kiran Kumar suicide case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X