• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ಸೋಂಕಿಗೆ ಉಚಿತ ಚಿಕಿತ್ಸೆ ನೀಡಿ

|

ಬೆಂಗಳೂರು, ಮೇ 12: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಚಿಕಿತ್ಸೆ ನೀಡಬೇಕೆಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯಲು ಇರುವ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ಮಾಜಿ ಸಿಎಂ ಎಚ್‌ಡಿಕೆ ಒತ್ತಾಯಿಸಿದ್ದಾರೆ.

ಆಯುಷ್ಮಾನ್ ಭಾರತ ಯೋಜನೆ ಅಡಿ ಕೊರೊನಾ ಸೋಂಕಿತರು ಉಚಿತವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿರ್ಬಂಧಿಸಿರುವ 5 ಲಕ್ಷ ರೂಪಾಯಿ ವ್ಯಾಪ್ತಿಯಲ್ಲಿ ಚಿಕಿತ್ಸೆ ಪಡೆಯಲು ಎಡರು ತೊಡರುಗಳಿವೆ. ಮಹಾಮಾರಿ ಕೊರೊನಾ ದೇಶವನ್ನು ನಲುಗಿಸುತ್ತಿರುವ ಈ ದುರಂತ ಕಾಲದಲ್ಲಿ ಕೇಂದ್ರ ಸರ್ಕಾರ ಔದಾರ್ಯ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ ಎಂದು ಹೇಳಿದ್ದಾರೆ.

ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇ.30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ಸಿಗಲಿದೆ.

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೊನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ? ಈ ಯೋಜನೆ ಇದೆ ಎಂದು ಮಾಜಿ ಸಿಎಂ ಎಚ್‌ಡಿಕೆ ಪ್ರಶ್ನಿಸಿದ್ದಾರೆ.

   ಬಡವರ ಕಷ್ಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ ! | Oneindia Kannada

   ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ ಎಂದು ಟ್ವೀಟ್ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳನ್ನು ಆಗ್ರಹಿಸಿದರು.

   English summary
   Former CM HD Kumaraswamy urged karnataka govt to provide free treatment to Covid-19 Patients under the Ayushman Bharat Health Scheme of the Central Government.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X