• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆನ್ಲೈನ್ ಶಿಕ್ಷಣದ ಅಪಾಯಗಳ ಕುರಿತು ಎಚ್‌ಡಿ ಕುಮಾರಸ್ವಾಮಿ ಎಚ್ಚರಿಕೆ

|

ಬೆಂಗಳೂರು, ಜುಲೈ 31: ಆನ್‌ಲೈನ್ ಶಿಕ್ಷಣದಿಂದ ಎದುರಾಗುತ್ತಿರುವ ಅಪಾಯಗಳ ಕುರಿತು ಮತ್ತು ಇದರಿಂದ ಪೋಷಕರಿಗೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಎಚ್‌ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ವೈರಸ್ ಭೀತಿ ಹಿನ್ನೆಲೆ ಸದ್ಯಕ್ಕೆ ಸರ್ಕಾರಿ ಶಾಲೆ ಮತ್ತು ಕಾಲೇಜುಗಳು ಪ್ರಾರಂಭವಾಗಿಲ್ಲ. ಆದರೆ, ಆನ್‌ಲೈನ್ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ಖಾಸಗಿ ಶಾಲೆಗಳು ಈಗಾಗಲೇ ತರಗತಿಗಳನ್ನು ಆರಂಭಿಸಿದೆ. ಆದರೆ, ಸ್ಮಾರ್ಟ್‌ಫೋನ್, ಲ್ಯಾಪ್‌ಟ್ಯಾಪ್‌ಗಳು ಇಲ್ಲದ ಕಾರಣ ಕೆಲವು ಮಕ್ಕಳು ಆನ್‌ಲೈನ್ ತರಗತಿಯಲ್ಲಿ ಭಾಗವಹಿಸುತ್ತಿಲ್ಲ.

ಮಕ್ಕಳ ಶಿಕ್ಷಣಕ್ಕಾಗಿ ಹಸು ಮಾರಿ ಸ್ಮಾರ್ಟ್‌ಫೋನ್ ಕೊಡಿಸಿದ ಬಡ ವ್ಯಕ್ತಿ

ಮಕ್ಕಳ ಶಿಕ್ಷಣ ಹಾಳಾಗುತ್ತದೆ ಎಂಬ ಆತಂಕಕ್ಕೆ ಒಳಗಾಗಿರುವ ಪೋಷಕರು, ಕೈಯಲ್ಲಿ ಹಣವಿಲ್ಲದಿದ್ದರೂ ತಮ್ಮ ಬಳಿಯಿರುವ ಬೆಲೆ ಬಾಳುವ ವಸ್ತು ಅಥವಾ ಹಸು, ಕುರಿಗಳನ್ನು ಮಾರಿ ಸ್ಮಾರ್ಟ್‌ಫೋನ್, ಟಿವಿ ಕೊಡಿಸುತ್ತಿರುವ ಘಟನೆಗಳು ವರದಿಯಾಗುತ್ತಿದೆ. ಇತ್ತೀಚಿಗಷ್ಟೆ ಗದಗದಲ್ಲಿ ತಾಳಿ ಅಡವಿಟ್ಟು ತಾಯಿ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯನ್ನು ಉಲ್ಲೇಖಿಸಿ ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಮುಂದೆ ಓದಿ...

ಹೃದಯ ಹಿಂಡುತ್ತಿದೆ ಈ ಘಟನೆ

ಹೃದಯ ಹಿಂಡುತ್ತಿದೆ ಈ ಘಟನೆ

'ಕೊರೊನಾ ಸೋಂಕು ಜನರ ಜೀವ-ಜೀವನದ ಜೊತೆ ಮಾತ್ರ ಚೆಲ್ಲಾಟ ಮಾಡುತ್ತಿಲ್ಲ. ಇಡೀ ಮನುಕುಲದ ರೀತಿ-ರಿವಾಜುಗಳನ್ನು ಬುಡಮೇಲು ಮಾಡುತ್ತಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ತಾಯಿ ಒಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ' ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಶಿಕ್ಷಣಕ್ಕಾಗಿ ಟಿವಿ ಖರೀದಿ

ಮಕ್ಕಳ ಶಿಕ್ಷಣಕ್ಕಾಗಿ ಟಿವಿ ಖರೀದಿ

'ನಾಲ್ಕು ಮಕ್ಕಳ ಪೈಕಿ 7 ಮತ್ತು 8 ನೇ ತರಗತಿ ಓದುತ್ತಿರುವ ಇಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಮನೆಯಲ್ಲಿ ಟಿವಿ ಇಲ್ಲದ ಕಾರಣ ತಾಳಿಯನ್ನು ಅಡವಿಟ್ಟು ನರಗುಂದ ತಾಲೂಕಿನ ರಡ್ಡೇರ ನಾಗನೂರು ಗ್ರಾಮದ ಕಸ್ತೂರಿ ಎಂಬ ಮಹಾತಾಯಿ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದಿವೆ' ಎಂದು ಎಚ್‌ಡಿಕೆ ಮರುಗಿದ್ದಾರೆ.

ಸರ್ಕಾರ ಪರಿಹಾರ ಕಂಡುಕೊಳ್ಳಬೇಕಿದೆ

ಸರ್ಕಾರ ಪರಿಹಾರ ಕಂಡುಕೊಳ್ಳಬೇಕಿದೆ

'ಇಂತಹ ನೂರಾರು ನಿದರ್ಶನಗಳು ಸದ್ದಿಲ್ಲದೆ, ಸುದ್ದಿಯಾಗದೆ ಬಡ ಪೋಷಕರು ಕೊರೋನಾ ಕಾಲದಲ್ಲಿ ಯಮಯಾತನೆ ಅನುಭವಿಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನಮ್ಮ ಸಮಾಜ ಮತ್ತು ಸರ್ಕಾರ ಎಚ್ಚರ ವಹಿಸಬೇಕಿದೆ. ಆನ್ಲೈನ್ ಶಿಕ್ಷಣದ ಅಪಾಯ ಮತ್ತು ಬಡ ಪೋಷಕರು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಕ್ಷಣವೇ ಸಮಗ್ರ ಯೋಜನೆಯೊಂದನ್ನು ಕಾರ್ಯಗತಗೊಳಿಸಬೇಕು ಎಂದು ಆಗ್ರಹಿಸುತ್ತೇನೆ' ಎಂದು ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ.

ಹಸು ಮಾರಿ ಸ್ಮಾರ್ಟ್‌ಫೋನ್ ಕೊಡಿಸಿದ್ದ ತಂದೆ

ಹಸು ಮಾರಿ ಸ್ಮಾರ್ಟ್‌ಫೋನ್ ಕೊಡಿಸಿದ್ದ ತಂದೆ

ಹಿಮಾಚಲ ಪ್ರದೇಶದ ಜ್ವಾಲಾಮುಖಿ ಜಿಲ್ಲೆಯ ಗುಮ್ಮರ್ ಗ್ರಾಮಕ್ಕೆ ಸೇರಿದ ಕುಲದೀಪ್ ಕುಮಾರ್, ತನ್ನ ಇಬ್ಬರು ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ಸ್ಮಾರ್ಟ್‌ಫೋನ್‌ ತೆಗೆದುಕೊಡಲು, ತನ್ನ ಕುಟುಂಬಕ್ಕೆ ಆಧಾರವಾಗಿದ್ದ ಹಸುವನ್ನು 6000 ರೂಪಾಯಿಗೆ ಮಾರಾಟ ಮಾಡಿ, ಅದರಿಂದ ಬಂದ ಹಣದಲ್ಲಿ ಸ್ಮಾರ್ಟ್‌ಫೋನ್ ಕೊಡಿಸಿದ್ದಾರೆ.

English summary
JDS Leader HD Kumaraswamy warned to government on the problems of online education.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X