ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸ್ಎಸ್ಎಲ್‌ಸಿ ಪರೀಕ್ಷೆ ಕುರಿತು ಕುಮಾರಸ್ವಾಮಿ ಕೊನೆಯ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಜೂನ್ 23: ದೇಶಾದ್ಯಂತ ಕೊರೊನಾ ವೈರಸ್ ಭಿತಿ ಹೆಚ್ಚಿರುವ ಕಾರಣ ತೆಲಂಗಾಣ, ತಮಿಳುನಾಡು ಹಾಗೂ ಆಂಧ್ರ ಪ್ರದೇಶ ರಾಜ್ಯಗಳು ಎಸ್ಎಸ್ಎಲ್ ಸಿ ಪರೀಕ್ಷೆ ರದ್ದುಗೊಳಿಸಿದೆ. ನೆರೆ ರಾಜ್ಯಗಳಲ್ಲಿ ಪರೀಕ್ಷೆ ರದ್ದು ಮಾಡಿದ ಕರ್ನಾಟಕ ಸರ್ಕಾರದ ಮೇಲೆ ಪರೀಕ್ಷೆ ರದ್ದುಗೊಳಿಸುವಂತೆ ಒತ್ತಡ ಹೆಚ್ಚಾಗಿದೆ.

ಆದರೆ, ಯಾವ ಒತ್ತಡ ಹಾಗೂ ಅಭಿಪ್ರಾಯ ಮಣಿಯದ ರಾಜ್ಯ ಸರ್ಕಾರ ನಿಗದಿ ಮಾಡಿರುವ ದಿನಾಂಕದಂದೇ 10ನೇ ತರಗತಿ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಶಿಕ್ಷಣ ಇಲಾಖೆ ಪ್ರಕಟ ಮಾಡಿರುವಂತೆ ಜೂನ್ 25 ರಿಂದ ರಾಜ್ಯದಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ.

ಕೊರೊನಾ ಭೀತಿ: 10ನೇ ತರಗತಿ ಪರೀಕ್ಷೆ ರದ್ದು ಮಾಡಿದ ಮತ್ತೊಂದು ರಾಜ್ಯಕೊರೊನಾ ಭೀತಿ: 10ನೇ ತರಗತಿ ಪರೀಕ್ಷೆ ರದ್ದು ಮಾಡಿದ ಮತ್ತೊಂದು ರಾಜ್ಯ

ಪರೀಕ್ಷೆಗೆ ಇನ್ನೊಂದು ದಿನ ಬಾಕಿಯಿರುವಾಗಲೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳು, ಶಿಕ್ಷಕರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಕೂಡಲೇ ಪರೀಕ್ಷೆ ಮುಂದೂಡಿ ಎಂದು ಒತ್ತಾಯಿಸಿದ್ದಾರೆ. ಮುಂದೆ ಓದಿ...

10ನೇ ತರಗತಿ ಪರೀಕ್ಷೆ ಮುಂದೂಡಲಿ

ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ.

ಜೀವದೊಂದಿಗೆ ಚೆಲ್ಲಾಟ

ಜೀವದೊಂದಿಗೆ ಚೆಲ್ಲಾಟ

ಕೊರೊನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿರುವ ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು ಎಂಟು ಲಕ್ಷ SSLC ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ.

<br />SSLC ಪರೀಕ್ಷೆ ನಡೆಸುವ ಹಠದಿಂದ ಸರ್ಕಾರ ಹಿಂದೆ ಸರಿಯಲಿ- ಎಎಪಿ
SSLC ಪರೀಕ್ಷೆ ನಡೆಸುವ ಹಠದಿಂದ ಸರ್ಕಾರ ಹಿಂದೆ ಸರಿಯಲಿ- ಎಎಪಿ

ತೆಲಂಗಾಣದಂತೆ ನಿರ್ಧಾರ ತೆಗೆದುಕೊಳ್ಳಲಿ

ತೆಲಂಗಾಣದಂತೆ ನಿರ್ಧಾರ ತೆಗೆದುಕೊಳ್ಳಲಿ

ಕೊರೊನಾ ಸೋಂಕು ಸಮುದಾಯ ಪ್ರಸರಣ ಭೀತಿಯ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ರಾಜ್ಯದಲ್ಲಿ SSLC ಪರೀಕ್ಷೆಯನ್ನು ರದ್ದುಪಡಿಸಿ ಉತ್ತೀರ್ಣ ಗೊಳಿಸಲಾಗಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ತಳೆಯಬಹುದು. ಪರೀಕ್ಷೆಗಳನ್ನು ನಡೆಸಲೇ ಬೇಕೆಂದರೆ ಅಕ್ಟೋಬರ್ ತಿಂಗಳವರೆಗೆ ಕಾಯಲಿ.

ಇದಕ್ಕೆ ಯಾರು ಹೊಣೆ?

ಇದಕ್ಕೆ ಯಾರು ಹೊಣೆ?

ಏನಾದರೂ ಅವಗಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡುತ್ತೇನೆ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು.

English summary
Karnataka ex chief minister HD Kumaraswamy warns State Govt and education minister to Postpone SSLC Exam due to COVID19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X