• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಸ್ವಾಗತಿಸಿದ ಎಚ್‌ಡಿ ಕುಮಾರಸ್ವಾಮಿ

|

ಬೆಂಗಳೂರು, ಆಗಸ್ಟ್ 05: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯವನ್ನು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ ಕೂಡಿಬಂದಿದೆ. ಇದು ನಮ್ಮೆಲ್ಲರ ಸಂತೋಷದ ಘಳಿಗೆ. ಅದಕ್ಕೂ ಮಿಗಿಲಾಗಿ ಇದು ಭಾವನಾತ್ಮಕ ಸನ್ನಿವೇಶವೆಂಬುದು ನನ್ನ ಅನಿಸಿಕೆ.

   ಅಯೋಧ್ಯೆಯಲ್ಲಿ ಚೀನಾ ಹೆಸರು ಹೇಳಿದ ಮೋದಿ | Oneindia Kannada

   ಎಲ್ಲರ ಹೃನ್ಮನಗಳಲ್ಲಿ ನೆಲೆಸಿರುವ ರಾಮನ ಎಲ್ಲ ತತ್ವಾದರ್ಶಗಳಿಗೆ ಮಂದಿರವು ಸಂಕೇತವಾಗಲಿ. ಭಾರತದ ಹೆಗ್ಗುರುತಾಗಲಿ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ರಾಮನ ಜನಪರ ಕಾಳಜಿ ಹಾಗೂ ಹೃದಯ ವೈಶಾಲ್ಯ ಈಗಿನ ನಮ್ಮ ಜನಪ್ರತಿನಿಧಿಗಳಿಗೆ ಮೇರು ಪ್ರೇರಣೆಯಾಗಲಿ.

   ಅಯೋಧ್ಯೆಯಲ್ಲಿ ಮಂದಿರವೊಂದನ್ನು ಕಟ್ಟಿಕೊಳ್ಳಲು ಭಾರತೀಯರಾದ ನಾವು ಕಾನೂನಾತ್ಮಕ ಹೋರಾಟ ನಡೆಸಬೇಕಾಗಿದ್ದು, ಅದು ಕೆಲವರಿಗೆ ರಾಜಕೀಯ ದಾಳವಾಗಿದ್ದು, ಅಧಿಕಾರಕ್ಕೇರಲು ಏಣಿಯಾಗಿದ್ದು ನಮ್ಮ ಕೆಟ್ಟ ಘಳಿಗೆಗಳಲ್ಲಿ ಒಂದು. ರಾಮನ ಆದರ್ಶಗಳಿಗೆ ಈ ದೇಗುಲವು ಸಾಮರಸ್ಯದ ಸಂಕೇತವಾಗಿ ಉಳಿಯಲಿ‌. ಈ ಮೂಲಕ ಸ್ವಾರ್ಥ ನಶಿಸಲಿ. ಎಲ್ಲರಿಗೂ ಶುಭ ತರಲಿ.

   ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂಬ ಆಶಯ ನನ್ನದು. ಜೈ ಶ್ರೀರಾಮ

   English summary
   Former Chief Minister HD Kumaraswamy Welcomes Ram Mandir Bhoomi Poojan In Ayodhya by Narendra Modi.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X