'ಹುಳಿ ಹಿಂಡುವವರ ನಾಟಕ ಫಲಿಸದು': ಯೋಗೇಶ್ವರ್ ವಿರುದ್ಧ ಎಚ್‌ಡಿಕೆ ಗರಂ

ಬೆಂಗಳೂರು, ಜುಲೈ 30: ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಎಚ್ ಡಿ ಕುಮಾರಸ್ವಾಮಿ ಕುರಿತು ನೂತನ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಮಾಡಿರುವ ಆರೋಪಕ್ಕೆ ಎಚ್‌ಡಿಕೆ ತಿರುಗೇಟು ನೀಡಿದ್ದಾರೆ.

Recommended Video

      ಏನಿದು ಹೊಸ ಶಿಕ್ಷಣ ರೀತಿ?ಏನಿದು ಹೊಸ ಸಚಿವಾಲಯ ಬದಲಾವಣೆ? | Oneindia Kannada

      'ನಾನು ಅಡ್ಜಸ್ಟ್ಮೆಂಟ್ ರಾಜಕಾರಣವನ್ನು ಹಿಂದೆಯೂ ಮಾಡಿಲ್ಲ. ಮುಂದೆಯೂ ಮಾಡಲ್ಲ. ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವಣ ರಾಜಕಾರಣವೇ ಬೇರೆ. ವೈಯಕ್ತಿಕ ವಿಶ್ವಾಸವೇ ಬೇರೆ' ಎಂದು ಸಿಪಿ ಯೋಗೇಶ್ವರ್ ಆರೋಪಗಳಿಗೆ ಸರಣಿ ಟೀಟ್ ಮಾಡಿದ್ದಾರೆ.

      ಡಿಕೆ ಶಿವಕುಮಾರ್ ಮತ್ತು ಕುಮಾರಸ್ವಾಮಿ ಅಗತ್ಯಕ್ಕೆ ತಕ್ಕಂತೆ ರಾಜಕಾರಣ ಮಾಡ್ತಾರೆ. ಡಿಕೆಶಿ, ಕುಮಾರಸ್ವಾಮಿ ಮೂಲ ಕ್ಷೇತ್ರ ರಾಮನಗರದಲ್ಲಿಯೇ ಅವರ ಬುಡಕ್ಕೆ ಕೈ ಹಾಕಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಡಿ.ಕೆ.ಶಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇಷ್ಟು ದಿನ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಬಂದಿದ್ದರು. ಈಗ ಇಬ್ಬರಿಗೂ ಅಸ್ತಿತ್ವದ ಪ್ರಶ್ನೆಯಾಗಿದೆ. ಹೀಗಾಗಿ ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದಾರೆ ಎಂದು ಯೋಗೇಶ್ವರ್ ಹೇಳಿದ್ದರು. ಕುಮಾರಸ್ವಾಮಿ ಸರಣಿ ಟ್ವೀಟ್‌ನಲ್ಲಿ ಏನಿದೆ? ಮುಂದೆ ಓದಿ...

      ನಾನು ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡಲ್ಲ

      ನಾನು ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡಲ್ಲ

      ಯೋಗೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ ''ನಾನು ಅಡ್ಜಸ್ಟ್ಮೆಂಟ್ ರಾಜಕಾರಣವನ್ನು ಹಿಂದೆಯೂ ಮಾಡಿಲ್ಲ. ಮುಂದೆಯೂ ಮಾಡಲ್ಲ. ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವಣ ರಾಜಕಾರಣವೇ ಬೇರೆ. ವೈಯಕ್ತಿಕ ವಿಶ್ವಾಸವೇ ಬೇರೆ. ಹಿಂಬಾಗಿಲ ರಾಜಕಾರಣದ ಮೂಲಕ ನೆಲೆ ಕಂಡುಕೊಂಡವರಿಂದ ಯಾವುದೇ ಡ್ಯಾಮೇಜ್ ಮಾಡಲು ಸಾಧ್ಯವಿಲ್ಲ'' ಎಂದಿದ್ದಾರೆ.

      ಹುಳಿ ಹಿಂಡುವವರ ನಾಟಕ ಫಲಿಸದು

      ಹುಳಿ ಹಿಂಡುವವರ ನಾಟಕ ಫಲಿಸದು

      'ಶಿವಕುಮಾರ್ ಮತ್ತು ನಮ್ಮ ನಡುವಣ ಹಿಂದಿನ ಹಾಗೂ ಇಂದಿನ ರಾಜಕಾರಣ ಬೇರೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಎಲ್ಲರೂ ಒಂದು ಗುರಿ ಇಟ್ಟು ಕೊಂಡೆ ದುಡಿಮೆ ಮಾಡುತ್ತಾರೆ. ಈ ಮಧ್ಯೆ ಹುಳಿ ಹಿಂಡುವವರ ನಾಟಕ ಫಲಿಸದು' ಎಂದು ಬಿಜೆಪಿ ಪರಿಷತ್ ಸದಸ್ಯನಿಗೆ ಟಾಂಗ್ ನೀಡಿದ್ದಾರೆ.

      ರಾಮನಗರ ಜನ ಸೊಪ್ಪು ಹಾಕುವುದಿಲ್ಲ

      ರಾಮನಗರ ಜನ ಸೊಪ್ಪು ಹಾಕುವುದಿಲ್ಲ

      ಇನ್ನು ಹಳೆ ಮೈಸೂರು ಭಾಗದ ಜನತೆ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿ ಎಂದು ಆಹ್ವಾನ ನೀಡಿರುವುದಕ್ಕೆ ಖಂಡಿಸಿರುವ ಕುಮಾರಸ್ವಾಮಿ 'ತನ್ನ ಬೇಳೆ ಬೇಯಿಸಿಕೊಳ್ಳಲು ಮಸಾಲೆ ಅರೆಯುತ್ತಿರುವ ವ್ಯಕ್ತಿಯ ಕುತಂತ್ರ ರಾಜಕಾರಣಕ್ಕೆ ರಾಮನಗರ ಜಿಲ್ಲೆಯ ಜನತೆ ಸೊಪ್ಪು ಹಾಕುವುದಿಲ್ಲ' ಎಂದು ಕಿಡಿಕಾರಿದ್ದಾರೆ.

      ಬಿಜೆಪಿ ಪಕ್ಷ ನಾನು ಬೆಂಬಲಿಸಿಲ್ಲ

      ಬಿಜೆಪಿ ಪಕ್ಷ ನಾನು ಬೆಂಬಲಿಸಿಲ್ಲ

      ಬಿಜೆಪಿ ಸರ್ಕಾರಕ್ಕೆ ಕುಮಾರಸ್ವಾಮಿ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ ಎಂದು ಯೋಗೇಶ್ವರ್ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ 'ನೆರೆಹಾವಳಿ, ಕೊರೊನಾ ಸಂಕಷ್ಟ ಸಮಯದಲ್ಲಿ ರಾಜಕಾರಣ ಬಿಟ್ಟು ರಾಜ್ಯದ ಜನತೆಯ ಹಿತಕಾಯುವ ದೃಷ್ಟಿಯಿಂದ ಸರ್ಕಾರಕ್ಕೆ ಬೆಂಬಲ ಇದೆ ಎಂದಾಕ್ಷಣ ಅದನ್ನು ತಮ್ಮ ಮೂಗಿನ ನೇರಕ್ಕೆ ವ್ಯಾಖ್ಯಾನಿಸುವ ಕೀಳು ಅಭಿರುಚಿಯ ಹೇಳಿಕೆ ನೀಡುವುದು ಯಾರಿಗೂ ಶೋಭೆ ತರುವುದಿಲ್ಲ' ಎಂದು ನಿರಾಕರಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+