Prajwal Revnna Case: ನಾಲ್ಕು ದಿನ ಎಸ್‌ಐಟಿ ಕಸ್ಟಡಿಗೆ ಎಚ್‌ಡಿ ರೇವಣ್ಣ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೆ ಸಂಬಂಧಪಟ್ಟಂತೆ ಮಹಿಳೆಯ ಅಪಹರಣದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಎಚ್‌ಡಿ ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ಎಸ್‌ಐಟಿ ವಶಕ್ಕೆ ಒಪ್ಪಿಸಲಾಗಿದೆ.

ಶನಿವಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಹೊಳೆನರಸೀಪುರ ಶಾಸಕ, ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಅವರನ್ನು ಬಂಧಿಸಿದ್ದರು.

HD Revanna Placed Under 4-Day Police Custody Amidst Sex Scandal Allegations

ಮೇ 4 ರಂದು ಜನಪ್ರತಿನಿಧಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತವಾದ ನಂತರ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಬಂಧಿಸಿದ್ದರು. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಮನೆಯಲ್ಲಿ ಎಚ್‌ಡಿ ರೇವಣ್ಣ ಅವರನ್ನು ವಶಕ್ಕೆ ಪಡೆಯಲಾಗಿತ್ತು.

ನ್ಯಾಯಾಧೀಶರ ಮುಂದೆ ಹಾಜರು

ವಶಕ್ಕೆ ಪಡೆದ ಎಸ್‌ಐಟಿ ಕಚೇರಿಯಲ್ಲಿ ವಿಚಾರಣೆ ಮಾಡಿದ್ದ ಅಧಿಕಾರಿಗಳು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಭಾನುವಾರ ಕೋರ್ಟ್ ರಜೆ ಇರುವ ಕಾರಣ 17ನೇ ಎಸಿಎಂಎಂ ನ್ಯಾಯಾಧೀಶ ರವೀಂದ್ರ ಕಟ್ಟಿಮನಿ ಅವರ ನಿವಾಸದಲ್ಲೇ ಹಾಜರುಪಡಿಸಲಾಯಿತು. ಈ ಸಂದರ್ಭದಲ್ಲಿ ರೇವಣ್ಣ ಅವರನ್ನು ಮೇ 8ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.

ಅಪಹರಣ ಪ್ರಕರಣದಲ್ಲಿ ಬಂಧನ

ಮೈಸೂರು ಜಿಲ್ಲೆ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಆಧಾರದ ಮೇಲೆ ಎಚ್‌ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೋಗಳಿವೆ ಎನ್ನಲಾದ ಪೆನ್‌ಡ್ರೈವ್ ಬಹಿರಂಗವಾದ ಬಳಿಕ ತಾಯಿ ನಾಪತ್ತೆಯಾಗಿದ್ದಾರೆ ಎಂದು 20 ವರ್ಷದ ವ್ಯಕ್ತಿಯೊಬ್ಬರು ದೂರು ನೀಡಿದ್ದರು.

ದೂರಿನಲ್ಲಿ ಎರಡನೇ ಆರೋಪಿಯಾಗಿದ್ದ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿ ಸತೀಶ್ ಬಾಬು ಎನ್ನುವವರನ್ನು ಈಗಾಗಲೇ ಎಸ್‌ಐಟಿ ಬಂಧಿಸಿದೆ. ಎಚ್‌ಡಿ ರೇವಣ್ಣ ಅವರು ಮೊದಲ ಆರೋಪಿಯಾಗಿದ್ದಾರೆ.

ನಾಪತ್ತೆಯಾಗಿದ್ದ ಮಹಿಳೆ ರೇವಣ್ಣ ಅವರ ಆಪ್ತನ ತೋಟದ ಮನೆಯಲ್ಲಿ ಪತ್ತೆಯಾಗಿದ್ದಾರೆ. ಈಗಾಗಲೇ ಎಸ್‌ಐಟಿ ಅಧಿಕಾರಿಗಳು ಮಹಿಳೆಯನ್ನು ಬೆಂಗಳೂರಿಗೆ ಕರೆತಂದಿದ್ದು, ವಿಚಾರಣೆ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+