ಸಮ್ಮಿಶ್ರ ಸರ್ಕಾರ ಉಳಿಯಲು ದೇವರ ಅನುಗ್ರಹ ಬೇಕು: ದೇವೇಗೌಡ

ಶಿವಮೊಗ್ಗ, ಸೆಪ್ಟೆಂಬರ್ 14: ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕೆಲವು ಶಕ್ತಿಗಳು ಯತ್ನ ಮಾಡುತ್ತಿವೆ, ಸರ್ಕಾರವನ್ನು ಉಳಿಸಲು ದೇವರು ಹಾಗೂ ಗುರುಗಳ ಅನುಗ್ರಹ ಬೇಕು ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಅಸ್ಥಿರತೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಕೆಲವು ಶಕ್ತಿಗಳು ಕಾದು ಕುಳಿತಿವೆ, ಇವರಿಂದ ರಕ್ಷಣೆ ಪಡೆಯಲು ದೇವರ ಅನುಗ್ರಹ ಬೇಕೇ ಬೇಕು ಎಂದರು.

ದೇವರ ದರ್ಶನಕ್ಕೆ ಹೋಗಿದ್ದ ಕಾರಣಕ್ಕೆ ಶಿವಮೊಗ್ಗ ಬರುವುದು ತಡವಾಯಿತು, ಸಿಎಂ ಕುಮಾರಸ್ವಾಮಿ ಅವರು 48 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದ್ದಾರೆ, ಇಷ್ಟು ದೊಡ್ಡ ಮೊತ್ತದ ಸಾಲ ಮನ್ನಾ ಮಾಡಿದಾಗ ರಾಜ್ಯದ ಅಭಿವೃದ್ಧಿ ಕುಂಠಿತವಾಗಬಾರದು, ಅದನ್ನು ಸರಿದೂಗಿಸಿಕೊಂಡು ಹೋಗಬೇಕು, ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಸಹಕಾರ ಪಡೆದು ಸಾಲಮನ್ನಾ ಮಾಡಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಣ್ಣಪುಟ್ಟ ಗೊಂದಲವಿದೆ ಅದನ್ನು ಬಗೆಹರಿಸಿಕೊಳ್ಳುತ್ತಾರೆ.

HDD learn to god to save collation government

ಕಳೆದ 3 ತಿಂಗಳನಿಂದ ಸರ್ಕಾರ ಬೀಳಲಿದೆ ಎಂದು ಕೆಲವರು ಕಾಯುತ್ತಿದ್ದಾರೆ, ಸರ್ಕಾರ ಬೀಳಲಿದೆ ಎಂದು ಮುಹೂರ್ತ ಫಿಕ್ಸ್ ಮಾಡಿರುವವರಿಗೆ ನಿರಾಸೆ ಕಾದಿದೆ, 14 ಗಂಟೆಗಳ ಕಾಲ ರಾಜ್ಯದ ಮುಖ್ಯಮಂತ್ರಿ ಜನತಾ ದರ್ಶನ ಮಾಡಲು ಸಾಧ್ಯವಿಲ್ಲ ಆ ಕೆಲಸವನ್ನು ಕುಮಾರಸ್ವಾಮಿಯವರು ಮಾಡುತ್ತಿದ್ದಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+