Get Updates
Get notified of breaking news, exclusive insights, and must-see stories!

ಸದಾಶಿವ ಆಯೋಗ ವರದಿ ಅನುಷ್ಠಾನ: ಅಡ್ಡಗೋಡೆ ಮೇಲೆ ದೀಪವಿಟ್ಟ ಎಚ್ಡಿಕೆ

ಬೆಂಗಳೂರು, ಅಕ್ಟೋಬರ್ 12: ದಶಕಗಳಿಂದ ಸರ್ಕಾರದ ಕೋಲ್ಡ್ ಸ್ಟೋರೇಜ್ ನಲ್ಲಿ ಬಾಕಿ ಇರುವ ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗದ ಶಿಫಾರಸ್ಸಿನ ಅನುಷ್ಠಾನ ಕುರಿತಂತೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಡ್ಡ ಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸದಾಶಿವ ಆಯೋಗ ವರದಿ ಕುರಿತಂತೆ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಭೇಟಿ ಮಾಡಿದ ನಿಯೋಗದೊಂದಿಗೆ ಮಾತನಾಡಿದ ಕುಮಾರಸ್ವಾಮಿ ಸದಾಶಿವ ಆಯೋಗದ ಕುರಿತಂತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು.

ಈ ಮೂಲಕ ರಾಜ್ಯ ಸರ್ಕಾರ ಸದ್ಯಕ್ಕೆ ಯಾವುದೇ ಅವಸರದ ನಿರ್ಧಾರಕ್ಕೆ ಬರುವುದಿಲ್ಲ ಎಂಬ ಸಂದೇಶ ರವಾನಿಸಿದರು. ದಲಿತರಿಗೆ ಒಳ ಮೀಸಲು ಕಲ್ಪಿಸುವ ಕಲ್ಪಿಸುವ ಕುರಿತಂತೆ ನ್ಯಾ. ಎಜೆ ಸದಾಶಿವ ಆಯೋಗದ ವರದಿಗೆ ಸಂಬಂಧಿಸಿದ ಚರ್ಚೆ ಇದಾಗಿತ್ತು.

HDK assures govt will take appropriate decision on Sadashiva commission report

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೂ ಈ ಕುರಿತು ಸಮುದಾಯದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆದಿತ್ತು. ಆದರೆ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ದಲಿತರಲ್ಲೇ ವಿಭಿನ್ನ ಅಭಿಪ್ರಾಯವಿದೆ. ಎಡಗೈ ಸಮುದಾಯಕ್ಕೆ ಸೇರಿದವರು ವರದಿ ಅನುಷ್ಠಾನಕ್ಕೆ ಒತ್ತಡ ತರುತ್ತಿದ್ದರೆ, ಬಲಗೈ ಸಮುದಾಯದವರು ವಿರೋಧಿಸುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+