ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸದಾಶಿವ ಆಯೋಗ ವರದಿ ಅನುಷ್ಠಾನ: ಅಡ್ಡಗೋಡೆ ಮೇಲೆ ದೀಪವಿಟ್ಟ ಎಚ್ಡಿಕೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 12: ದಶಕಗಳಿಂದ ಸರ್ಕಾರದ ಕೋಲ್ಡ್ ಸ್ಟೋರೇಜ್ ನಲ್ಲಿ ಬಾಕಿ ಇರುವ ನ್ಯಾಯಮೂರ್ತಿ ಎಜೆ ಸದಾಶಿವ ಆಯೋಗದ ಶಿಫಾರಸ್ಸಿನ ಅನುಷ್ಠಾನ ಕುರಿತಂತೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಡ್ಡ ಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ.

ಸರ್ಕಾರಕ್ಕೆ ಎದುರಾಯ್ತಾ ಜಾತಿ ಗಣತಿ, ಸದಾಶಿವ ಆಯೋಗ ಬಿಕ್ಕಟ್ಟು ಸರ್ಕಾರಕ್ಕೆ ಎದುರಾಯ್ತಾ ಜಾತಿ ಗಣತಿ, ಸದಾಶಿವ ಆಯೋಗ ಬಿಕ್ಕಟ್ಟು

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸದಾಶಿವ ಆಯೋಗ ವರದಿ ಕುರಿತಂತೆ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಭೇಟಿ ಮಾಡಿದ ನಿಯೋಗದೊಂದಿಗೆ ಮಾತನಾಡಿದ ಕುಮಾರಸ್ವಾಮಿ ಸದಾಶಿವ ಆಯೋಗದ ಕುರಿತಂತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು.

ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯಿಸಿ ಸಚಿವರ ಮನೆಗಳಿಗೆ ಮುತ್ತಿಗೆ ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯಿಸಿ ಸಚಿವರ ಮನೆಗಳಿಗೆ ಮುತ್ತಿಗೆ

ಈ ಮೂಲಕ ರಾಜ್ಯ ಸರ್ಕಾರ ಸದ್ಯಕ್ಕೆ ಯಾವುದೇ ಅವಸರದ ನಿರ್ಧಾರಕ್ಕೆ ಬರುವುದಿಲ್ಲ ಎಂಬ ಸಂದೇಶ ರವಾನಿಸಿದರು. ದಲಿತರಿಗೆ ಒಳ ಮೀಸಲು ಕಲ್ಪಿಸುವ ಕಲ್ಪಿಸುವ ಕುರಿತಂತೆ ನ್ಯಾ. ಎಜೆ ಸದಾಶಿವ ಆಯೋಗದ ವರದಿಗೆ ಸಂಬಂಧಿಸಿದ ಚರ್ಚೆ ಇದಾಗಿತ್ತು.

HDK assures govt will take appropriate decision on Sadashiva commission report

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೂ ಈ ಕುರಿತು ಸಮುದಾಯದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆದಿತ್ತು. ಆದರೆ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ದಲಿತರಲ್ಲೇ ವಿಭಿನ್ನ ಅಭಿಪ್ರಾಯವಿದೆ. ಎಡಗೈ ಸಮುದಾಯಕ್ಕೆ ಸೇರಿದವರು ವರದಿ ಅನುಷ್ಠಾನಕ್ಕೆ ಒತ್ತಡ ತರುತ್ತಿದ್ದರೆ, ಬಲಗೈ ಸಮುದಾಯದವರು ವಿರೋಧಿಸುತ್ತಿದ್ದಾರೆ.

English summary
Chief minister H.D.Kumaraswamy has assured that the government will take appropriate decision on Sadashiva commission report on appropriate time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X