ಪರಿಶಿಷ್ಟ ನೌಕರರ ಬಡ್ತಿ: ಸಂಪುಟದಲ್ಲಿ ಚರ್ಚೆ ಎಂದ ಸಿಎಂ
ಬೆಂಗಳೂರು, ಆಗಸ್ಟ್ 1 : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಅಧಿಕಾರಿ, ಸಿಬ್ಬಂದಿಗಳ ಬಡ್ತಿ ವಿಚಾರವಾಗಿ ಸಚಿವ ಸಂಪುಟದ ಮುಂದೆ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ಬುಧವಾರ ತಿಳಿಸಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ವರ್ಗಗಳ ಮುಂಬಡ್ತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಗಳ ಅಧ್ಯಕ್ಷತೆಯಲ್ಲಿ ಇಂದು ನಡೆ ದ ಉನ್ನತ ಮಟ್ಟದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಅಧಿಕಾರಿ, ಸಿಬ್ಬಂದಿಗಳ ಬಡ್ತಿ ಸಂಬಂಧದಲ್ಲಿ ರಾಜ್ಯ ಸರ್ಕಾರ ಮಾಡಿರುವ ಕಾಯ್ದೆಗೆ ರಾಷ್ಟ್ರಪತಿಗಳ ಅನುಮೋದನೆ ದೊರೆತಿದ್ದರೂ ಉಚ್ಛ ನ್ಯಾಯಲಯದಲ್ಲಿ ವಿಚಾರಣಾ ಹಂತದಲ್ಲಿದೆ.
ಈ ಬಗ್ಗೆ ಸಂಪುಟದಲ್ಲಿ ಚರ್ಚಿಸಲಾಗುವುದು. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕಾ ಖರ್ಗೆ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ, ಶಿಕ್ಷಣ ಸಚಿವ ಎನ್. ಮಹೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಅಡ್ವೋಕೇ ಟ್ ಜನರಲ್ ಉದಯ್ ಹೊಳ್ಳ, ಕಾನೂನು ಕಾರ್ಯದರ್ಶಿ ಶ್ರೀನಿವಾಸ, ಸಮಾಜ ಕಲ್ಯಾಣ ಇ ಲಾಖೆ ಅ ಪರ ಮುಖ್ಯ ಕಾರ್ಯದರ್ಶಿ ಲಕ್ಷ್ಮಿ ನಾರಾಯಣ್ , ವಿವಿಧ ದಲಿತ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.












Click it and Unblock the Notifications