ಪಕ್ಷೇತರರ ಬೆಂಬಲ ವಾಪಸಾತಿಯಿಂದ ಸರ್ಕಾರಕ್ಕೆ ಏನೂ ಆಗಲ್ಲ: ಸಿಎಂ
ಬೆಂಗಳೂರು, ಜನವರಿ 15: ಜೆಡಿಎಸ್ ಕಾಂಗ್ರೆಸ್ ಮೈತ್ರಿಕೂಡ ಸರ್ಕಾರಕ್ಕೆ ಇಬ್ಬರು ಪಕ್ಷೇತರರಿಬ್ಬರು ಬೆಂಬಲ ವಾಪಸ್ ಪಡೆದಿದ್ದಕ್ಕೆ ಯಾವುದೇ ಆತಂಕವಿಲ್ಲ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ನಾನೀಗ ನಿರಾಳನಾಗಿದ್ದೇನೆ, ನನ್ನ ಸರ್ಕಾರಕ್ಕೆ ಬೇಕಾದ ಶಾಸಕರ ಸಂಖ್ಯಾಬಲವಿದೆ, ನನ್ನ ನಿಜವಾದ ಶಕ್ತಿ ಏನೆಂಬುದು ನನಗೆ ಗೊತ್ತು ಎಂದು ಸಮರ್ಥಿಸಿಕೊಂಡಿದ್ದಾರೆ.

ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್ ನಾಗೇಶ್ ಹಾಗೂ ರಾಣೆಬೆನ್ನೂರು ಕ್ಷೇತ್ರದ ಕೆಪಿಜೆಪಿ ಶಾಸಕ ಆರ್ ಶಂಕರ್ ತಮ್ಮ ಬೆಂಬಲ ವಾಪಸ್ ಪಡೆದ ಬೆನ್ನಲ್ಲೇ ಕೆಪಿಸಿಸಿ ಕರ್ನಾಟಕ ಉಸ್ತುವಾರಿ ಕೆಸಿ ವೇಣುಗೋಪಾಲ್ ತಂಗಿರುವ ಕುಮಾರಕೃಪಾ ಗೆಸ್ಟ್‌ಹೌಸ್‌ಗೆ ದಿಢೀರ್ ಧಾವಿಸಿದ ಕುಮಾರಸ್ವಾಮಿ ಈ ವೇಳೆ ಎದುರಾದ ಮಾಧ್ಯಮಗಳಿಗೆ ಉತ್ತರ ನೀಡುತ್ತಾ, ಇಬ್ಬರು ಶಾಸಕಉ ಬೆಂಬಲ ವಾಪಪಸ್ ಪಡೆದಿರುವುದರಿಂದ ಸರ್ಕಾರಕ್ಕೆ ಏನೂ ಆಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂಬೈನ ಹೋಟೆಲ್‌ನಲ್ಲಿರುವ ಇಬ್ಬರು ಶಾಸಕರು ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ. ಆದ್ದರಿಂದ, ಸಂಜೆಯ ಹೊತ್ತಿಗೆ ಇಬ್ಬರು ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆ ಇದೆ.ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದಿದ್ದಾರೆ. ಬಿಜೆಪಿ ನಮ್ಮ ಶಾಸಕರಿಗೆ ಹಣ ಮತ್ತು ಅಧಿಕಾರದ ಆಮಿಷವೊಡ್ಡಿದೆ.
ಈ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸಿದೆ. ಆದರೆ, ಸರ್ಕಾರ ಸುಭದ್ರವಾಗಿದೆ' ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.












Click it and Unblock the Notifications