ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಸಭಾ ಚುನಾವಣೆಗೆ ಉಪ ಚುನಾವಣೆಯೇ ಸೆಮಿಫೈನಲ್: ಎಚ್ಡಿಕೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 15: ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ನಡೆಯುವ ಐದು ಉಪ ಚುನಾವಣೆ ಸೆಮಿಫೈನಲ್ ಆಗಲಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟ ಸಂಪೂರ್ಣ ಮೇಲುಗೈ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಧು ಬಂಗಾರಪ್ಪ ಮೈತ್ರಿ ಕೂಟದ ಅಭ್ಯರ್ಥಿಯಾಗುತ್ತಿರುವುದು ದೇವರ ತೀರ್ಮಾನ, ದೈವ ಇಚ್ಛೆಯಿಂದಲೇ ಇಂಥಹದ್ದೊಂದು ಬೆಳವಣಿಗೆ ನಡೆದಿದೆ.

ಶಿವಮೊಗ್ಗ ಉಪ ಚುನಾವಣೆ : ನಾಮಪತ್ರ ಸಲ್ಲಿಸಿದ ಬಿ.ವೈ.ರಾಘವೇಂದ್ರ ಶಿವಮೊಗ್ಗ ಉಪ ಚುನಾವಣೆ : ನಾಮಪತ್ರ ಸಲ್ಲಿಸಿದ ಬಿ.ವೈ.ರಾಘವೇಂದ್ರ

ಜೆಡಿಎಸ್ ನ ಇಬ್ಬರು ಸಂಸದರು ಕೂಡ ವಿಧಾನಸಭೆ ಚುನಾವಣೆಯಲ್ಲಿ ಸೋತು ಲೋಕಸಭೆಗೆ ಸ್ಪರ್ಧಿಸಿ ಜಯಗಳಿಸಿರುವ ಉದಾಹರಣೆಗಳಿವೆ ಎಂದು ಸಿಎಸ್ ಪುಟ್ಟರಾಜು ಹಾಗೂ ಚೆಲುವರಾಯಸ್ವಾಮಿಯವರ ಹೆಸರನ್ನೂ ಹೇಳದೆ ಉಲ್ಲೇಖಿಸಿದ ಕುಮಾರಸ್ವಾಮಿ, ಮಧು ಬಂಗಾರಪ್ಪ ಕೂಡ ಅವರ ತಂದೆ ದಿವಂಗತ ಬಂಗಾರಪ್ಪನವರು ಸ್ಪರ್ಧಿಸಿದ್ದ ಶಿವಮೊಗ್ಗದಿಂದ ಲೋಕಸಭೆಗೆ ಆಯ್ಕೆಯಾಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

HDK defines by poll will be semi final for parliament election

ಮಧ್ಯರಾತ್ರಿಯೇ ದೇವೇಗೌಡರಿಂದ ಬಿ ಫಾರಂ ಪಡೆದ ಮಧು ಬಂಗಾರಪ್ಪ ಮಧ್ಯರಾತ್ರಿಯೇ ದೇವೇಗೌಡರಿಂದ ಬಿ ಫಾರಂ ಪಡೆದ ಮಧು ಬಂಗಾರಪ್ಪ

ಲೋಕಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಕಾಂಗ್ರೆಸ್ ಹಾಗೂ ದೇವೇಗೌಡರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಂಡಿದ್ದೇವೆ. ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಉಪ ಚುನಾವಣೆ ನಾಮಪತ್ರ ಪ್ರಕ್ರಿಯೆ ಆರಂಭವಾಗಿದೆ. ಅಪವಿತ್ರ ಮೈತ್ರಿ ಎಂದು ಬಿಜೆಪಿ ಕಠೋರ ಪದ ಬಳಕೆ ಮಾಡಿದೆ ಈ ಬಗ್ಗೆ ಜನತೆ ಚುನಾವಣೆಯಲ್ಲಿ ತೀರ್ಮಾನ ಮಾಡುತ್ತಾರೆ.

ಶಿವಮೊಗ್ಗ ಲೋಕಸಭಾ ಕಣದಲ್ಲಿ ಮಾಜಿ ಸಿಎಂಗಳ ಮಕ್ಕಳ ಕಾದಾಟ ಶಿವಮೊಗ್ಗ ಲೋಕಸಭಾ ಕಣದಲ್ಲಿ ಮಾಜಿ ಸಿಎಂಗಳ ಮಕ್ಕಳ ಕಾದಾಟ

ಸಮ್ಮಿಶ್ರ ಸರ್ಕಾರದಲ್ಲಿ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡಲಿಲ್ಲ ಎಂಬ ನೋವಿತ್ತು. ಆದರೆ ಈಗ ಲೋಕಸಭಾ ಅಭ್ಯರ್ಥಿಯಾಗಿ ಆಗಿದ್ದಾರೆ, ಈಗ ನನಗಿದ್ದ ಕೊರಗು ನಿವಾರಣೆಯಾಗಿದೆ. ಶಿವಮೊಗ್ಗ ಜನರ ಆಶೀರ್ವಾದ ಪಡೆದು ಮಧು ಗೆಲ್ಲುತ್ತಾರೆ ಎಂದರು.

English summary
Chief minister H.D.Kumaraswamy has defined five constituencies by election as semi finals for 2019 parliamentary elections and the JDS and Congress alliance will triumph the victory.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X