ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಣೆಗೆ ಕುಮಾರಬಾಣ
Recommended Video

ಬೆಂಗಳೂರು, ಅಕ್ಟೋಬರ್ 23: ರಾಜ್ಯ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ 150 ದಿನಗಳನ್ನು ಪೂರೈಸಿದ್ದು, ಐದು ತಿಂಗಳ ಆಡಳಿತದ ಒಂದು ಅವಲೋಕನ ಮಾಡಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಏನೇನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ರಸ್ತೆಗಳ ದುರಸ್ತಿ, ಅಭಿವೃದ್ಧಿ, ಮೇಲು ಸೇತುವೆ ನಿರ್ಮಾಣ, ಮೆಟ್ರೋ ಮೂರನೇ ಹಂತದ ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆ, ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಯೋಜನೆಯಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ.
ಈಗಾಗಲೇ ಬೆಂಗಳೂರು ರಸ್ತೆಗಳು ಸೇರಿದಂತೆ ವಿವಿಧ ಕಾರ್ಯಗಳ ಕುರಿತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಖದ್ದು ಸ್ಥಳಗಳಿಗೆ ಭೇಟಿ ನೀಡಿ ಅಧಿಕಾರಿಗೆ ಚುರುಕು ಮುಟ್ಟಿಸಿದ್ದಾರೆ.

ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮಗೊಳಿಸುವ 1450 ಕೋಟಿ ರೂ ಅಂದಾಜು ವೆಚ್ಚದಲ್ಲಿ ಒಟ್ಟು 102 ಕಿಲೋಮೀಟರ್ ಉದ್ದದ ಆರು ಕಾಡಿಡಾರ್ ಐದು ಹಂತಗಳಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.
ಈ ಯೋಜನೆಯ ಅನ್ವಿರಾನ್‌ಮೆಂಟ್ ಇಂಪ್ಯಾಕ್ಟ್ ಅಸೆಸ್ ಮೆಂಟ್ ವರದಿ ತಯಾರಿಸಲಾಗುತ್ತಿದೆ, ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲಾಗುವುದು, ನಂತರವೇ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಸುಮಾರು 6500 ಕೋಟಿ ರೂ. ವೆಚ್ಚದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಿದೆ. ಈ ಯೋಜನೆಗೆ ಹೈಬ್ರಿಡ್ ಆನ್ಯುಟಿ ಮಾದರಿಯಲ್ಲಿ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು.
ಭೂಸ್ವಾಧೀನ ಪ್ರಕ್ರಿಯೆಗೆ ಇಂದು ಅತಿ ಹೆಚ್ಚು ಅನುದಾನ ಅಗತ್ಯವಿದೆ. ಇದನ್ನು ಕಡಿಮೆಗೊಳಿಸಲು ಇರುವ ವಿವಿಧ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಇರುವ ಅಡೆತಡೆಗಳನ್ನು ನಿವಾರಿಸಲು ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.












Click it and Unblock the Notifications