ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎತ್ತಿನಹೊಳೆ ಯೋಜನೆಯಡಿ 527 ಕೆರೆ ಭರ್ತಿಗೆ ಎಚ್ಡಿಕೆ ಸೂಚನೆ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 6: ಎತ್ತಿನಹೊಳೆ ಯೋಜನೆಯಡಿ 5 ಜಿಲ್ಲೆಗಳ ವ್ಯಾಪ್ತಿಯಲ್ಲಿನ 527 ಕೆರೆಗಳ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಲು ಕೆರೆಗಳ ಹೂಳೆತ್ತಲು ಕ್ರಮ ಕೈಗೊಳ್ಳಬೇಕೆಂದು ಎಚ್.ಡಿ.ಕುಮಾರಸ್ವಾಮಿ ಸೂಚಿಸಿದರು.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಗೆ ಸಂಬಂಧಿಸಿದಂತೆ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಪಶ್ಚಿಮ ಘಟ್ಟಗಳಲ್ಲಿ ಹರಿದು ಅರಬ್ಬಿ ಸಮುದ್ರ ಸೇರುವ ಎತ್ತಿನಹೊಳೆ ಮತ್ತು ಅದರ ಉಪನದಿಗಳ ನೀರನ್ನು ಪೂರ್ವಾಭೀಮುಖವಾಗಿ ಹರಿಸಿ, ಬರ ಪೀಡಿತ ಜಿಲ್ಲೆಗಳಾದ ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರು ಮತ್ತು ಅಂತರ್ಜಲ ಮರುಪೂರಣಕ್ಕಾಗಿ ಎತ್ತಿನಹೂಳೆ ಯೋಜನೆಯನ್ನು ರೂಪಿಸಲಾಗಿದೆ.

ಕಾವೇರಿ ಕೃಪೆ: ಈ ಬಾರಿ ನೀರಿನ ಗದ್ದಲವಿರಲಿಕ್ಕಿಲ್ಲಕಾವೇರಿ ಕೃಪೆ: ಈ ಬಾರಿ ನೀರಿನ ಗದ್ದಲವಿರಲಿಕ್ಕಿಲ್ಲ

ಸಣ್ಣ ನೀರಾವರಿ ಇಲಾಖೆಯು, ಯೋಜನೆಯಡಿ ನೀರು ಪೂರೈಸಲು ಉದ್ದೇಶಿಸಿರುವ ಕೆರೆಗಳ ಪುನಶ್ಚೇತನವನ್ನು ಹಂತ ಹಂತವಾಗಿ ಯೋಜನೆಯ ಜೊತೆ ಸಮಾನಾಂತರವಾಗಿ ಕೈಗೊಳ್ಳಲು ಹಾಗೂ ಈ ನೀರನ್ನು ಬಳಸಿಕೊಳ್ಳಲು ಗ್ರಾಮೀಣಾಭಿವೃದ್ಧಿ ಇಲಾಖೆಯು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

HDK insists to fill 527 lakes under Yettinahole project

ಎತ್ತಿನ ಹೊಳೆ ಯೋಜನೆಗೆ ಮೂರು ಭೂಸ್ವಾಧೀನಾಧಿಕಾರಿಗಳ ಹುದ್ದೆಗಳು ಮಂಜೂರಾಗಿದ್ದು, ಇವರನ್ನು ತುರ್ತಾಗಿ ನೇಮಕ ಮಾಡುವಂತೆ ತಿಳಿಸಿದರು. ಯೋಜನೆಗೆ ಅವಶ್ಯವಿರುವ 21 ಹಳ್ಳಿಗಳ 5000 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳುವ ಹಾಗೂ ವಶಪಡಿಸಿಕೊಂಡಿರುವ ಭೂಮಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯಯೋಜನೆಯನ್ನು ರೂಪಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್, ಕೃಷಿ ಸಚಿವ ಶಿವಶಂಕರ ರೆಡ್ಡಿ, ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

English summary
Chief minister H.D.Kumaraswamy has insisted minor irrigation officials to take action to fill 527 lakes under Yettinahole project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X