ರಾಜ್ಯದಲ್ಲಿ ನೆರೆ-ಬರ: ಸಿಎಂ ನೇತೃತ್ವದ ನಿಯೋಗದಿಂದ ಮೋದಿ ಭೇಟಿ

ಬೆಂಗಳೂರು, ಸೆಪ್ಟೆಂಬರ್ 8: ರಾಜ್ಯದಲ್ಲಿ ನೆರೆ-ಬರಕ್ಕೆ ಸಂಬಂಧಿಸಿದಂತೆ ಎಚ್‌ಡಿ ಕುಮಾರಸ್ವಾಮಿ ನಿಯೋಗ ಸೆಪ್ಟೆಂಬರ್ 10ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ.

ಸೆಪ್ಟೆಂಬರ್ 10ರಂದು ಸೋಮವಾರ ಬೆಳಗ್ಗೆ 11.15ಕ್ಕೆ ಪ್ರಧಾನಿ ಭೇಟಿಗೆ ಸಮಯ ನಿಗದಿಯಾಗಿದೆ. ಪ್ರಧಾನಿ ಬಳಿ ಅತಿವೃಷ್ಟಿ, ಅನಾವೃಷ್ಟಿ ಪರಿಹಾರ ಕೇಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ, ಸಿಎಂ ನಿಯೋಗದಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಕೊಡಗು ಸಂಸದ ಪ್ರತಾಪ್ ಸಿಂಹ ಸೇರಿ 20 ಮಂದಿ ತೆರಳಲಿದ್ದಾರೆ.

ಈಗಾಗಲೇ ಕೊಡಗು ಪ್ರವಾಹಕ್ಕೆ ತುತ್ತಾಗಿ ನಲುಗಿ ಹೋಗಿದೆ, ಅಲ್ಲಿನ ಜನರು ಆಶ್ರಯ ಕಳೆದುಕೊಂಡು ಸಂತ್ರಸ್ತರ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಳ್ಳುತ್ತಿದ್ದಾರೆ.

HDK led delegation to meet PM for special package

ಮನೆ, ಆಸ್ತಿ ಪಾಸ್ತಿ ಎಲ್ಲವೂ ನೀರಿನಲ್ಲಿ ಕೊಚ್ಚಿ ಹೋಗಿದೆ, ಹೀಗಿರುವಾಗ ಕೇವಲ ರಾಜ್ಯ ಸರ್ಕಾರದಿಂದ ಎಲ್ಲವನ್ನೂ ಮಾಡುವುದಾದರೆ ನಿಜಕ್ಕೂ ಹೊರೆಯಾಗಲಿದೆ. ಹಾಗಾಗಿ ಕೇಂದ್ರ ಸರ್ಕಾರದ ಸಹಾಯವನ್ನು ಕೇಳಲು ರಾಜ್ಯ ಸರ್ಕಾರ ಮುಂದಾಗಿದೆ.

ಇನ್ನು ಸಾಕಷ್ಟು ಜಿಲ್ಲೆಗಳಲ್ಲಿ ಸಮರ್ಪಕವಾಗಿ ಮಳೆಯಾಗದ ಕಾರಣ 13 ಜಿಲ್ಲೆಗಳಲ್ಲಿ ಬರ ಇದೆ, ಸಾಕಷ್ಟು ಬೆಳಗಳು ನೀರು ಕಾಣದೆ ಒಳಗಿವೆ ರೈತರು ಕಂಗಾಲಾಗಿದ್ದಾರೆ ಈ ಪರಿಸ್ಥಿತಿಯನ್ನು ಪ್ರಧಾನಿಯವರಿಗೆ ತಿಳಿಸಲು ಎಚ್‌ಡಿಕೆ ಹೊರಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+